ಕಸ್ತೂರಿ ರಂಗನ್ ವರದಿ | ಕೇರಳ ಮಾದರಿಯಲ್ಲಿ ಕರ್ನಾಟಕಕ್ಕೆ ವಿನಾಯಿತಿ ಪಡೆಯಲು KPRS ಆಗ್ರಹ

Date:

ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇರಳ ಮಾದರಿಯಲ್ಲಿ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶಗಳಿಗೆ ವಿನಾಯಿತಿ ಪಡೆಯಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಆಗ್ರಹಿಸಿದೆ.

- Advertisement -

ಈ ಕುರಿತು KPRS ರಾಜ್ಯಾಧ್ಯಕ್ಷ ಯು. ಬಸವರಾಜ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ ಟಿ. ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, “ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜುಲೈ 27ರಂದು ಏಳನೇ ಕರಡು ಅಧಿಸೂಚನೆ ಹೊರಡಿಸಿದ್ದು, ಇದರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇವಲ ರಾಜಕೀಯ ವಿರೋಧಕ್ಕೆ ಸೀಮಿತವಾಗದೆ, ಪಶ್ಚಿಮ ಘಟ್ಟಗಳ ಸ್ಥಳೀಯ ನಿವಾಸಿಗಳ ಆತಂಕಗಳನ್ನು ನಿವಾರಿಸುವ ಹಾಗೂ ಪರಿಸರ ಸಂರಕ್ಷಣೆಗೆ ಪೂರಕವಾಗುವ ಪರ್ಯಾಯ ಪ್ರಸ್ತಾವನೆಗಳನ್ನು ಸಿದ್ಧಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಕೇಂದ್ರ ಸರ್ಕಾರದ ಕರಡು ಅಧಿಸೂಚನೆಯ ಪ್ರಕಾರ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು, ಚಾಮರಾಜನಗರ, ಮೈಸೂರು ಮತ್ತು ಹಾಸನ ಜಿಲ್ಲೆಗಳ 39 ತಾಲ್ಲೂಕುಗಳ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳಾಗಿ ಗುರುತಿಸಲಾಗಿದೆ. ಇದರಿಂದ ಈ ಪ್ರದೇಶಗಳ ರೈತರು, ಆದಿವಾಸಿಗಳು ಸೇರಿದಂತೆ ಸ್ಥಳೀಯ ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗುತ್ತಿದೆ. ಸ್ಥಳೀಯ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ವಿನಾಯಿತಿಗಳನ್ನು ಪಡೆಯಲು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿ, ಪಶ್ಚಿಮ ಘಟ್ಟಗಳ ಜನರು ಹಾಗೂ ಜನ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿ ಪರ್ಯಾಯ ಪ್ರಸ್ತಾವನೆಗಳನ್ನು ಸಿದ್ಧಪಡಿಸಬೇಕು ಎಂದು KPRS ಹೇಳಿದೆ. ಅಲ್ಲದೆ, ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ನೀಡಿರುವ ಅವಧಿಯನ್ನು ವಿಸ್ತರಿಸುವಂತೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಪರಿಣಾಮಕಾರಿ ಒತ್ತಡ ಹೇರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸೆಪ್ಟೆಂಬರ್ 21ರಿಂದ ಆರಂಭವಾಗಲಿರುವ ವಿಶೇಷ ವಿಧಾನಸಭೆ ಅಧಿವೇಶನವನ್ನು ಈ ವಿಚಾರದಲ್ಲಿ ಸಮಗ್ರ ಚರ್ಚೆ ನಡೆಸಲು ಬಳಸಿಕೊಳ್ಳಬೇಕು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಶಾಸಕರು ಒಗ್ಗಟ್ಟಿನಿಂದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಸಂಘ ಮನವಿ ಮಾಡಿದೆ.

ಇದನ್ನೂ ಓದಿ: ಅಪೆಕ್ಸ್ ಬ್ಯಾಂಕ್‌ ಗಾದಿಗೆ ಡಿಕೆಶಿ ಆಪ್ತ ಎಂಎಲ್‌ಸಿ ಎಸ್ ರವಿ ಅವಿರೋಧ ಆಯ್ಕೆ: ರಾಜಣ್ಣಗೆ ನಿರಾಸೆ!

ಕೇರಳದ ಹಿಂದಿನ ಎಲ್‌ಡಿಎಫ್ ಸರ್ಕಾರ ಸ್ಥಳೀಯ ಜನರ ಜೀವನೋಪಾಯ ಮತ್ತು ಪರಿಸರ ಸಂರಕ್ಷಣೆಯನ್ನು ಸಮತೋಲನಗೊಳಿಸುವ ಪರ್ಯಾಯ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರ ಹಾಗೂ ನ್ಯಾಯಾಲಯಗಳಿಗೆ ಸಲ್ಲಿಸಿತ್ತು. ಇದರ ಪರಿಣಾಮವಾಗಿ ಜನವಸತಿ ಪ್ರದೇಶಗಳು, ಕೃಷಿ ಭೂಮಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಿಂದ ಹೊರಗಿಡುವ ವಿನಾಯಿತಿ ಪಡೆಯಲು ಸಾಧ್ಯವಾಗಿದೆ ಎಂದು KPRS ತಿಳಿಸಿದೆ.

ಅದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ಪಶ್ಚಿಮ ಘಟ್ಟ ಪ್ರದೇಶದ ಜನರೊಂದಿಗೆ ಸಮಾಲೋಚಿಸಿ ಸ್ಪಷ್ಟ ಹಾಗೂ ಪ್ರಾಯೋಗಿಕ ಪರ್ಯಾಯ ಪ್ರಸ್ತಾವನೆಗಳನ್ನು ರೂಪಿಸಬೇಕು. ಜೊತೆಗೆ ಪರಿಸರಕ್ಕೆ ಹಾನಿಕಾರಕವಾಗಿರುವ ಬೃಹತ್ ಕ್ವಾರಿ, ಗಣಿಗಾರಿಕೆ ಮತ್ತು ಪರಿಸರ ನಾಶಕ್ಕೆ ಕಾರಣವಾಗುವ ಯೋಜನೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...