ಹೋರಾಟಕ್ಕೆ ಗೌರವ, ಬೆಂಬಲ: ಸೌಜನ್ಯ ತಾಯಿ ಕುಸುಮಾವತಿಗೆ ಪತ್ರ ಬರೆದ ‘ಕೊಂದವರು ಯಾರು’ ತಂಡ

Date:

ಧರ್ಮಸ್ಥಳದಲ್ಲಿ ಮಹಿಳೆಯರನ್ನು ಕೊಂದವರು ಯಾರು? ಅಭಿಯಾನದ ಅಡಿಯಲ್ಲಿ ಮಹಿಳಾ ಸಂಘಟನೆಗಳು ಮತ್ತು ಕಾಳಜಿಯುಳ್ಳ ನಾಗರಿಕರು ಸೌಜನ್ಯ ತಾಯಿ ಕುಸುಮಾವತಿ ಅವರಿಗೆ ಪತ್ರ ಬರೆದಿದ್ದು, ಈ ಪತ್ರವನ್ನು ಇಂದು ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೊಂದವರು ಯಾರು ತಂಡವು ಧರ್ಮಸ್ಥಳದಲ್ಲಿ ದಶಕಗಳಿಂದ ನಡೆದಿರುವ ಮಹಿಳೆಯರ ವಿರುದ್ಧದ ಅಪರಾಧಗಳ ಕುರಿತು ಎಸ್‌ಐಟಿ ತನಿಖೆಯ ವರದಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.

- Advertisement -

ತಮ್ಮ ಮಗಳು ಸೌಜನ್ಯಳ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಕುಸುಮಾವತಿ ಅವರು ನಡೆಸಿರುವ ಹೋರಾಟದ ಹಿಂದಿನ ಅಸಾಧಾರಣ ಧೈರ್ಯವನ್ನು ಕೊಂದವರು ಯಾರು ತಂಡವು ಈ ಪತ್ರದ ಮೂಲಕ ಗುರುತಿಸಿದೆ. ಹಾಗೆಯೇ ಈ ಪತ್ರವು ಕುಸುಮಾವತಿಯವರ 14 ವರ್ಷಗಳ ಹೋರಾಟವನ್ನು ಹಾಗೂ ಈ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿರುವುದನ್ನು ಗುರುತಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಇದನ್ನು ಓದಿದ್ದೀರಾ? BREAKING NEWS | ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್‌

ಕುಸುಮಾವತಿ ಅವರ ಪ್ರಯತ್ನದಿಂದಾಗಿಯೇ ಸುಪ್ರೀಂ ಕೋರ್ಟ್ ವಿಶೇಷ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದು, ರಾಜ್ಯ ಸರ್ಕಾರ ಮತ್ತು ಸಿಬಿಐಗಳಿಗೆ ನೋಟಿಸ್‌ ಜಾರಿ ಮಾಡಿದೆ. ಕುಸುಮಾವತಿ ಅವರ ಹೋರಾಟವು ವೈಯಕ್ತಿಕ ದುಃಖವನ್ನು ಮೀರಿ ಮಹಿಳೆಯರು ಎದುರಿಸುತ್ತಿರುವ ಹಿಂಸೆ ಮತ್ತು ಅನ್ಯಾಯದ ವಿರುದ್ಧ ತೋರಿಸಿರುವ ಪ್ರಬಲ ಪ್ರತಿರೋಧವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಇನ್ನು ಧರ್ಮಸ್ಥಳ ಮತ್ತು ಸುತ್ತಮುತ್ತಲಿನ 70ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ, ಕೊಲೆ, ನಾಪತ್ತೆ ಮತ್ತು ಅಸಹಜ ಸಾವಿನ ಪ್ರಕರಣಗಳ ತನಿಖೆಯಲ್ಲಿ ಪಾರದರ್ಶಕತೆಯ ಕೊರತೆಯ ಬಗ್ಗೆಯೂ ಈ ಅಭಿಯಾನವು ಗಂಭೀರ ಕಳವಳವನ್ನು ವ್ಯಕ್ತಪಡಿಸಿದೆ.

kondavaru yaru1 1

ಈ ಪ್ರಕರಣಗಳ ತನಿಖೆಗಾಗಿ ಜುಲೈ 19, 2025ರಂದು ವಿಶೇಷ ತನಿಖಾ ತಂಡ (SIT) ರಚನೆ ಮಾಡಲಾಗಿದ್ದು, ತನಿಖೆಯ ಪ್ರಗತಿ ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗವು ಅಕ್ಟೋಬರ್ 31, 2025ರಂದು ಅಧಿಕೃತ ಪತ್ರ ಬರೆದಿದ್ದರೂ ಇದುವರೆಗೂ ಯಾವುದೇ ವರದಿಯನ್ನು ಬಹಿರಂಗಪಡಿಸಲಾಗಿಲ್ಲ. ಧರ್ಮಸ್ಥಳ ಪ್ರದೇಶದಲ್ಲಿ ಮಹಿಳೆಯರು, ಯುವತಿಯರ ನಾಪತ್ತೆ ಮತ್ತು ಅಸಹಜ ಸಾವಿನ ಬಗ್ಗೆ ಸಮಗ್ರ ತನಿಖೆಯನ್ನು ನಡೆಸಬೇಕು. ಇಲ್ಲವೇ ಈಗಾಗಲೇ ತನಿಖೆ ನಡೆಸುತ್ತಿದ್ದಲ್ಲಿ ಅದರ ವಿವರಗಳನ್ನು ಮಹಿಳಾ ಆಯೋಗಕ್ಕೆ ಒದಗಿಸಬೇಕು ಎಂದು ಅಧ್ಯಕ್ಷರು ಅಗ್ರಹಿಸಿದ್ದರು. ಈ ಪತ್ರಕ್ಕೆ ಪ್ರತಿಕ್ರಿಯೆಯನ್ನೇ ನೀಡದೆ ನಿರಂತರ ಮೌನವನ್ನು ತೋರಿಸುತ್ತಿರುವುದು ತನಿಖಾ ಸಂಸ್ಥೆಯ ಹೊಣೆಗಾರಿಕೆಯ ಕೊರತೆಯನ್ನು ಮತ್ತು ನ್ಯಾಯವು ಮತ್ತಷ್ಟು ವಿಳಂಬವಾಗುವ ಸಾಧ್ಯತೆಯನ್ನು ಹುಟ್ಟುಹಾಕಿದೆ. ಎಸ್ಐಟಿ ತನ್ನ ಪ್ರಗತಿ ವರದಿಯನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕೊಂದವರು ಯಾರು ಅಭಿಯಾನವು ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಸೌಜನ್ಯ ಪ್ರಕರಣ | ಸುಪ್ರೀಂ ನೋಟಿಸ್: ‘ಸರ್ಕಾರ ಹಿಂದೆ ಸರಿಯದಿರಲಿ’ ಎಂದ ಮಹಿಳಾಪರ ಹೋರಾಟಗಾರರು

