ಕ್ವಾಂಟಮ್ ತಂತ್ರಜ್ಞಾನಕ್ಕೆ ಒತ್ತು ನೀಡಿದ ಮೊದಲ ರಾಜ್ಯ ಕರ್ನಾಟಕ- ಸಿಎಂ

Date:

“ಡೀಪ್ ಸೈನ್ಸ್ ಮತ್ತು ಸುಧಾರಿತ ಇಂಜಿನಿಯರಿಂಗ್ ವ್ಯವಸ್ಥೆ ಒದಗಿಸಲು ರಾಜ್ಯ ಬದ್ಧವಾಗಿದ್ದು, ಎಐ, ಸೈಬರ್-ಭದ್ರತೆ, ದತ್ತಾಂಶ ವಿಜ್ಞಾನ, ಅನಿಮೇಷನ್ ಮತ್ತು ರೊಬೊಟಿಕ್ಸ್‌ನಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕ್ವಾಂಟಮ್ ತಂತ್ರಜ್ಞಾನದ ಮಾರ್ಗಸೂಚಿಗಳನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ‘ಬಿಯಾಂಡ್ ಬೆಂಗಳೂರು’ ಉಪಕ್ರಮದ ಮೂಲಕ ತಂತ್ರಜ್ಞಾನ ಆರ್ಥಿಕತೆಯ ವಿಕೇಂದ್ರೀಕರಣಕ್ಕೆ ಮುಂದಾಗಿರುವ ನಮ್ಮ ಸರ್ಕಾರ, ಮುಂದಿನ ಪೀಳಿಗೆಗಾಗಿ ಟೈರ್ 2 ನಗರಗಳನ್ನು ನಾವೀನ್ಯತೆಯ ಕ್ಲಸ್ಟರ್‌ಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಇಂದು ಆರಂಭವಾದ ಟೆಕ್‌ ಶೃಂಗಸಭೆ ಉದ್ಘಾಟಿಸಿ ಅವರು ಮಾತನಾಡಿದ ಅವರು, ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ ಎಂದು ಹೂಡಿಕೆದಾರರಿಗೆ ಕರೆ ನೀಡಿದರು.

ಈ ಎಲ್ಲ ಕ್ರಮಗಳು ಕೇವಲ ಆರ್ಥಿಕತೆಯನ್ನು ಕೇಂದ್ರೀಕರಿಸದೇ, ಸಮಾನ ಬೆಳವಣಿಗೆಗೂ ಬದ್ಧವಾಗಿವೆ. ರಾಜ್ಯದ ಪ್ರತಿ ಜಿಲ್ಲೆಯೂ ಹಾಗೂ ಯುವಪೀಳಿಗೆಯು ಡಿಜಿಟಲ್ ಯುಗಕ್ಕೆ ತೆರೆದುಕೊಳ್ಳುವ ಅವಕಾಶವನ್ನು ನೀಡಲಾಗಿದೆ. ನಮ್ಮ ಆಡಳಿತದ ಮಾದರಿಯು ಪಾರದರ್ಶಕತೆ, ನಿರೀಕ್ಷಿತ ನಡೆ ಹಾಗೂ ಸ್ಥಿರತೆಗೆ ಬದ್ಧವಾಗಿದೆ. ನಮ್ಮ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿ ಮುಂದುವರೆದಿದೆ. ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರವಾಗಲಿ, ಸ್ಟಾರ್ಟ್ ಅಪ್ ಆಗಲಿ, ಶೈಕ್ಷಣಿಕ ಸಂಶೋಧನೆಯಾಗಲಿ, ಯಾವುದೇ ಕ್ಷೇತ್ರದ ಬಂಡವಾಳ ಹೂಡಿಕೆ ಕರ್ನಾಟಕ ರಾಜ್ಯ ತಾಣವಾಗಿವೆ. ಎಐ, ಕ್ವಾಂಟಮ್ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ವಿಫುಲ ಅವಕಾಶಗಳನ್ನು ಬಳಸಿಕೊಂಡು ಮಾನವ ಪ್ರಗತಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

15,000 ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ: ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಪ್ರಕಟ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಪದವೀಧರ ಪ್ರಾಥಮಿಕ ಶಾಲಾ...

ಚಿಕಿತ್ಸಾ ನಿರ್ಲಕ್ಷ್ಯದಿಂದ ಮಹಿಳೆಗೆ ತೀವ್ರ ರಕ್ತಸ್ರಾವ: ಬೆಂಗಳೂರಿನ ವೈದ್ಯೆಗೆ ₹2 ಲಕ್ಷ ದಂಡ ವಿಧಿಸಿದ ಗ್ರಾಹಕರ ಆಯೋಗ

ವಿಫಲವಾದ ಗರ್ಭಧಾರಣೆಯ ಬಳಿಕ ಗರ್ಭಕೋಶವನ್ನು ಶುಚಿಗೊಳಿಸುವ ಶಸ್ತ್ರಚಿಕಿತ್ಸೆಯನ್ನು (ಡಿ ಆ್ಯಂಡ್ ಸಿ)...

ಬೈಕ್ ಟ್ಯಾಕ್ಸಿ ಪರ ಸುಪ್ರೀಮ್ ತೀರ್ಪು; ಆಟೋ ಯೂನಿಯನ್ ವಿರೋಧ, ರಾಜ್ಯ ಸರ್ಕಾರದ ನಿಲುವೇನು?

ಆ್ಯಪ್ ಆಧಾರಿತ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಆದೇಶದ...