ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ.08ರಂದು ನಡೆಸಲು ನಿಗದಿಯಾಗಿದ್ದ ಪಿಎಸ್‌ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿತ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ.
ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಿಕೆ ಮಾಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ.
ಆದೇಶದ ವಿವರ
ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ – ಪಿಎಸ್‌ಐ (402) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಎಂಬ ವಿಷಯವನ್ನು ಪ್ರಕಟಣೆ ಒಳಗೊಂಡಿದೆ ಸರ್ಕಾರದ ಆದೇಶ ದಿನಾಂಕ 22/02/2024ರನ್ವಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು
ಅದರಂತೆ ದಿನಾಂಕ 08/05/2024ರಂದು ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ದೇಶಾದ್ಯಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ನೀತಿ ಸಂಹಿತೆ ಜಾರಿಯಲ್ಲಿರುವ ದಿನಾಂಕ 08/05/2024ರಂದು ನಡೆಸಲು ತೀರ್ಮಾನಿಸಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದೆ.
ಯುಪಿಎಸ್‌ಸಿ ಪರೀಕ್ಷೆಯೂ ಮುಂದೂಡಿಕೆ
ಲೋಕಸಭೆಗೆ ಮೇ 26ರಂದು ಚುನಾವಣೆ ನಿಗದಿಯಾಗಿರುವ ಹಿನ್ನಲೆಯಲ್ಲಿ ಅಂದು ನಿಗದಿಯಾಗಿರುವ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆಯಾಗಿದೆ. ಜೂನ್ 16ರಂದು ಪರೀಕ್ಷೆ ನಡೆಯಲಿದೆ.
