ಹಿಂದಿ ಪರ ಅರ್ಜಿ ವಜಾ: ‘ಪ್ರಚಾರಕ್ಕಾಗಿ ಪಿಐಎಲ್ ಸಲ್ಲಿಕೆ’ ಎಂದು ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

Date:

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ‘ಪ್ರಚಾರಕ್ಕಾಗಿ ಪಿಐಎಲ್ ಸಲ್ಲಿಕೆ’ ಮಾಡಲಾಗಿದೆ ಎಂದು ಅಭಿಪ್ರಾಯಿಸಿರುವ ಹೈಕೋರ್ಟ್ ಅರ್ಜಿದಾರರಿಗೆ ಬರೋಬ್ಬರಿ ₹1 ಲಕ್ಷ ದಂಡ ವಿಧಿಸಿದೆ.

- Advertisement -

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ. ಇದನ್ನು ಪ್ರಶ್ನಿಸಿ ಬೆಂಗಳೂರಿನ ಎಚ್‌ ಎನ್‌ ಚಂದನಾ ಮತ್ತು ಎಸ್ ವೆಂಕಟೇಶ್ ಪಿಐಎಲ್ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ಪೀಠವು ಅರ್ಜಿ ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ ಪರ ಹೇಳಿಕೆ: ರೊಚ್ಚಿಗೆದ್ದ ಕರವೇಯಿಂದ ಶೋಭಾ ಕರಂದ್ಲಾಜೆ ಪ್ರತಿಕೃತಿ ದಹನಕ್ಕೆ ಯತ್ನ

ಸಚಿವ ಮಧು ಬಂಗಾರಪ್ಪ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಆದ್ದರಿಂದ ನ್ಯಾಯಾಲಯವು ವಿಶೇಷ ವ್ಯಾಪ್ತಿಯ ಅಧಿಕಾರ ಬಳಸಿ ಈ ಹೇಳಿಕೆಯನ್ನು ವಜಾಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಆದರೆ ಈ ಅರ್ಜಿ ವಿಚಾರಣೆ ನಡೆಸಿದ ಪೀಠ ಬರೀ ಪ್ರಚಾರಕ್ಕಾಗಿ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿತು.

ಹಾಗೆಯೇ ಅರ್ಜಿದಾರರಿಗೆ ₹50,000 ದಂಡ ವಿಧಿಸಿ ಅರ್ಜಿ ವಜಾಗೊಳಿಸಿತು. ಈ ಮೊತ್ತವನ್ನು ಎರಡು ವಾರಗಳಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿ ಮಾಡಬೇಕು. ಅರ್ಜಿದಾರರು ಗಡುವಿನ ಒಳಗಾಗಿ ದಂಡ ಪಾವತಿಸದಿದ್ದರೆ ಭೂಕಂದಾಯ ಬಾಕಿಯಾಗಿ ವಸೂಲಿ ಮಾಡಲು ಜಿಲ್ಲಾಧಿಕಾರಿಗೆ ಆದೇಶ ಕಳುಹಿಸಿಕೊಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಪತ್ರಿಕೆಗಳ ವರದಿಯಲ್ಲಿ ಇರುವುದು ಮೂರು ಪದಗಳು ಮಾತ್ರ. ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡಲಾಗುತ್ತದೆ ಎಂದು ವರದಿಯೇ ಆಗಿಲ್ಲ. ಆದ್ದರಿಂದ ದಂಡವನ್ನು ₹1 ಲಕ್ಷಕ್ಕೆ ಏರಿಕೆ ಮಾಡಲಾಗುತ್ತಿದೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ʼಪಾಸ್ ವಿತೌಟ್ ಹಿಂದಿʼ ಕಾನೂನು ಜಾರಿಯಾಗದಿದ್ದರೆ ಪರೀಕ್ಷಾ ಕೇಂದ್ರಗಳಿಗೆ ನುಗ್ಗುವ ಎಚ್ಚರಿಕೆ

ಅರ್ಜಿದಾರರ ಪರ ವಕೀಲರ ಮರು ವಾದದ ಬಳಿಕ ದಂಡದ ಮೊತ್ತವನ್ನು ಏರಿಸಿದ ಹೈಕೋರ್ಟ್, “ಇದು ಪ್ರಚಾರಕ್ಕಾಗಿ ಸಲ್ಲಿಸಿದ ಅರ್ಜಿ. ವಿವಾದಾತ್ಮಕ ವಿಷಯದ ಬಗ್ಗೆ ಚರ್ಚೆಯಾಗುತ್ತಿರುವಾಗ ವರದಿಯಾಗದ ಹೇಳಿಕೆ ಆಧಾರದಲ್ಲಿ ಅರ್ಜಿ ಸಲ್ಲಿಸಲಾಗಿದೆ” ಎಂದು ಅಭಿಪ್ರಾಯಿಸಿದೆ. ಇನ್ನು ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಹಾಜರಿದ್ದರು.

ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯನ್ನು ನಡೆಸಿ, ” ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್‌ಗಳನ್ನು (A, B, C, D) ಮಾತ್ರ ನೀಡಲಾಗುವುದು. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರವನ್ನು ಜಾರಿಗೆ ತರಲಾಗುವುದು” ಎಂದು ಹೇಳಿದ್ದರು.

ಅದರಂತೆ ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಮೊತ್ತಕ್ಕೆ ಪರಿಗಣಿಸುವುದಿಲ್ಲ. ಇದರಿಂದ ಎಸ್‌ಎಸ್‌ಎಲ್‌ಸಿ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಲಿವೆ. ಹಾಗೆಯೇ ತೃತೀಯ ಭಾಷಾ ವಿಷಯದಲ್ಲಿ ಇನ್ನು ಮುಂದೆ ‘ಪಾಸು’ ಅಥವಾ ‘ಫೇಲು’ ಎಂಬ ವ್ಯವಸ್ಥೆ ಇರುವುದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...