ಈ ಸಂದರ್ಭದಲ್ಲೇ ಈ ಸಮಸ್ಯೆಯ ಗಂಭೀರತೆಯನ್ನು ಎತ್ತಿ ತೋರಿಸಿದ ಹಿರಿಯ ವಕೀಲ ಬಾಲನ್ ಅವರು ಧರ್ಮಸ್ಥಳ ಪ್ರದೇಶದಲ್ಲಿ ನಡೆದ 74 ಅಸಹಜ ಸಾವುಗಳ ಸಂಪೂರ್ಣ ವಿವರಗಳನ್ನು ಸಲ್ಲಿಸಲು ಕರ್ನಾಟಕ ಹೈಕೋರ್ಟ್ ಮಾರ್ಚ್ 18, 2026ರಂದು ರಾಜ್ಯ ಸರ್ಕಾರಕ್ಕೆ ನೀಡಿರುವ ಆದೇಶವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

ತನಿಖಾ ಪ್ರಕ್ರಿಯೆಯಲ್ಲಿನ ಗಂಭೀರ ಸಾಂಸ್ಥಿಕ ಲೋಪಗಳ ಕಡೆಗೆ ಗಮನಸೆಳೆದ ಅವರು, ಪ್ರಕರಣಗಳನ್ನು ದಾಖಲಿಸುವಲ್ಲಿ ನಿಯಮ ಪಾಲನೆ ಮಾಡದಿರುವುದು, ಗುರುತಿಸಲಾಗದ ಶವಗಳನ್ನು ಸರಿಯಾಗಿ ನಿರ್ವಹಿಸದಿರುವುದು, ಆತುರಾತುರವಾಗಿ ಶವ ದಹನ ಮಾಡಿರುವುದು, ಮತ್ತು ಸಾಕ್ಷಿಗಳ ಅನುಮಾನಾಸ್ಪದ ಸಾವುಗಳನ್ನು ಉಲ್ಲೇಖಿಸಿದರೂ, ಸೌಜನ್ಯ ಪ್ರಕರಣದಲ್ಲಿ 2023ರ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನಲ್ಲಿ ಎತ್ತಿ ತೋರಿಸಿದ ಲೋಪಗಳನ್ನು ಇಲ್ಲೂ ಗುರುತಿಸಬಹುದು. ಆ ಆದೇಶವು ಪೊಲೀಸ್ ಮತ್ತು ವೈದ್ಯಕೀಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಗುರುತಿಸಿದೆ. ಆದರೆ ಅದಕ್ಕೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಿಲ್ಲ ಎನ್ನುವುದನ್ನು ಎತ್ತಿ ತೋರಿಸಿದರು.

ಈ ವೈಫಲ್ಯಗಳು ಮಹಿಳೆಯರ ಜೀವನ ಮತ್ತು ಹಕ್ಕುಗಳ ಬಗ್ಗೆ ಆಡಳಿತದ ವ್ಯವಸ್ಥಿತ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಅಭಿಯಾನವು ಒತ್ತಿಹೇಳಿದೆ. ಹಾಗೆಯೇ ರಾಜ್ಯ ಸರ್ಕಾರವು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ನಿರ್ದೇಶನಗಳೊಂದಿಗೆ ಸಂಪೂರ್ಣವಾಗಿ ಸಹಕರಿಸಿ, ಸೌಜನ್ಯ ಪ್ರಕರಣದ ಮರುತನಿಖೆಗೆ ಸಾರ್ವಜನಿಕವಾಗಿ ಬೆಂಬಲ ನೀಡಬೇಕು. ಎಲ್ಲ ತನಿಖೆಗಳ ಲೋಪಗಳಿಗೆ ಹೊಣೆಯಾದವರನ್ನು ಗುರುತಿಸಿ, ಶಿಕ್ಷೆ ವಿಧಿಸಬೇಕು ಎಂದು ಅಭಿಯಾನವು ಒತ್ತಿ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿಲ್ಲದು: ‘ಇಂಡಿಯಾ’ ಒಕ್ಕೂಟ ನಾಯಕರೊಂದಿಗೆ ರಾಹುಲ್ ಗಾಂಧಿ ಚಹಾಕೂಟ

ದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ದೊಡ್ಡ...

ಸಿಜೆಐಗೆ ವಿಪಕ್ಷಗಳು ಬರೆದ ಪತ್ರದಲ್ಲಿ ಏನಿದೆ?

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ...

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ...