ಕಡು ಬಡತನ ಮುಕ್ತ ಕೇರಳ ರಾಜ್ಯ: ಎಲ್‌ಡಿಎಫ್‌ ಸರ್ಕಾರಕ್ಕೆ ಕೆಪಿಆರ್‌ಎಸ್‌ ಅಭಿನಂದನೆ

Date:

ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಭಾರತದಲ್ಲಿನ ಯಾವುದೇ ರಾಜ್ಯಕ್ಕೂ ಅಥವಾ ಕೇಂದ್ರ ಸರ್ಕಾರಕ್ಕೂ ಸಾಧ್ಯವಾಗದಂತಹ “ಕಡು ಬಡತನ ಮುಕ್ತ ರಾಜ್ಯ”ದ ಅಪೂರ್ವ ಸಾಧನೆಯನ್ನು ಕೇರಳ ರಾಜ್ಯ ಸಾಧಿಸಿದ್ದು, ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಸರ್ಕಾರದ ಮಹತ್ತರ ಯಶಸ್ಸು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ರಾಜ್ಯ ಸಮಿತಿ ಅಭಿನಂದಿಸಿದೆ.

- Advertisement -

ಸ್ವಾತಂತ್ರ್ಯ ನಂತರ ಮೊದಲ ಕೇರಳ ಶಾಸನಸಭೆಯಲ್ಲಿ ಇಎಂಎಸ್‌ ನೇತೃತ್ವದ ಎಲ್‌ಡಿಎಫ್‌ ಸರ್ಕಾರ ಭೂ ಹಂಚಿಕೆ, ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾರ್ವಜನಿಕ ವಲಯದ ಬಲಪಡಿಸುವ ಮೂಲಕ ಅಡಿಗಲ್ಲು ಇಟ್ಟಿತ್ತು. ಬಳಿಕ ಅಧಿಕಾರ ಕಳೆದುಕೊಂಡು ದುರ್ಬಲಗೊಂಡಿದ್ದರೂ, ಸತತ ಎರಡನೇ ಅವಧಿಗೆ ಅಧಿಕಾರ ಪಡೆದ ಪಿಣರಾಯಿ ವಿಜಯನ್‌ ನೇತೃತ್ವದ ಸರ್ಕಾರ “ಕಡು ಬಡತನ ಮುಕ್ತ ಕೇರಳ” ಎಂಬ ತನ್ನ ಗುರಿಯನ್ನು ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇಡೀ ಪ್ರಪಂಚದಲ್ಲಿ ಬಂಡವಾಳಶಾಹಿ ಅಭಿವೃದ್ಧಿ ಮಾದರಿಯಿಂದ ಕಡು ಬಡತನ ಹೆಚ್ಚುತ್ತಿರುವ ಸಂದರ್ಭದಲ್ಲಿ, ನವ ಉದಾರೀಕರಣ ಚೌಕಟ್ಟಿನ ಸೀಮಿತ ಅವಕಾಶದಲ್ಲಿ ಈ ಸಾಧನೆ ಜನ ಕಲ್ಯಾಣದ ಸಂವಿಧಾನ ಆಶಯದ ವಿಶಿಷ್ಟ ಮಾದರಿಯಾಗಿ ದೇಶಕ್ಕೆ ಪರಿಚಯವಾಗಿದೆ ಎಂದು ಕೆಪಿಆರ್‌ಎಸ್ ಹೇಳಿದೆ. 1998ರಿಂದ ಸತತ 30 ವರ್ಷಗಳ ಕಾಲ ಅಧಿಕಾರದಲ್ಲಿರುವ ಗುಜರಾತ್‌ನ ಬಿಜೆಪಿ ಸರ್ಕಾರದ ಕಡು ಬಡತನ ಪ್ರಮಾಣವನ್ನು ಹೋಲಿಸಿದರೆ, ಕೇರಳದ ಸಾಧನೆ ಅಮೂಲ್ಯ ಮತ್ತು ಅಪರೂಪದ್ದು ಎಂಬುದು ಸ್ಪಷ್ಟವಾಗುತ್ತದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದಲ್ಲಿ ಕೋಟಿ ಉದ್ಯೋಗದ ಭರವಸೆ; ಹಳೆಯ ಭರವಸೆ ಎಲ್ಲಿ ಹೋಯಿತು ಮೋದೀಜೀ?

ಅತ್ಯಂತ ಸೀಮಿತ ತೆರಿಗೆ ಸಂಪನ್ಮೂಲ, ಕೇಂದ್ರದ ಅನ್ಯಾಯಯುತ ತೆರಿಗೆ ಹಂಚಿಕೆ ಹಾಗೂ ಅನುದಾನ ತಾರತಮ್ಯಗಳ ನಡುವೆಯೂ ಕೇರಳ ಸರ್ಕಾರ ಈ ಯಶಸ್ಸು ಸಾಧಿಸಿರುವುದು ಕರ್ನಾಟಕದಂತಹ ರಾಜ್ಯಗಳಿಗೆ ಅಧ್ಯಯನ ಯೋಗ್ಯ ಮತ್ತು ಅನುಕರಣೀಯ ಎಂದು ಕೆಪಿಆರ್‌ಎಸ್‌ ಅಭಿಪ್ರಾಯಪಟ್ಟಿದೆ.

ರಾಜ್ಯದ ಪ್ರತೀ ಕುಟುಂಬಕ್ಕೂ ವಸತಿ ಒದಗಿಸುವ ಗುರಿಯತ್ತ ಕೇರಳ ಸರ್ಕಾರ ಮುನ್ನಡೆಯುತ್ತಿರುವ ಈ ಜನಕಲ್ಯಾಣದ ಪರ್ವ ಮುಂದುವರಿಯಲೆಂದು, ಮತ್ತೊಂದು ಅವಧಿಗೆ ಎಲ್‌ಡಿಎಫ್‌ ಸರ್ಕಾರಕ್ಕೆ ಕೇರಳ ಜನತೆ ಅವಕಾಶ ನೀಡಬೇಕೆಂದು ಕೆಪಿಆರ್‌ಎಸ್‌ ರಾಜ್ಯ ಸಮಿತಿಯ ಅಧ್ಯಕ್ಷ ಯು. ಬಸವರಾಜ ಹಾಗೂ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...