ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ವೆಬ್ ಪೋರ್ಟಲ್‌ ಲೋಕಾರ್ಪಣೆ

Date:

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ (KCCDC) ತನ್ನ ಹೊಸ ಸಾಲ, ಸಹಾಯಧನ ಹಾಗೂ ಕಲ್ಯಾಣ ಯೋಜನೆಗಳು ಮತ್ತು ಅಧಿಕೃತ ವೆಬ್ ಪೋರ್ಟಲ್‌ನ ಲೋಕಾರ್ಪಣೆ ಇಂದು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಕೆಎಂಡಿಸಿ ಭವನ ನೆರವೇರಿಸಿತು.

- Advertisement -

ಕಾರ್ಯಕ್ರಮವನ್ನು ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸಿದರು. “ಕರ್ನಾಟಕ ಸರ್ಕಾರವು ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಎಂಬ ಧೈರ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮಾನ್ಯ ಮುಖ್ಯಮಂತ್ರಿ ಅವರು ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಿ, ವಿಶೇಷ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದಾರೆ. ಅದೇ ರೀತಿಯಲ್ಲಿ, ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಹಿತಕ್ಕಾಗಿ ಮತ್ತು ಅವರ ಸಂಸ್ಥೆಗಳ ಬಲವರ್ಧನೆಗಾಗಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಮುಖ್ಯಮಂತ್ರಿಗಳವರು ನಿಗಮಕ್ಕೆ ನೀಡಿರುವ ₹250 ಕೋಟಿಯ ಅನುದಾನ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಉಪಯೋಗವಾಗಲೆಂದು ನಾನು ಆಶಿಸುತ್ತೇನೆ” ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ನಿಗಮದ ಹೊಸ ಯೋಜನೆಗಳು ಕ್ರಿಶ್ಚಿಯನ್ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿ ಎಂದು ಶುಭಾಶಯ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ನಿಗಮದ ಅಧ್ಯಕ್ಷ ಪ್ರೊ. ಎಸ್. ಜಾಫೆಟ್, ಈ ನಿಗಮದ ಸ್ಥಾಪನೆಗೆ ಕಾರಣರಾದ ಮುಖ್ಯಮಂತ್ರಿ, ಸಚಿವರು, ಸರ್ಕಾರ ಹಾಗೂ ಕ್ರಿಶ್ಚಿಯನ್ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿ, ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಬದ್ಧತೆಯನ್ನು ವ್ಯಕ್ತಪಡಿಸಿದರು. ಈ ನಿಗಮದ ಯೋಜನೆಗಳ ಬಗ್ಗೆ ಚರ್ಚ್‌ಗಳು, ಸಂಸ್ಥೆಗಳು ಮತ್ತು ಮುಖಂಡರು ಹೆಚ್ಚಿನ ಪ್ರಚಾರ ನೀಡುವುದರ ಮೂಲಕ ಅರ್ಹ ವ್ಯಕ್ತಿಗಳು ಈ ಯೋಜನೆಗಳ ಪ್ರಯೋಜನವನ್ನು ಪಡೆಯಲು ಸಹಕಾರ ನೀಡುವಂತೆ ವಿನಂತಿಸಿದರು.

ಈ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಟೋನಿ ಮರಿಯಾ ಇಮ್ಯಾನ್ಯುಯಲ್, ನಿರ್ದೇಶಕ ಮಂಡಳಿಯ ಸದಸ್ಯ ಸಂಜೀವ್ ಕುಮಾರ್ ಜಾಗೀರ್ದಾರ್, ಪ್ರಶಾಂತ್ ರಾಜ್ ಜತ್ತನ್ನ, ಹರ್ಷ ಮೆಲ್ವಿನ್ ಲಾಸ್ರಾದೊ, ಸಂದೀಪ್ ಕೆ.ಸಿ. ಜೋಸೆಫ್ ಕುಮಾರ್, ಜಿ.ಜೆ. ರವಿಕುಮಾರ್, ಜೆ. ಕ್ಷೇವಿಯರ್. ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರು, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಅಲ್ಪಸಂಖ್ಯಾತರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...