ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಕೇಂದ್ರದ ಅಧಿಸೂಚನೆಗೆ ಡಿಸಿಎಂ ಪರಮೇಶ್ವರ್ ಆಕ್ರೋಶ

Date:

ಪಶ್ಚಿಮ ಘಟ್ಟಗಳ ಸಂರಕ್ಷಣೆ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿ ರಂಗನ್ ವರದಿ ಜಾರಿಯ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸಿದೆ. ಯಾವುದೇ ಕಾರಣಕ್ಕೂ ಈ ವರದಿಯನ್ನು ಜಾರಿಗೆ ತರಲು ಅವಕಾಶ ಕೊಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

- Advertisement -

ಪಶ್ಚಿಮ ಘಟ್ಟ ವ್ಯಾಪ್ತಿಯ 10 ಜಿಲ್ಲೆಗಳ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (Eco-Sensitive Area – ESA) ಎಂದು ಘೋಷಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರದ ಈ ಏಕಪಕ್ಷೀಯ ನಿರ್ಧಾರದಿಂದಾಗಿ ಮಲೆನಾಡು ಹಾಗೂ ಕರಾವಳಿ ಭಾಗದ ಲಕ್ಷಾಂತರ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ. ಶತಮಾನಗಳಿಂದ ಪ್ರಕೃತಿಯೊಂದಿಗೆ ಸಮತೋಲಿತ ಜೀವನ ನಡೆಸುತ್ತಿರುವ ಜನರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಈ ಕುರಿತು ವಿಸ್ತೃತ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲು ಶೀಘ್ರದಲ್ಲೇ ಒಂದು ದಿನದ ವಿಶೇಷ ಶಾಸನಸಭೆ (ಅಧಿವೇಶನ) ಕರೆಯಲು ಸರ್ಕಾರ ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಶಿರಸಿ | ಕಸ್ತೂರಿ ರಂಗನ್ ವರದಿ ವಿರೋಧಕ್ಕೆ ಸಂಸದ ಕಾಗೇರಿ ವಿರುದ್ಧ ಅರ್ಜುನ್ ಮಿಂಟಿ ಆಕ್ರೋಶ

ಕಸ್ತೂರಿ ರಂಗನ್ ವರದಿಯು ಪಶ್ಚಿಮ ಘಟ್ಟದ ಸುಮಾರು 37% ಭಾಗವನ್ನು (ಕರ್ನಾಟಕದ 20,000ಕ್ಕೂ ಹೆಚ್ಚು ಚದರ ಕಿ.ಮೀ) ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಶಿಫಾರಸು ಮಾಡಿದೆ. ಇದನ್ನು ಸ್ಥಳೀಯರು ಮತ್ತು ಸರ್ಕಾರ ವಿರೋಧಿಸುತ್ತಿದೆ. ಮುಖ್ಯವಾಗಿ ಈ ವರದಿ ಅನುಷ್ಠಾನಗೊಂಡರೆ ಜನವಸತಿ ಪ್ರದೇಶ ಹಾಗೂ ಕೃಷಿ ಭೂಮಿ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರುತ್ತದೆ. ಇದರಿಂದ ಪಶ್ಚಿಮ ಘಟ್ಟದಲ್ಲಿ ತಲೆಮಾರುಗಳಿಂದ ವಾಸಿಸುತ್ತಿರುವ ಸ್ಥಳೀಯರು ಹಾಗೂ ಆದಿವಾಸಿಗಳು ಒಕ್ಕಲೆಬ್ಬಿಸಲ್ಪಡುವ ಭೀತಿ ಎದುರಾಗುತ್ತದೆ.

ಇನ್ನೊಂದೆಡೆ ಕೃಷಿ ಭೂಮಿ ಬಳಕೆ, ಮನೆ ಅಥವಾ ಕಟ್ಟಡಗಳ ನಿರ್ಮಾಣ (20,000 ಚದರ ಮೀಟರ್‌ಗಿಂತ ಹೆಚ್ಚು), ರಸ್ತೆ, ಸೇತುವೆ, ವಿದ್ಯುತ್ ಮಾರ್ಗಗಳಂತಹ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಕಠಿಣ ನಿಯಮಗಳು ಮತ್ತು ನಿಷೇಧ ಅನ್ವಯವಾಗುತ್ತದೆ. ಗಣಿಗಾರಿಕೆ, ಕ್ವಾರಿ, ಮರಳು ಎತ್ತುವುದು, ಜಲವಿದ್ಯುತ್ ಯೋಜನೆಗಳು ಮತ್ತು ಕೈಗಾರಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕಾಗುತ್ತದೆ. ಇದರಿಂದ ಸ್ಥಳೀಯ ಆರ್ಥಿಕತೆ ಮತ್ತು ಜೀವನೋಪಾಯಕ್ಕೆ ತೀವ್ರ ಧಕ್ಕೆಯಾಗುತ್ತದೆ.

ವರದಿ ಸಿದ್ಧಪಡಿಸುವಾಗ ಸ್ಥಳೀಯ ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರದ ವಾಸ್ತವಿಕ ಪರಿಸ್ಥಿತಿಯ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂಬುದು ಪ್ರಮುಖ ಆಕ್ಷೇಪಣೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...