ಕಾಶ್ಮೀರ ಉಗ್ರರ ದಾಳಿ: ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ

Date:

Advertisements

ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರು ತಲುಪಿದೆ. ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ ಬೆಳಗಿನ ಜಾವ ಬೆಂಗಳೂರು ತಲುಪಿದೆ.

ಬೆಳಗಿನ ಜಾವ 3 ಗಂಟೆ ಸುಮಾರಿಗೆ ದೆಹಲಿಯಿಂದ ಇಬ್ಬರು ಕನ್ನಡಿಗರ ಮೃತದೇಹಗಳು ಬೆಂಗಳೂರು ಏರ್​ಪೋರ್ಟ್ ತಲುಪಿದ್ವು. ಮಂಜುನಾಥ್ ಸಂಬಂಧಿಕರು ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲೇ ಎಲ್ಲ ಪ್ರಕ್ರಿಯೆ ಮುಗಿಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಆ್ಯಂಬುಲೆನ್ಸ್ ಮೂಲಕ ಎಸ್ಕಾರ್ಟ್ ಭದ್ರತೆಯಲ್ಲಿ ಮಂಜುನಾಥ್ ಮೃತದೇಹ ಶಿವಮೊಗ್ಗದತ್ತ ಸಾಗಿದೆ. ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಅಬ್ಬರಿಸಿದ ಭಯೋತ್ಪಾದನೆ- ಮೋಶಾರತ್ತ ದಿಟ್ಟಿ ನೆಟ್ಟ ದೇಶ

Advertisements

ಬೆಂಗಳೂರು, ತುಮಕೂರು, ಚಿತ್ರದುರ್ಗ, ಚನ್ನಗಿರಿ ಮೂಲಕ ಶಿವಮೊಗ್ಗಕ್ಕೆ ಮಂಜುನಾಥ್ ಮೃತದೇಹ ತಲುಪಲಿದೆ. ವಿಜಯನಗರ ಗುತ್ಯಪ್ಪ ಕಾಲೋನಿಯಲ್ಲಿರುವ ಮಂಜುನಾಥ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ಮಂಜುನಾಥ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಇನ್ನು ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚುವ ನಿರ್ಧಾರ ಮಾಡಿದ್ದಾರೆ.

ಇತ್ತ ಹಾವೇರಿ ಮೂಲದ ಭರತ್ ಭೂಷಣ್ ಮೃತದೇಹ ಈಗಾಗಲೇ ಬೆಂಗಳೂರಿನಲ್ಲಿರುವ ಮತ್ತಿಕೆರೆ ನಿವಾಸ ತಲುಪಿದೆ. ಮನೆ ಬಳಿ ಬ್ಯಾರಿಕೇಡ್ ಹಾಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಚಿವರು, ಗಣ್ಯರು ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಭಯೋತ್ಪಾದಕರ ದಾಳಿಯಿಂದ ಜೀವ ಕಳೆದುಕೊಂಡವರ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಶಿವಮೊಗ್ಗ ತಲುಪಿದ ಮಂಜುನಾಥ್ ರಾವ್ ಪಾರ್ಥಿವ ಶರೀರ

ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ ಮಾರ್ಗವಾಗಿ ಆಂಬುಲೆನ್ಸ್ ಮೂಲಕ ಮಂಜುನಾಥ್ ಪಾರ್ಥಿವ ಶರೀರ ಶಿವಮೊಗ್ಗಕ್ಕೆ ಸಾಗಿಸಲಾಯಿತು. ಈ ವೇಳೆ ತುಮಕೂರಿನ ಕ್ಯಾತಸಂದ್ರದ ಟೋಲ್ ಗೇಟ್‍ನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮಂಜುನಾಥ್ ರಾವ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮನೆ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಶಿವಮೊಗ್ಗನಗರ ಸೇರಿದಂತೆ ಗ್ರಾಮಾಂತರ ಪ್ರದೇಶದಿಂದ ಹೆಚ್ಚಿನ ಜನ ಬರುವ ನಿರೀಕ್ಷೆ ಇದ್ದು, ಮನೆಯ ಮುಂದೆ ಬ್ಯಾರಿಕೇಡ್‍ಗಳನ್ನು ಹಾಕಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ದಾಳಿಯಲ್ಲಿ ಮೃತಪಟ್ಟಿರುವ ಬೆಂಗಳೂರಿನ ಮತ್ತೊಬ್ಬ ಟೆಕ್ಕಿ ಮಧುಸೂದನ್‌ ಸೋಮಿಶೆಟ್ಟಿ ರಾವ್‌ ಅವರ ಮೃತದೇಹವನ್ನು ಆಂಧ್ರ ಪ್ರದೇಶದ ನಲ್ಲೂರಿಗೆ ತಲುಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮಿಶೆಟ್ಟಿ ರಾವ್‌ ಅವರು ರಾಮಮೂರ್ತಿ ನಗರದಲ್ಲಿ ನೆಲಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X