ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

Date:

ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆಯಾದ ಸುಹಾಸ್‌ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.

- Advertisement -

ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್‌ನಲ್ಲಿ ಇತ್ತೀಚೆಗೆ ಕೊಲೆಯಾದ ರೌಡಿಶೀಟರ್ ಸುಹಾಸ್ ಶೆಟ್ಟಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ದ್ವೇಷ ಭಾಷಣ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಬಂಟ್ವಾಳ | ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಈ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ ಪ್ರಚೋದನಾತ್ಮಕವಾಗಿ ಭಾಷಣ ಮಾಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಬಂಟ್ವಾಳ ಗ್ರಾಮೀಣ ಠಾಣೆಗೆ ಪಿಎಸ್ಐ ಟಿ ಮಂಜುನಾಥ್‌ ದೂರು ನೀಡಿದ್ದಾರೆ.

“ರೌಡಿಗಳಾಗಿರಲಿ ಅವರೂ ದೇಶಪ್ರೇಮಿಗಳು. ಅವರು ಧರ್ಮ ರಕ್ಷಣೆ ಮಾಡುವವರು. ಮನುಷ್ಯ ಇವತ್ತಲ್ಲಾ ನಾಳೆ ಸಾಯುವುದೇ. ಅದಕ್ಕೆ ನೀವು ಹೆದರಬೇಕಾಗಿಲ್ಲ. ಇದನ್ನು ಸುಹಾಸ ನೆನಪಿಟ್ಟುಕೊಂಡು ಹೋರಾಟ ಮಾಡಿದ್ದಾನೆ” ಎಂದು ಪ್ರಭಾಕರ್ ಭಟ್ ಹೇಳಿದ್ದರು.

“ಬ್ಯಾರಿಯೇ ಮತಾಂತರ ಮಾಡಲಿಕ್ಕೆ ಪ್ರೇರಣೆ ನೀಡುವಂಥದ್ದು, ಬ್ಯಾರಿಯೇ ಆಕ್ರಮಣ ಮಾಡಿರುವುದು ತುಂಬಾ ಇದೆ. ನಾವು ನರಿ ನಾಯಿ ಮಕ್ಕಳಲ್ಲ. ಸಿಂಹದ ಮಕ್ಕಳು, ಮಗನ ಹಾಗೆ ಸುಹಾಸ್‌ ಬದುಕಿದ್ದಾನೆ. ಅದೇ ರೀತಿ ನಾವು ಕೆಲಸ ಮಾಡಬೇಕು. ಕೇಸ್ ಬೀಳುತ್ತದೆ. ಆದರೆ ಹೆದರಬೇಡಿ, ಹೋರಾಟ ಮಾಡಿ, ಯಾರು ಬಿಡಬೇಡಿ” ಎಂದೂ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪ್ರಚೋದನಕಾರಿ ಭಾಷಣ : ನಟಿ ಶೃತಿ ವಿರುದ್ಧ ಪ್ರಕರಣ ದಾಖಲು

ಈ ಪ್ರಕರಣ ರದ್ದು ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ಏಕಸದಸ್ಯ ಪೀಠ ನಡೆಸಿದ್ದು, ಪ್ರಭಾಕರ್‌ ಭಟ್‌ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಮಧ್ಯಂತರ ಆದೇಶ ನೀಡಿದೆ.

ಕಲ್ಲಡ್ಕ ಪ್ರಭಾಕರ್‌ ಭಟ್‌ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಅನುಮತಿ ಇಲ್ಲದೇ ಆರೋಪಪಟ್ಟಿ ಸಲ್ಲಿಸಬಾರದು ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...