ಹೈಕೋರ್ಟ್ ತಿರಸ್ಕರಿಸಿದ್ದ ಅಪೂರ್ಣ ತನಿಖಾ ವರದಿ ಪ್ರಕಟ | ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ₹10 ಲಕ್ಷ ದಂಡ!

Date:

ಜಿಲ್ಲಾ ನ್ಯಾಯಾಧೀಶರೋರ್ವರ ವಿರುದ್ಧ ನಡೆಸಲಾಗಿದ್ದ ತನಿಖೆಯ ಅಪೂರ್ಣ ತನಿಖಾ ವರದಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದರೂ, ಅದನ್ನು ಪತ್ರಿಕೆಯಲ್ಲಿ ಪ್ರಕಟಿಸಿದ್ದಕ್ಕೆ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ನ ಮಾಲೀಕರಿಗೆ ಕರ್ನಾಟಕ ಹೈಕೋರ್ಟ್ ಬರೋಬ್ಬರಿ 10 ಲಕ್ಷ ದಂಡ ವಿಧಿಸಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

ನ್ಯಾಯಮೂರ್ತಿ ಎನ್‌ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠವು, ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆ’ಯನ್ನು ಪ್ರಕಟಿಸುವ ಎಕ್ಸ್‌ಪ್ರೆಸ್ ಪಬ್ಲಿಕೇಷನ್ಸ್‌ (ಮಧುರೈ) ಲಿಮಿಟೆಡ್‌ ಮಾಲೀಕರಿಗೆ ಈ ದಂಡ ವಿಧಿಸಿದ್ದು, ಇದನ್ನು ಮುಂದಿನ ಎರಡು ತಿಂಗಳೊಳಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

30.05.2013ರಂದು ಪ್ರಕಟವಾದ ತನಿಖಾ ವರದಿಯು ಪತ್ರಿಕೆಗೆ ಹೇಗೆ ಲಭ್ಯವಾಯಿತು ಎಂಬುದರ ಕುರಿತು ಹೈಕೋರ್ಟ್‌ನಿಂದ ತನಿಖೆ ನಡೆಸುವಂತೆಯೂ ನ್ಯಾಯಾಲಯವು ಇದೇ ವೇಳೆ ಆದೇಶದಲ್ಲಿ ಉಲ್ಲೇಖ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಯು ಜವಾಬ್ದಾರಿಯುತ ಪತ್ರಿಕೆ. ಆದರೆ ಈ ಪ್ರಕರಣದಲ್ಲಿ ಅದಕ್ಕೆ ಹೊಂದಿಕೆಯಾಗದ ರೀತಿಯಲ್ಲಿ ವರ್ತಿಸಿದೆ ಮತ್ತು ಅದರ ವರದಿಗಾರರು ಮತ್ತು ಸಂಪಾದಕರು ಸಹ ಸ್ವೀಕಾರಾರ್ಹವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ” ಎಂದು ನ್ಯಾಯಾಲಯವು ಹೇಳಿದೆ.

ದೇಶದ ಪ್ರಮುಖ ಪತ್ರಿಕೆಯೊಂದು ತಾನು ರಿಜಿಸ್ಟ್ರಾರ್ ಜನರಲ್ ಅವರನ್ನು ಸಂಪರ್ಕಿಸಿರುವುದಾಗಿ ಒಪ್ಪಿಕೊಂಡಿದ್ದು, ವಿವಾದಿತ ಲೇಖನವನ್ನು ಪ್ರಕಟಿಸುವ ಮೊದಲು ಅರ್ಜಿದಾರರಿಗೆ ವಿಚಾರಣೆಗೆ ಸಂಬಂಧಿಸಿದ ಸಂಪೂರ್ಣ ಕಾರ್ಯವಿಧಾನದ ಬಗ್ಗೆ ತನಗೆ ತಿಳಿದಿಲ್ಲ ಎಂದು ಹೇಳಲು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ.

ಏನಿದು ಪ್ರಕರಣ?

30.04.2014 ರಂದು ನಿವೃತ್ತಿ ಹೊಂದಿದ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೋರ್ವರಿಗೆ ಹಣಕಾಸಿನ ಅವ್ಯವಹಾರಗಳನ್ನು ಹೊರತುಪಡಿಸಿ ಇಬ್ಬರು ಸ್ಟೆನೋಗ್ರಾಫರ್ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಕೆಲವು ಆರೋಪಗಳು ಕೇಳಿಬಂದಿದ್ದವು.

ಈ ಬಗ್ಗೆ ನ್ಯಾಯಾಲಯದ ಆಂತರಿಕ ವಿಚಾರಣಾ ಸಮಿತಿಯು ತನಿಖೆ ನಡೆಸಿತ್ತು. 30.05.2013ರಂದು ವಿಚಾರಣಾ ಪ್ರಾಧಿಕಾರದ ವರದಿಯನ್ನು ಸ್ವೀಕರಿಸದಿರಲು ಹೈಕೋರ್ಟ್‌ ಆಡಳಿತ ಸಮಿತಿಯು ತೀರ್ಮಾನಿಸಿತ್ತು. ಅಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ತನಿಖಾ ವರದಿಯನ್ನು ಗೌಪ್ಯವಾಗಿಡಲಾಗಿತ್ತು. ಈ ನಡುವೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯು 20.12.2013ರಂದು ಪತ್ರಿಕೆಯ ಮುಖಪುಟದಲ್ಲಿ, “ಸ್ಟೆನೋಗ್ರಾಫರ್ ಜೊತೆ ಅನಿರೀಕ್ಷಿತ ಅನ್ಯೋನ್ಯತೆಯಲ್ಲಿ ನ್ಯಾಯಾಧೀಶ ತಪ್ಪಿತಸ್ಥ’: ಹೈಕೋರ್ಟ್‌ ವರದಿ(Judge Guilty in ‘Unexpected Intimacy with Steno’: HC Report)” ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಿತ್ತು. ಇದರ ವಿರುದ್ಧ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ| ತಿರುಪತಿಗೆ ತೆರಳುತ್ತಿದ್ದಾಗ ಅಪಘಾತ; ನಾಲ್ವರು ಸಾವು, 6 ಗಾಯ

ತಿರುಪತಿಗೆ ಹೋಗುತ್ತಿದ್ದವರ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು...

ಖಾಸಗಿ ಶಾಲಾ ಶುಲ್ಕ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ

ಖಾಸಗಿ ಶಾಲೆಗಳು ನಿಗದಿಪಡಿಸಿರುವ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಕರಿಗೆ...

ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ದೇವೇಗೌಡರು : ಸಿದ್ದರಾಮಯ್ಯ ಆರೋಪ

ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಹೆಚ್...