ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ಆದೇಶಕ್ಕೆ ಹೈಕೋರ್ಟ್‌ ತಡೆ

Date:

ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸುವುದಾದರೆ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ತಡೆ ನೀಡಿದೆ.

- Advertisement -

ಸರ್ಕಾರಿ ಜಾಗದಲ್ಲಿ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸುವಾಗ ಹತ್ತು ಜನಕ್ಕಿಂತ ಹೆಚ್ಚು ಮಂದಿ ಇದ್ದರೆ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಇದನ್ನು ಓದಿದ್ದೀರಾ? ಸರ್ಕಾರಿ ಜಾಗದಲ್ಲಿ RSS ಸೇರಿ ಎಲ್ಲ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ: ಸರ್ಕಾರದಿಂದ ಅಧಿಕೃತ ಆದೇಶ

ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ, “ಹತ್ತು ಜನಕ್ಕಿಂತ ಹೆಚ್ಚು ಮಂದಿ ಸೇರಿದಂತೆ ಅನುಮತಿ ಪಡೆಯಬೇಕು ಎಂದು ಸರ್ಕಾರ ಆದೇಶಿಸಿದೆ. ಇದು ಸಂವಿಧಾನದತ್ತವಾಗಿ ಲಭ್ಯವಾಗಿರುವ ಮೂಲಭೂತ ಹಕ್ಕಿಗೆ ನಿರ್ಬಂಧ. ಪಾರ್ಕ್‌ನಲ್ಲಿ ನಗೆಕೂಟ ನಡೆಸಿದರೂ ಸರ್ಕಾರದ ಆದೇಶದ ಪ್ರಕಾರ ಅದು ಅಕ್ರಮ ಕೂಟವಾಗುತ್ತದೆ. ಸರ್ಕಾರ ಈ ರೀತಿಯ ಆಡಳಿತಾತ್ಮಕ ಆದೇಶ ಹೊರಡಿಸುವಂತಿಲ್ಲ. ಪೊಲೀಸ್ ಕಾಯ್ದೆ ಜಾರಿಯಲ್ಲಿರುವಾಗ ಈ ನಿಯಮ ಏಕೆ ಬೇಕು” ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸರ್ಕಾರದ ವಕೀಲರು ವಾದಿಸಲು ಒಂದು ದಿನ ಕಾಲಾವಕಾಶ ನೀಡಬೇಕು ಎಂದು ಕೋರಿದ್ದಾರೆ.

ಈ ಸಂಬಂಧ ಹೈಕೋರ್ಟ್‌ ರಾಜ್ಯ ಸರ್ಕಾರ, ಗೃಹ ಇಲಾಖೆ, ಪೊಲೀಸ್‌ ಮಹಾನಿರ್ದೇಶಕರು, ಹುಬ್ಬಳ್ಳಿ ಪೊಲೀಸ್ ಕಮಿಷನರ್‌ಗೆ ನೋಟಿಸ್ ನೀಡಿದೆ. ಹಾಗೆಯೇ ಸಂವಿಧಾನದ 19 (1)A, B ವಿಧಿಯಡಿ ನೀಡಿರುವ ಹಕ್ಕನ್ನು ಸರ್ಕಾರ ಕಸಿದಿದೆ ಎಂದು ಹೇಳಿ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್ ಸೇರಿ ಯಾವುದೇ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದಾದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರುಗಳು ನಡುವೆ ತೀವ್ರ ವಾಗ್ವಾದವೂ ನಡೆದಿತ್ತು. ಈ ನಡುವೆ ಖರ್ಗೆ ಅವರಿಗೆ ಬೆದರಿಕೆ ಕರೆಗಳೂ ಬಂದಿತ್ತು. ಈ ಬೆಳವಣಿಗೆ ನಡುವೆ ಸರ್ಕಾರ ಅನುಮತಿ ಕಡ್ಡಾಯ ಆದೇಶ ಹೊರಡಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...