ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ (84) ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಗುರುವಾರ ಬೆಳಿಗ್ಗೆ 10 ಗಂಟೆಗೆ ನಿಧನರಾಗಿದ್ದಾರೆ. ಇತ್ತೀಚಿಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.
ಇದನ್ನು ಓದಿದ್ದೀರಾ? ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಚಿವ ಸಂಪುಟದಲ್ಲಿ ಚರ್ಚೆಯಾಗಲಿ: ಕುಮಾರಸ್ವಾಮಿ ಆಗ್ರಹ
ಕೆಂಪಣ್ಣ ಅವರ ಆರೋಪವು ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾಗಿತ್ತು.
ಇನ್ನು ಕಾಂಗ್ರೆಸ್ ಆಡಳಿತದಲ್ಲೂ ಶೇ. 40 ಕಮಿಷನ್ ಮುಂದುವರಿದಿದೆ ಎಂದು ಕೆಂಪಣ್ಣ ಇದೇ ವರ್ಷ ಫೆಬ್ರವರಿಯಲ್ಲಿ ಆರೋಪಿಸಿದ್ದರು.
