ತುಮಕೂರು: ಪತ್ನಿಯ ತಲೆ ಕಡಿದು ದೇಹವನ್ನು ತುಂಡರಿಸಿದ ವ್ಯಕ್ತಿಯ ಬಂಧನ

Date:

ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಕಡಿದು ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿದ ಘಟನೆ ತುಮಕೂರು ಪಟ್ಟಣದಲ್ಲಿ ನಡೆದಿದೆ.

ತುಮಕೂರು ಪಟ್ಟಣದ ಹೊಸಪೇಟೆಯಲ್ಲಿ ಘಟನೆ ನಡೆದಿದ್ದು, ಹತ್ಯೆಯಾದ ಮಹಿಳೆಯನ್ನು 32 ವರ್ಷದ ಪುಷ್ಪಾ ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಶಿವರಾಮ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ವರದಿಯ ಪ್ರಕಾರ, ಆರೋಪಿ ಶಿವರಾಮ್‌ ಸೋಮವಾರ ರಾತ್ರಿ ಅಪರಾಧ ಕೃತ್ಯವೊಂದನ್ನೆಸಗಿ ಬಂದಿದ್ದಾನೆ. ಪತ್ನಿಯು ಇದನ್ನು ಪ್ರಶ್ನಿಸಿದಾಗ ಜಗಳ ಶುರುವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?

ನಂತರ ಜಗಳ ತಾರಕ್ಕೇರಿ ಹೆಂಡತಿಯ ತಲೆ ಕಡಿದ ಆರೋಪಿ ಆಕೆಯ ದೇಹವನ್ನು ಅಡುಗೆ ಮನೆಯಲ್ಲಿ ತುಂಡರಿಸಿದ್ದಾನೆ. ಪುಷ್ಪಾ ಶಿವಮೊಗ್ಗದ ಸಾಗರ ಪಟ್ಟಣದವರಾಗಿದ್ದು, ದಂಪತಿಗಳು 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದರು.

ಆರೋಪಿಯು ಮರ ಕತ್ತರಿಸುವ ಕಾರ್ಖಾನೆಯಲ್ಲಿ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ. ದಂಪತಿಗಳು ಆಗಾಗ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆಗಳಲ್ಲಿ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರಿಗೆ ಮೀಸಲಿರುವ ಹಣ ಗ್ಯಾರಂಟಿಗಳಿಗೆ ಬಳಕೆಯಾದರೆ ಸರ್ಕಾರದ ವಿರುದ್ಧ ಹೋರಾಟ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು...

ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಅದು ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ...

ಶಿರೂರು ಗುಡ್ಡ ಕುಸಿತ | ನೊಂದ ಕುಟುಂಬಗಳ ಜತೆ ಸರಕಾರ ನಿಲ್ಲಬೇಕು: ಎಚ್‌ ಡಿ ಕುಮಾರಸ್ವಾಮಿ

ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು...

ನಮ್ಮ ಬಗ್ಗೆಯೂ ತನಿಖೆ ಮಾಡಿ, ಆದರೆ ಮೊದಲು ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಬಿ ವೈ ವಿಜಯೇಂದ್ರ

ಮುಖ್ಯಮಂತ್ರಿಗಳೇ ನೀವು ಅಹಿಂದ ಹೆಸರು ಹೇಳಿ ಅಧಿಕಾರಕ್ಕೆ ಬಂದವರು. ವಾಲ್ಮೀಕಿ ನಿಗಮದಲ್ಲಿ...