ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಪ್ರತಿಭಟನೆ; ಕಾರ್ಯಕರ್ತರು ವಶಕ್ಕೆ

Date:

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಮಲ್ಲೇಶ್ವರಂನಲ್ಲಿ ಕರವೇ ಶಿವರಾಮೇಗೌಡ ಬಣದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ ಕಾವೇರಿ ನೀರು ಬಿಡುಗಡೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರು ಕರವೇ ಮುಖಂಡರಾದ ಶಿವರಾಮೇಗೌಡ, ಸಾರಾ ಗೋವಿಂದು ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದೊಯ್ದರು.

ಇತ್ತ ಫ್ರೀಡಂ ಪಾರ್ಕ್‌ನಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದಲ್ಲಿ ಮತ್ತೊಂದು ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಬೇಕು. ತಮಿಳುನಾಡಿಗೆ ನೀರು ಹರಿಸಿದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕನ್ನಡ ಶಿಕ್ಷಕರಿಗೆ ಅನ್ಯಾಯವಾದರೆ ತೀವ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಕನ್ನಡ ಶಿಕ್ಷಕರ ಹುದ್ದೆಗಳನ್ನು ಕಡೆಗಣಿಸಿದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕನ್ನಡ ಭಾಷೆಯ ಪಾಠವನ್ನು ಸಮಾಜ ವಿಜ್ಞಾನ ಶಿಕ್ಷಕರಿಂದ ಬೋಧಿಸಲು ಅವಕಾಶ ಕಲ್ಪಿಸುವುದು ಕನ್ನಡ ಐಚ್ಛಿಕ ವಿಷಯದಲ್ಲಿ ಪದವಿ, ಬಿ.ಎಡ್. ಹಾಗೂ ಟಿಇಟಿ ಪೂರ್ಣಗೊಳಿಸಿ ಹಲವು ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.

“ಕನ್ನಡ ಶಿಕ್ಷಕರ ನೇಮಕಾತಿ ನಡೆಯದಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಕಚೇರಿಗಳಿಗೆ ಕಾಲಿಡಲು ನಾವು ಬಿಡುವುದಿಲ್ಲ. ಬೇಕಿದ್ದರೆ ಈಗಲೇ ಪೊಲೀಸ್ ಭದ್ರತೆ ಪಡೆದುಕೊಳ್ಳಲಿ,” ಎಂದು ಎಚ್ಚರಿಸಿದ್ದಾರೆ.

ಪ್ರಸ್ತುತ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುವ ಹಿನ್ನೆಲೆಯಲ್ಲಿ ತಾವು ಬಹಿರಂಗವಾಗಿಯೇ ಆಕ್ಷೇಪಣೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿರುವ ಅವರು, ಇದನ್ನು ಆಕ್ಷೇಪಣೆ, ಎಚ್ಚರಿಕೆ ಅಥವಾ ಬೆದರಿಕೆ ಎಂದು ಹೇಗೆ ಬೇಕಾದರೂ ಪರಿಗಣಿಸಬಹುದು. ಆದರೆ ಕನ್ನಡ ಶಿಕ್ಷಕರಿಗೆ ಅನ್ಯಾಯವಾದರೆ ಅದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕನ್ನಡ ಐಚ್ಛಿಕ ವಿಷಯದಲ್ಲಿ ಅಗತ್ಯ ವಿದ್ಯಾರ್ಹತೆಗಳನ್ನು ಪಡೆದು ವರ್ಷಗಳಿಂದ ಶಿಕ್ಷಕರ ನೇಮಕಾತಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿರುವ ನಾರಾಯಣಗೌಡ, ಈ ಬೆಳವಣಿಗೆಯ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ಇಲ್ಲವೇ ಅಥವಾ ಅಧಿಕಾರಿಗಳೇ ಎಲ್ಲ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಕೂಡಲೇ ಅಧಿಸೂಚನೆಯಲ್ಲಿರುವ ಲೋಪವನ್ನು ಸರಿಪಡಿಸಬೇಕು. ಇಲ್ಲವಾದರೆ ಅದರ ಪರಿಣಾಮವನ್ನು ಸರ್ಕಾರವೂ ಎದುರಿಸಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...