ಕಸ್ತೂರಿರಂಗನ್ ವರದಿ – ಕೇಂದ್ರದ ಅಧಿಸೂಚನೆಗೆ ವಿರೋಧ; ರಾಜ್ಯ ವಿಧಾನಮಂಡಲದಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

Date:

ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಕುರಿತು ಡಾ. ಕೆ. ಕಸ್ತೂರಿರಂಗನ್ ಸಮಿತಿ ನೀಡಿರುವ ಶಿಫಾರಸುಗಳು ಮತ್ತು ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಿದೆ. ವರದಿಯ ಜಾರಿಗೆ ವಿರೋಧ ವ್ಯಕ್ತಪಡಿಸಿ ರಾಜ್ಯ ಸರ್ಕಾರ ಮಂಡಿಸಿದ ನಿರ್ಣಯವನ್ನು ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ.

- Advertisement -

ಕಸ್ತೂರಿರಂಗನ್ ವರದಿ ಮತ್ತು ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿಯ ಕುರಿತು ಚರ್ಚಿಸಲು ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿತ್ತು. ಉಭಯ ಸದನಗಳಲ್ಲಿ ಕಸ್ತೂರಿರಂಗನ್ ವರದಿ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದು, ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಹಿತರಕ್ಷಣೆಗಾಗಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಸರ್ಕಾರದ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಕಸ್ತೂರಿರಂಗನ್ ಸಮಿತಿಯು ಉಪಗ್ರಹ ಆಧಾರಿತ ಬಾಹ್ಯಾಕಾಶ ದತ್ತಾಂಶಗಳನ್ನು ಬಳಸಿಕೊಂಡು ಗಡಿ ಗುರುತಿಸಿರುವುದರಿಂದ ಜನವಸತಿ, ಕೃಷಿಭೂಮಿ ಹಾಗೂ ಅರಣ್ಯಗಳ ನಡುವಿನ ವ್ಯತ್ಯಾಸ ಸ್ಪಷ್ಟವಾಗಿಲ್ಲ. ಉಪಗ್ರಹ ಚಿತ್ರಗಳನ್ನಷ್ಟೇ ನೆಚ್ಚಿಕೊಳ್ಳದೆ, ತಕ್ಷಣವೇ ಭೌತಿಕ ಸಮೀಕ್ಷೆ ನಡೆಸಿ ಮರುಪ್ರಸ್ತಾವನೆ ಸಿದ್ಧಪಡಿಸಬೇಕು” ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ನಮಗೂ ಮುಖ್ಯ. ಆದರೆ, ವಾಸ್ತವ ಸ್ಥಿತಿಯನ್ನು ಅರಿಯದೆ ಉಪಗ್ರಹ ಚಿತ್ರಗಳ ಆಧಾರದ ಮೇಲೆ ವರದಿ ಸಿದ್ಧಪಡಿರುವುದರಿಂದ ಕಾಫಿ-ಅಡಿಕೆ ಬೆಳೆಗಾರರು, ರೈತರು ಹಾಗೂ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ತಲೆತಲಾಂತರಗಳಿಂದ ವಾಸಿಸುತ್ತಿರುವ ಸ್ಥಳೀಯರ ಜೀವನೋಪಾಯಕ್ಕೆ ಭಾರಿ ಧಕ್ಕೆಯಾಗಲಿದೆ. ಜನವಸತಿ ಮತ್ತು ಕೃಷಿ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಸೇರಿಸುವುದನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ರಾಜ್ಯದ ಹಿತರಕ್ಷಣೆ ನಮಗೆ ಮೊದಲ ಆದ್ಯತೆ” ಎಂದು ಹೇಳಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, “ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸಿದರೆ ಪಶ್ಚಿಮ ಘಟ್ಟ ವ್ಯಾಪ್ತಿಯ ಲಕ್ಷಾಂತರ ಜನರ ಬದುಕು ಬೀದಿಗೆ ಬರಲಿದೆ. ಕೇರಳ ಸರ್ಕಾರ ಅನುಸರಿಸಿದ ಮಾದರಿಯಲ್ಲೇ ಕರ್ನಾಟಕದಲ್ಲೂ ಗ್ರಾಮ ಮಟ್ಟದಲ್ಲಿ ಪ್ರತ್ಯೇಕ ಭೌತಿಕ ಸಮೀಕ್ಷೆ ನಡೆಸಬೇಕು. ನೈಜ ಅರಣ್ಯ ಪ್ರದೇಶ ಮತ್ತು ಜನರು ವಾಸಿಸುವ ಕೃಷಿ ಭೂಮಿಯನ್ನು ಪ್ರತ್ಯೇಕವಾಗಿ ಗುರುತಿಸಿ, ಆ ವಾಸ್ತವಾಂಶಗಳನ್ನು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಮುಂದೆ ಪ್ರಬಲವಾಗಿ ಮಂಡಿಸಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಚರ್ಚೆಯಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, “ರಾಜ್ಯ ಸರ್ಕಾರವು ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಈಗಾಗಲೇ ಹಲವು ಬಾರಿ ತಿರಸ್ಕರಿಸಿದೆ. 2018ರಲ್ಲಿ ಕೇಂದ್ರದೊಂದಿಗಿನ ಸಭೆಯಲ್ಲಿ ಮತ್ತು 2024ರ ಸೆಪ್ಟೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲೂ ಈ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಲಾದ ಈ ಅಧಿಕೃತ ನಿರ್ಣಯವನ್ನು ಕೇಂದ್ರ ಪರಿಸರ ಸಚಿವಾಲಯಕ್ಕೆ ಕಳುಹಿಸಲಾಗುವುದು” ಎಂದು ತಿಳಿಸಿದ್ದಾರೆ.

