ಬಿಸಿಲು ಧಗೆ| ಕಲಬುರಗಿಯಲ್ಲಿ 43.1 ಡಿಗ್ರಿ ಸೆಲ್ಸಿಯಸ್ ದಾಖಲು, ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

Date:

ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲು ಧಗೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಭಾನುವಾರ ಕಲಬುರಗಿ ಜಿಲ್ಲೆಯಲ್ಲಿ ಅತೀ ಅಧಿಕ 43.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ನಗರದಲ್ಲಿ ಕಳೆದ ಎಂಟು ವರ್ಷದಲ್ಲೇ ಅತ್ಯಧಿಕ ತಾಪಮಾನ ಇದಾಗಿದೆ.

- Advertisement -

ರಾಜ್ಯದಾದ್ಯಂತ ಭಾನುವಾರ ಒಣಹವೆ ಇದ್ದು, ಒಳನಾಡಿನ ಕೆಲವು ಕಡೆಗಳಲ್ಲಿ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳ ಕಂಡು ಬಂದಿದೆ. ಇನ್ನು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ?   ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಈ ತಾಪದ ನಡುವೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು (ಎಪ್ರಿಲ್ 8) ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಇನ್ನು ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರದಲ್ಲಿ ಎಪ್ರಿಲ್ 11ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನು ಓದಿದ್ದೀರಾ?  ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆ : 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್​’

ಇನ್ನು ಎಪ್ರಿಲ್ 12ರಂದು ಮತ್ತು ಎಪ್ರಿಲ್ 13ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಎರಡು ದಿನಗಳ ತಾಪಮಾನ ಮುನ್ಸೂಚನೆ

ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರಿನ ಪಶ್ಚಿಮ ಭಾಗಗಳು ಜಿಲ್ಲೆಗಳಲ್ಲಿ ಬಿಸಿ ಮತ್ತು ಆದ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಎಲ್ಲಾ ಸ್ಥಳಗಳಲ್ಲಿ ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ನಗರ, ರಾಮನಗರ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ?   ಬೆಂಗಳೂರು | ಬಿಸಿಲಿನ ಮಧ್ಯೆ ಸಂಚಾರ ಪೊಲೀಸರಿಗೆ ನಿತ್ಯ ನೀರು ಕೊಡುವ ನೀರ್‌ಸಾಬ್

ಇಂದು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಉಷ್ಣ ಅಲೆ ಅಧಿಕವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಬಿಸಿಲಿನ ವಾತಾವರಣ ಹೆಚ್ಚಾಗುತ್ತಿದ್ದಂತೆ ಕೆಸಿ ಜನರಲ್ ವಾರ್ಡ್ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಸನ್‌ಸ್ಟ್ರೋಕ್ ವಾರ್ಡ್‌ಗಳನ್ನು ಆರಂಭಿಸಲಾಗಿದೆ. ಜನರು ನೀರು ಹೆಚ್ಚಾಗಿ ಕುಡಿಯುವಂತೆ, ಡಿಹೈಡ್ರೇಟ್ ಆಗದಂತೆ ನೋಡಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.

ಇನ್ನು ಮುಂದಿನ 2 ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಬಿಸಿ ಹೆಚ್ಚಾಗುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...