ಕರ್ನಾಟಕದ ಜಾತಿ ಗಣತಿ ವರದಿ ವ್ಯರ್ಥ ಆಗಲು ಬಿಡಬಾರದು: ಸಚಿವ ಪರಮೇಶ್ವರ್

Date:

  • ಜಾತಿ ಗಣತಿ ವರದಿ ಜಾರಿಗೆ ಸಾಲು ಸಾಲು ರಾಜಕೀಯ ನಾಯಕರ ಆಗ್ರಹ
  • ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಲಿ: ಸಿಟಿ ರವಿ ಒತ್ತಾಯ

ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನ ಬಹಿರಂಗ ಪಡಿಸುವ ದಿಟ್ಟತನ ತೋರಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

- Advertisement -

ಬಿಹಾರದಲ್ಲಿ ನಡೆಸಲಾಗಿದ್ದ ಜಾತಿ ಗಣತಿಯ ವರದಿ ಅಲ್ಲಿನ ಸರ್ಕಾರಕ್ಕೆ ಅ. 3ರಂದು ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆದಿರುವ ಜಾತಿ ಗಣತಿಯ ವರದಿ ಬೇಗನೆ ಜಾರಿಗೆ ತರಬೇಕು ಎಂದು ಸಾಲು ಸಾಲು ರಾಜಕೀಯ ನಾಯಕರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಕುರಿತು ಬಿ ಕೆ ಹರಿಪ್ರಸಾದ್‌ ಟ್ವೀಟ್‌ ಮಾಡಿ, “ಜಾತಿ ಗಣತಿ ಬಹಿರಂಗ ಪಡಿಸುವ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ನಾಯಕ ರಾಹುಲ್‌ ಗಾಂಧಿ ಅವರು ಧ್ವನಿ ಎತ್ತಿದ್ದಾರೆ. “ಇಂಡಿಯಾ” ಮೈತ್ರಿ ಕೂಟದ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ ಸರ್ಕಾರದ ಐತಿಹಾಸಿಕ ನಡೆ ಅಭಿನಂದನೀಯ. ಹಿಂದುಳಿದ, ಶೋಷಿತವೂ ಸೇರಿದಂತೆ ಎಲ್ಲ ವರ್ಗಗಳ ಉನ್ನತಿ ಹಾಗೂ ಅಭಿವೃದ್ಧಿಗೆ ಜಾತಿಗಣತಿ ವರದಿ ಸಹಾಯ ಮಾಡುತ್ತದೆ ಎಂಬ ವೈಜ್ಞಾನಿಕ ಧೋರಣೆ ಕಾಂಗ್ರೆಸ್ ಪಕ್ಷದ್ದಾಗಿದೆ” ಎಂದಿದ್ದಾರೆ.

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಬಿಹಾರದಲ್ಲಿ ಜಾತಿ ಗಣತಿ ವರದಿ ಪ್ರಕಟವಾದ ಬೆನ್ನಲ್ಲೆ ಇದೀಗ ಕರ್ನಾಟಕ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿ ಬಂದಿದೆ. ಜಾತಿ ಗಣತಿ ವರದಿಯು ಬೇಗನೇ ಸಲ್ಲಿಕೆಯಾದರೆ ಒಳ್ಳೆಯದು. ಅದರಿಂದ ಅನೇಕ ಸಮುದಾಯಗಳಿಗೆ ಒಳ್ಳೆಯದಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದ ಜಾತಿ ಜನಗಣತಿ- ಕಮಂಡಲ ರಾಜಕಾರಣ ಕಕ್ಕಾಬಿಕ್ಕಿ

“ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, “ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಸಿದ ಬಳಿಕ ಚರ್ಚೆ ಮಾಡೋಣ ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಜಾತಿ ಗಣತಿ ನಡೆಸಲು ಅಂದಾಜು 100 ಕೋಟಿ ರೂ.ಗೆ ಹೆಚ್ಚು ಖರ್ಚಾಗಿದೆ. ಇಷ್ಟು ಹಣ ಖರ್ಚು ಮಾಡಿ ವರದಿ ಬಿಡುಗಡೆ ಮಾಡದಿದ್ದರೆ ವ್ಯರ್ಥ ಅಲ್ಲವಾ? ಜಾತಿಗಣತಿ ಬಿಡುಗಡೆಯಾದ್ರೆ ಒಳ್ಳೆಯದು, ರಾಜ್ಯದಲ್ಲಿ ಮೀಸಲಾತಿ ಕೂಗು ಕೇಳಿಬಂದಿದೆ. ಸರ್ಕಾರ ದುಂದುವೆಚ್ಚಕ್ಕಾಗಿ ಜಾತಿ ಗಣತಿ ಮಾಡಿಲ್ಲ” ಎಂದರು.

ಸಿಟಿ ರವಿ ಪ್ರತಿಕ್ರಿಯಿಸಿದ್ದು, “ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಲಿ. ಪ್ರಧಾನಿ ನರೇಂದ್ರ ಮೋದಿ ಅತೀ ಹಿಂದುಳಿದ ವರ್ಗಕ್ಕೆ ಸೇರಿದವರು. ಬಿಜೆಪಿ ಸರ್ಕಾರದಲ್ಲಿ ಅತೀ ಹೆಚ್ಚು ಹಿಂದುಳಿದ ಶಾಸಕರು ಹಾಗೂ ಸಂಸದರು ಇರುವುದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...