ಕಸ್ತೂರಿರಂಗನ್ ವರದಿ ಜಾರಿಯಾದರೆ ಕರ್ನಾಟಕದ  20,668 ಚದರ ಕಿಲೋಮೀಟರ್ ಪ್ರದೇಶ ಮತ್ತು 1,576 ಗ್ರಾಮಗಳು ಈ ವಲಯದ ವ್ಯಾಪ್ತಿಗೆ ಬರಲಿವೆ. ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು ಹಾಗೂ ಚಾಮರಾಜನಗರ ಸೇರಿದಂತೆ 10 ಜಿಲ್ಲೆಗಳ 39 ತಾಲೂಕುಗಳು ಈ ಕರಡು ಅಧಿಸೂಚನೆಯ ನೇರ ಪರಿಣಾಮಕ್ಕೆ ಒಳಗಾಗಲಿವೆ. ಇದರಿಂದ, 1,576 ಗ್ರಾಮಗಳ ಜನರಿಗೆ ಭಾರೀ ತೊಂದರೆ ಎದುರಾಗಲಿದೆ ಎಂದು ಸರ್ಕಾರ ಹೇಳಿದೆ.

2013ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾದ ಕಸ್ತೂರಿರಂಗನ್ ವರದಿಯು ಪಶ್ಚಿಮ ಘಟ್ಟಗಳ ಸುಮಾರು 60,000 ಚದರ ಕಿಲೋಮೀಟರ್ (37%) ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಗುರುತಿಸಲು ಶಿಫಾರಸು ಮಾಡಿತ್ತು. ಈ ಶಿಫಾರಸನ್ನು ಅನುಷ್ಠಾನಗೊಳಿಸಲು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2026ರ ಜುಲೈ 27ರಂದು 7ನೇ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ನಿಲ್ಲದ ಅತ್ಯಾಚಾರ ಕೃತ್ಯ; ಪೊಲೀಸ್‌ ಹೆಸರಿನಲ್ಲಿ ಬಾಲಕಿ ಮೇಲೆ ಮೂವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು/ಹೆಣ್ಣು ಮಕ್ಕಳ ಮೇಲಿನ ಅಪರಾಧಗಳ ಸರಣಿ ಮುಂದುವರಿದಿದೆ....

‘ವಂದೇ ಮಾತರಂ’ ಕಡ್ಡಾಯ ಜಾತ್ಯತೀತತೆಯ ಉಲ್ಲಂಘನೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ.ಎಂ. ಕೃಷ್ಣ

'ವಂದೇ ಮಾತರಂ' ಗೀತೆಯ ಆರು ನುಡಿಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ...

ಬಿಹಾರ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು; ಸಚಿವನ ವಿಕೃತ ಹೇಳಿಕೆ

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ವಿದ್ಯಾರ್ಥಿನಿ ಮೇಲಿನ ಭೀಕರ ದೌರ್ಜನ್ಯ...

ಹಳ್ಳಿ ಮಕ್ಕಳಿಗೆ ‘ಎಐ’ ತಂತ್ರಜ್ಞಾನ, ಉದ್ಯಮ ಆಧಾರಿತ ಪಠ್ಯಕ್ರಮಕ್ಕೆ ಒತ್ತು: ಡಿ ಕೆ ಶಿವಕುಮಾರ್

ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ‘ಕಿಯೋ’ ಕಂಪ್ಯೂಟರ್‌ಗಳ ಮೂಲಕ ಗ್ರಾಮೀಣ ಭಾಗದ...