ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ಷರತ್ತು ವಿಧಿಸಿ ಸಮೀಕ್ಷೆಗೆ ಅನುಮತಿ

Date:

Advertisements

ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೇ, ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತು ವಿಧಿಸಿ ಸಮೀಕ್ಷೆ ಮುಂದುವರಿಸಲು ಅವಕಾಶ ನೀಡಿದೆ. ಈ ಬಗ್ಗೆ ಮಧ್ಯಂತರ ಆದೇಶ ನೀಡಿದೆ.

ಇದು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಹಾಗೂ ರಾಜ್ಯ ಸರ್ಕಾರಕ್ಕೆ ಸಿಕ್ಕ ರೀಲೀಫ್ ಆಗಿದೆ. ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಗೂ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಪರವಾಗಿ ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ವಾದಮಂಡಿಸಿದ್ದರು. ಹೈಕೋರ್ಟ್ ಸಿಜೆ ವಿಭು ಭಕ್ರು ಅವರ ಪೀಠದಲ್ಲಿ ಕಳೆದ ಮೂರು ದಿನದಿಂದ ವಾದ-ಪ್ರತಿವಾದ ನಡೆದಿತ್ತು.

ಅಂತಿಮವಾಗಿ ಈಗ ಹೈಕೋರ್ಟ್ ಸಮೀಕ್ಷೆಯನ್ನು ಮುಂದುವರಿಸಲು ಗ್ರೀನ್ ಸಿಗ್ನಲ್ ನೀಡಿದೆ. ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ರಾಜ್ಯ ಒಕ್ಕಲಿಗರ ಸಂಘ, ಬ್ರಾಹ್ಮಣ ಮಹಾಸಭಾ ಸೇರಿದಂತೆ ಕೆಲವು ಸಂಘಟನೆಗಳು ಹೈಕೋರ್ಟ್ ಗೆ ಮನವಿ ಮಾಡಿದ್ದವು. ಆದರೇ, ಹೈಕೋರ್ಟ್ ಈಗ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಹೀಗಾಗಿ ಸಮೀಕ್ಷೆ ಮುಂದುವರಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

ದೀರ್ಘಕಾಲ ವಾದ, ಪ್ರತಿವಾದ ಆಲಿಸಿದ ಕೋರ್ಟ್‌, ಪೀಠ – ಮೇಲಿನದನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ಸಮೀಕ್ಷೆಯನ್ನು ನಾವು ನಿಷೇಧಿಸಲು ಸಾಧ್ಯವಿಲ್ಲ. ಆದಾಗ್ಯೂ ಸಂಗ್ರಹಿಸಿದ ದತ್ತಾಂಶವನ್ನು ಯಾವುದೇ ವ್ಯಕ್ತಿ ಬಹಿರಂಗಪಡಿಸಬಾರದು ಎಂದು ಸೂಚಿಸಿದೆ.

ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ ಮತ್ತು ಗೌಪ್ಯವಾಗಿಡಲಾಗಿದೆ ಎಂದು ಆಯೋಗವು ಖಚಿತಪಡಿಸಿಕೊಳ್ಳಬೇಕು. ಈ ಪ್ರಕರಣ ಇತ್ಯರ್ಥವಾಗುವರೆಗೆ ಯಾವುದೇ ಕಾರಣಕ್ಕೂ ಸಂಗ್ರಹಿಸಿದ ಮಾಹಿತಿ ಸೋರಿಕೆ ಆಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗ ಅಫಿಡವಿಟ್‌ ಸಲ್ಲಿಸಬೇಕು. ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಷರತ್ತು ವಿಧಿಸಿ ಡಿಸೆಂಬರ್ ಎರಡನೇ ವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X