ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ರಾಜ್ಯ ಸರ್ಕಾರ

Date:

Advertisements

ಕರ್ನಾಟಕದಲ್ಲಿ ಡೆಂಘೀ ಪ್ರಕರಣಗಳು ಅಧಿಕವಾಗುತ್ತಿರುವ ನಡುವೆ ರಾಜ್ಯ ಸರ್ಕಾರವು ಮಂಗಳವಾರ ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದೆ.

ಹಾಗೆಯೇ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ಗೆ ತಿದ್ದುಪಡಿ ಮಾಡಿದ್ದು, ಆಗಸ್ಟ್ 31ರ ಕರ್ನಾಟಕ ಗೆಜೆಟ್​​ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಇನ್ನು ಮುಂದೆ ನೈರ್ಮಲ್ಯ(ಸ್ವಚ್ಚತೆ) ಕಾಪಾಡದವರಿಗೆ ದಂಡ ಬೀಳಲಿದೆ.

ಮನೆಗಳಿಗೆ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನಿಯಮ ಉಲ್ಲಂಘನೆ ಮಾಡಿದರೆ 400 ರೂಪಾಯಿ ದಂಡ, ನಗರ ಪ್ರದೇಶ ಗ್ರಾಮಾಂತರದಲ್ಲಿ ಓಳಾಂಗಣ ಹಾಗೂ ಹೊರಾಂಗಣಕ್ಕೆ 200 ರೂಪಾಯಿ ದಂಡ ವಿಧಿಸಲಾಗುತ್ತದೆ.

Advertisements

ಹೋಂ ಸ್ಟೇ, ರೆಸಾರ್ಟ್, ಹೋಟೆಲ್, ರೆಸ್ಟೋರಂಟ್, ಲಾಡ್ಜ್, ಮಾರ್ಕೆಟ್, ಸೂಪರ್ ಮಾರ್ಕೆಟ್, ಮಾಲ್, ಪಾರ್ಕ್, ಥಿಯೇಟರ್, ಕಾರ್ಖಾನೆ, ಕೈಗಾರಿಕೆ, ಶಾಲೆಗಳು, ಕನ್ವೆಷನ್ ಹಾಲ್, ವಾಣಿಜ್ಯ ಸಂಸ್ಥೆಗಳು, ಬೀದಿ ಬದಿ ತೆಂಗಿನಕಾಯಿ ಮಾರಾಟ, ಮೊದಲಾದವು ಕಡೆಗಳಲ್ಲಿ ನಿಯಮವನ್ನು ಉಲ್ಲಂಘಿಸಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಗ್ರಾಮಾಂತರ ಭಾಗದಲ್ಲಿ 500 ರೂಪಾಯಿ ದಂಡ ವಿಧಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಮಂಡ್ಯ | ಡೆಂಘೀ ಬಗ್ಗೆ ಶಾಲೆ-ಕಾಲೇಜುಗಳಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕುಮಾರ್

ತೆರೆದ ಸ್ಥಳಗಳಲ್ಲಿ ಡೆಂಘೀ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿದರೆ- ನಗರದ ಪ್ರದೇಶದಲ್ಲಿ 2 ಸಾವಿರ ರೂಪಾಯಿ ದಂಡ, ಗ್ರಾಮಾಂತರದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.

ಡೆಂಘೀ ನಿಯಂತ್ರಣ: ನಿಯಮಗಳನ್ನು ತಿಳಿಯಿರಿ

ಆಯಾ ಜಾಗದಲ್ಲಿ ಸೊಳ್ಳೆ ಬಾರದಂತೆ ಆ ಜಾಗದ ಮಾಲೀಕರು ಕ್ರಮ ವಹಿಸಬೇಕಾಗುತ್ತದೆ. ಹಾಗೆಯೇ ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡಬಾರದು. ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು.

ಸ್ವತ್ತಿನ ಮಾಲೀಕರು ನಿಗಾ ವಹಿಸದಿದ್ದರೆ, ಸಂಬಂಧ ಪಟ್ಟ ಅಧಿಕಾರಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು. ರಾಸಾಯನಿಕವನ್ನು ಸಿಂಪಡಿಸಿ, ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟ ಸ್ವತ್ತಿನ ಮಾಲೀಕರು ನೀಡುವಂತೆ ಕ್ರಮ ವಹಿಸಬೇಕು.

ಬಿಬಿಎಂಪಿ ಮತ್ತು ಮಂಗಳೂರಿನಲ್ಲಿ ತೆರೆದ ಸ್ಥಳದಲಿ ನಿಂತಿರುವ ನೀರು ತೆರವು ಮಾಡುವ ಜವಾಬ್ದಾರಿಯನ್ನು ಆಯಾ ಮಾಲೀಕರೇ ಹೊರಬೇಕು. ಸರಿಯಾಗಿ ಡೆಂಘೀ ನಿಯಂತ್ರಣ ಕ್ರಮಕೈಗೊಳ್ಳಲಾಗುತ್ತಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸಬೇಕು.

ನಿಯಮವನ್ನು ಉಲ್ಲಂಘಿಸಿದವರಿಗೆ ಈ ಮೇಲೆ ತಿಳಿಸಿದಂತೆ ದಂಡ ವಿಧಿಸಲಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X