ಶಿವಮೊಗ್ಗ | ಪ್ರತಿಭಟನೆ ವೇಳೆ ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನ

Date:

ಕಾಂಗ್ರೆಸ್‌ ವಿರುದ್ಧ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ವಿಧಾನ ಪರಿಷತ್‌ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನರಾಗಿದ್ದಾರೆ. ಘಟನೆ ಶಿವಮೊಗ್ಗದ ಸೀನಪ್ಪ ಶೆಟ್ಟಿ ಸರ್ಕಲ್‌ನಲ್ಲಿ ನಡೆದಿದೆ.

- Advertisement -

ನಗರದ ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಮೃತರ ಸ್ವಗ್ರಾಮ ಮತ್ತೂರಿಗೆ ಮೃತದೇಹವನ್ನು ತೆಗೆದುಕೊಂಡು ಹೋಗಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೀಟಾಗಿಲ್ಲ ಎನ್ನುವುದು ಗೊತ್ತಿದ್ದೂ ಭಂಡತನ ಮೆರೆದ ಬಿಜೆಪಿ

ವಿಪಕ್ಷ ಬಿಜೆಪಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು.ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್‌ ಬೆಲೆ 3 ರೂ. ಹಾಗೂ ಡಿಸೇಲ್‌ ಬೆಲೆ 3.5 ರೂ.ಗಳಿಗೆ ಹೆಚ್ಚಿಸಿತ್ತು.

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹೃದಯಾಘಾತವಾಗಿ ಬಿಜೆಪಿಯ ಮಾಜಿ ವಿಧಾನ ಪರಿಷತ್‌ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನರಾಗಿದ್ದಾರೆ.

ಎಂ ಬಿ ಭಾನುಪ್ರಕಾಶ್ ನಿಧನಕ್ಕೆ  ವಿಪಕ್ಷ ನಾಯಕ ಆರ್‌ ಅಶೋಕ್‌  ಸಂತಾಪ ಸೂಚಿಸಿದ್ದಾರೆ.ಹಿರಿಯರು, ನನ್ನ ಆತ್ಮೀಯರು, ಮಾರ್ಗದರ್ಶಕರು ಆದ ಶ್ರೀ ಎಂ.ಬಿ.ಭಾನುಪ್ರಕಾಶ್ ಅವರ ಹಠಾತ್ ನಿಧನದ ಸುದ್ದಿ ತೀವ್ರ ಆಘಾತ ಮೂಡಿಸಿದೆ. ತಮ್ಮ ಜೀವನದುದ್ದಕ್ಕೂ ಜನಪರ ಹೋರಾಟ, ಸಂಘರ್ಷ, ಸಂಘಟನೆಯಲ್ಲೇ ಕಳೆದ ಭಾನುಪ್ರಕಾಶ್ ಅವರು ತಮ್ಮ ಕೊನೆ ಉಸಿರನ್ನೂ ಹೋರಾಟದಲ್ಲೇ ಕಳೆದಿದ್ದು ಅವರ ಹೋರಾಟದ ಬದುಕಿನ ದ್ಯೋತಕವಾಗಿದೆ.

ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ ತಮ್ಮ ಸರಳತೆ, ಸಜ್ಜನಿಕೆಗೆ ಹೆಸರಾಗಿದ್ದ ಭಾನುಪ್ರಕಾಶ್ ಅವರು ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಕುಟುಂಬ ಸದಸ್ಯರು, ಬಂಧು-ಬಳಗ ಹಾಗು ಸ್ನೇಹಿತರಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...