ಚಿಕ್ಕಬಳ್ಳಾಪುರ: ತೀರ್ಪು ಬದಲಿಸಲು ನ್ಯಾಯಾಲಯದ ಜಡ್ಜ್‌ ಕುರ್ಚಿ ಮೇಲೆ ವಾಮಾಚಾರ ಮಾಡಿದ ಮಹಿಳೆ

Date:

ತನ್ನ ಕುಟುಂಬದ ಪರವಾಗಿ ನ್ಯಾಯಾಲಯದ ತೀರ್ಪು ಬರಲಿ ಎಂಬ ಉದ್ದೇಶದಿಂದ, ನ್ಯಾಯಾಲಯದ ಸಂಕೀರ್ಣದಲ್ಲಿ ನ್ಯಾಯಾಧೀಶರ ಕುರ್ಚಿ ಮತ್ತು ಪೀಠದ ಮೇಲೆ ಮಾಟಮಂತ್ರ ಮಾಡಿದ ಆರೋಪದ ಮೇಲೆ 65 ವರ್ಷದ ಮಹಿಳೆಯನ್ನು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಈ ಘಟನೆಯು ಜುಲೈ 9ರಂದು ಬೆಳಿಗ್ಗೆ 9:40ರ ಸುಮಾರಿಗೆ ಚಿಕ್ಕಬಳ್ಳಾಪುರದ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಒಳಗೆ ನಡೆದಿದೆ. ಸಿಸಿಟಿವಿ ದೃಶ್ಯಾವಳಿಗಳು ಹಾಗೂ ನ್ಯಾಯಾಲಯದ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಜುಲೈ 11ರಂದು ಮಂಜುಳಾ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನ್ಯಾಯಾಲಯದ ಆಡಳಿತ ಮಂಡಳಿಯು ದಾಖಲಿಸಿರುವ ದೂರಿನ ಪ್ರಕಾರ, ಚಿಕ್ಕಬಳ್ಳಾಪುರದ ವಲಸಣ್ಣ ಬೀದಿಯ ನಿವಾಸಿಯಾಗಿರುವ ಮಂಜುಳಾ ತೆರೆದ ನ್ಯಾಯಾಲಯದ ಕೊಠಡಿಗೆ ಪ್ರವೇಶಿಸಿದ್ದರು. ಆ ಬಳಿಕ ಮಾಟಮಂತ್ರದ ಆಚರಣೆಯ ಭಾಗವಾಗಿ ಆಕೆ ನ್ಯಾಯಾಧೀಶರ ಕುರ್ಚಿ ಹಾಗೂ ವೇದಿಕೆಯ (ಡಯಾಸ್) ಮೇಲೆ ಬಿಳಿ ಸಾಸಿವೆ ಕಾಳುಗಳನ್ನು ಎರಚಿದ್ದರು.

ನ್ಯಾಯಾಧೀಶರ ಪೀಠದ ಮೇಲಿದ್ದ ಬಿಳಿ ಸಾಸಿವೆ ಕಾಳುಗಳನ್ನು ನ್ಯಾಯಾಲಯದ ಸಿಬ್ಬಂದಿ ನಂತರ ಗಮನಿಸಿದ್ದಾರೆ. ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ನ್ಯಾಯಾಲಯದ ಒಳಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಂಜುಳಾ ನ್ಯಾಯಾಲಯದ ಕೊಠಡಿಗೆ ಪ್ರವೇಶಿಸಿ ಸಾಸಿವೆ ಕಾಳುಗಳನ್ನು ಎರಚುತ್ತಿರುವುದು ದೃಶ್ಯದಲ್ಲಿ ಸ್ಪಷ್ಟವಾಗಿ ಸೆರೆಯಾಗಿತ್ತು. ಇದರ ಆಧಾರದ ಮೇಲೆ ಮುಖ್ಯ ಆಡಳಿತಾಧಿಕಾರಿ ನೇತ್ರಾ ಅವರು ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಚಿಕ್ಕಬಳ್ಳಾಪುರ ಟೌನ್ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ, ಮಂಜುಳಾ ಅವರ ಕುಟುಂಬಕ್ಕೆ ಸೇರಿದ ಸಿವಿಲ್ ವ್ಯಾಜ್ಯವೊಂದು ಇದೇ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿದೆ ಎಂಬ ಅಂಶ ಬೆಳಕಿಗೆ ಬಂದಿದೆ. ಈ ಪ್ರಕರಣದ ತೀರ್ಪು ತನ್ನ ಕುಟುಂಬದ ಪರವಾಗಿ ಒಲಿಯಲಿ ಎಂಬ ಮೂಢನಂಬಿಕೆಯಿಂದ ಆಕೆ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ. ವಿಚಾರಣೆಯಲ್ಲಿರುವ ಈ ಸಿವಿಲ್ ದಾವೆಯಲ್ಲಿ ಮಂಜುಳಾ ಅವರ ಸಹೋದರ ವೆಂಕಟರಾಮ ಅವರು ಮೂರನೇ ಪ್ರತಿವಾದಿಯಾಗಿದ್ದಾರೆ.

ಆದಾಗ್ಯೂ, ತನಿಖಾಧಿಕಾರಿಗಳು ಈ ಸಿವಿಲ್ ವ್ಯಾಜ್ಯದ ನಿಖರ ಸ್ವರೂಪ ಅಥವಾ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಸದ್ಯಕ್ಕೆ ಬಹಿರಂಗಪಡಿಸಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ‘ಕರ್ನಾಟಕ ಅಮಾನವೀಯ ದುಷ್ಟ ಪದ್ಧತಿಗಳು ಮತ್ತು ಮಾಟಮಂತ್ರ ಪ್ರತಿಬಂಧಕ ಮತ್ತು ನಿರ್ಮೂಲನಾ ಕಾಯ್ದೆ, 2017’ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನು ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...