ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2026-27ನೇ ಸಾಲಿನ ಶಿಷ್ಯವೇತನಕ್ಕೆ, ಆಯ್ಕೆ, ಪ್ರಕ್ರಿಯೆಯನ್ನು ಮೊಬೈಲ್ ಅಥವಾ ವಿಡಿಯೋ ಚಿತ್ರೀಕರಣದ ಮೂಲಕ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದ್ದು, ಶಿಷ್ಯವೇತನ ಅರ್ಜಿಗಳ ಬಗ್ಗೆ ಅಕಾಡೆಮಿ ಫೇಸ್ ಬುಕ್ ನಲ್ಲಿ facebook.com/karnatakasangeetanrutyaacademy ಮೂಲಕ ಮಾಹಿತಿ ಪಡೆದು Sangeetanrityaacademy.karnataka.gov.in ವೆಬ್ ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ.
ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್ ಹಾಗೂ ವಿಡಿಯೋ ಚಿತ್ರೀಕರಿಸಿ, ಪೆನ್ಡ್ರೈವ್ನಲ್ಲಿ ಅಳವಡಿಸಿ ಪೆನ್ಡ್ರೈವ್ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ ಸಿ ರಸ್ತೆ, ಬೆಂಗಳೂರು-560 002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.
ಇದನ್ನೂ ಓದಿದ್ದೀರಾ? ಬಯಲಾಟದ ಉಳಿವಿಗೆ ಬೇಕಿದೆ ಹೊಸ ದಾರಿ: ಯುವಪೀಳಿಗೆ ಕೈ ಹಿಡಿದಾಗಲೇ ಜನಪದ ರಂಗಕಲೆಗೆ ಭವಿಷ್ಯ
ಈ ರೀತಿಯಾಗಿ ಬಂದ ಅರ್ಜಿಗಳನ್ನು ಆಯಾ ಕಲಾ ಪ್ರಕಾರಕ್ಕೆ ಅನುಗುಣವಾಗಿ ತೀರ್ಪುಗಾರರು ಅಭ್ಯರ್ಥಿಗಳು ಚಿತ್ರೀಕರಿಸಿ ಕಳುಹಿಸಿಕೊಟ್ಟಿರುವ ಪೆನ್ಡ್ರೈವ್ ಅನ್ನು ಪರಿಶೀಲಿಸಿ ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಠ್ಯಕ್ರಮ ಚಿತ್ರೀಕರಿಸಿದ ಪೆನ್ಡ್ರೈವ್ನೊಂದಿಗೆ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್ ನರೇಂದ್ರಬಾಬು ತಿಳಿಸಿದ್ದಾರೆ.




