ಬಿಜೆಪಿ ಇರೋ ಕಡೆ ಐಟಿ ರೇಡ್ ಆಗಲ್ಲ, ಏಕೆ : ಡಿಕೆ ಶಿವಕುಮಾರ್ ಪ್ರಶ್ನೆ

Date:

  • ‘ಐಟಿ ರೇಡ್ ನಡೆಯೋದೆ ರಾಜಕೀಯ ಉದ್ದೇಶಕ್ಕೆ’
  • ‘ಗುತ್ತಿಗೆದಾರರ ಸಂಘದ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ’

ಐಟಿ ದಾಳಿ ಬಗ್ಗೆ ನನಗೆ ಇನ್ನು ಪೂರ್ಣ ಮಾಹಿತಿ ಸಿಕ್ಕಿಲ್ಲ. ಬಿಜೆಪಿಯವರು ಇರೋ ಕಡೆ ಎಂದಾದರೂ ಐಟಿ ದಾಳಿ ಆಗಿದೆಯಾ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಪ್ರಶ್ನಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಐಟಿ ರೇಡ್ ನಡೆಯೋದೆ ರಾಜಕೀಯ ಉದ್ದೇಶಕ್ಕೆ, ಬಿಜೆಪಿ ಇರೋ ಕಡೆ ಐಟಿ ರೇಡ್ ಆಗಲ್ಲ, ಬೇರೆ ಕಡೆಗಳಲ್ಲಿ ಆಗುತ್ತದೆ ಎನ್ನುವ ಮೂಲಕ ಗುತ್ತಿಗೆದಾರರ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿರುವ ಪ್ರಕರಣಕ್ಕೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಬೊಟ್ಟು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಮಾಡಿರುವ ರಾಜ್ಯ ಕಲೆಕ್ಷನ್ ಸೆಂಟರ್ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, “ಎಲ್ಲಿ, ಯಾರಿಗೆ ಆಯ್ತೋ ನನಗೆ ಗೊತ್ತಿಲ್ಲ, ರಸ್ತೆ, ಬೀದಿಯಲ್ಲಿ ಮಾತಾಡೋರಿಗೆಲ್ಲ ಉತ್ತರ ಕೊಡುವ ಅವಶ್ಯಕತೆ ಇಲ್ಲ” ಎಂದು ತಿರುಗೇಟು ನೀಡಿದರು.

ಗುತ್ತಿಗೆದಾರರ ಶೇ. 65ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ ಮಾಡಿದ್ದೇವೆ. ತನಿಖೆ ಪೆಂಡಿಂಗ್ ಇದ್ದರೂ ಬಿಲ್​ ಬಿಡುಗಡೆಗೆ ಆದೇಶ ಮಾಡಿದ್ದೇವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಗುತ್ತಿಗೆದಾರರಿಗೆ ಸಹಾಯ ಆಗಬೇಕು ಅಂತಾ ಆದೇಶ ಮಾಡಿದ್ದೇವೆ. ಸೀನಿಯಾರಿಟಿ ಮೇಲೆ ಬಿಲ್ ಬಿಡುಗಡೆ ಮಾಡಿದ್ದೇವೆ. ಗುತ್ತಿಗೆದಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗುತ್ತಿಗೆದಾರರ 20 ಸಾವಿರ ಕೋಟಿ ಬಿಲ್​ ಬಾಕಿ; ಸರ್ಕಾರಕ್ಕೆ 30 ದಿನಗಳ ಗಡುವು ನೀಡಿದ ಡಿ.ಕೆಂಪಣ್ಣ

ಲೋಡ್ ಶೆಡ್ಡಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿ, “ಯಾರ ಯಾರ ಅವಧಿಯಲ್ಲಿ ಎಷ್ಟು ಪವರ್ ಜನರೇಟ್ ಆಗ್ತಿತ್ತು ಅಂತ ಮಾಹಿತಿ ಇದೆ. ನಾನಿದ್ದಾಗ ಎಷ್ಟಿತ್ತು? ಎಷ್ಟು ಎಕ್ಸಿಸ್ ಇತ್ತು ಏನು ಪ್ರಿಪರೇಷನ್ ಇತ್ತು ಗೊತ್ತಿದೆ. ಬಿಜೆಪಿಯವರ ಆರೋಪಗಳು ಕೇವಲ ರಾಜಕೀಯ” ಎಂದು ಬಿಜೆಪಿಗೆ ಟಾಂಗ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಮತದಾರರ ಹೆಸರು ಅಳಿಸಲು ಫಾರಂ-7 ದುರ್ಬಳಕೆ; ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...