ವಿಕ್ರಂ ಗೌಡ ಹತ್ಯೆ | ನಕ್ಸಲ್ ಚಟುವಟಿಕೆ ನಿಗ್ರಹಕ್ಕೆ ಎನ್‌ಕೌಂಟರ್‌: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Date:

Advertisements

ವಿಕ್ರಂ ಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ. ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂ ಗೌಡ ಅವರು ಎನ್‌ಕೌಂಟರ್‌ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಬುಧವಾರ (ನ.20) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

“ವಿಕ್ರಂ ಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂ ಗೌಡ ಅವರನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ರೂ. ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ರೂ. ಬಹುಮಾನ ಘೋಷಿಸಿತ್ತು” ಎಂದು ವಿವರಿಸಿದರು.

Advertisements

13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಆದಿವಾಸಿ, ದಲಿತ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಹಿಂದಿರುವ ಪ್ರಶ್ನೆಗಳು

ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ. 

ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X