ಆನ್‌ಲೈನ್‌ನಲ್ಲಿ ಒಂದು ರೂ.ಗೆ ಹಾಲು ಮಾರಾಟ: KPRS ಆಕ್ರೋಶ; ಪ್ರತಿಭಟನೆಯ ಎಚ್ಚರಿಕೆ

Date:

ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂಪಾಯಿಗೆ ಮಾರಾಟದ ಅವಕಾಶ ಕಲ್ಪಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದು ಅತ್ಯಂತ ಖಂಡನೀಯ ಹಾಗೂ ರೈತರಿಗೆ ಸಮಸ್ಯೆ ಉಂಟು ಮಾಡುವಂತದ್ದು, ಆದ್ದರಿಂದ ಕೂಡಲೇ ಈ ಮಾರಾಟವನ್ನು ನಿಲ್ಲಿಸುವಂತೆ ಆನ್‌ಲೈನ್ ವೇದಿಕೆಗಳನ್ನು ನಿರ್ಬಂಧಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದೆ.

- Advertisement -

ಕೋಟ್ಯಂತರ ಸಂಖ್ಯೆಯಲ್ಲಿ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದು ತಮ್ಮ ಜೀವನೋಪಾಯಕ್ಕಾಗಿ ಅದನ್ನೇ ಅವಲಂಬಿಸಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಒಂದು ಕಡೆ ರೈತರಿಗೆ ಉತ್ಪಾದನಾ ವೆಚ್ಚ ನೀಡಲು ಇನ್ನೊಂದು ಕಡೆ ಸಂಗ್ರಹಿಸಿದ ಹಾಲನ್ನು ಪೂರ್ಣವಾಗಿ ಮಾರಾಟ ಮಾಡುವುದಕ್ಕೆ ಪ್ರಯಾಸ ಪಡುತ್ತಿವೆ. ಇಂತಹ ತೀವ್ರ ವಿಷಮ ಪರಿಸ್ಥಿತಿಯಲ್ಲಿ ಸಹಕಾರಿ ಹಾಲು ಒಕ್ಕೂಟವನ್ನು ತೀವ್ರ ಬಿಕ್ಕಟ್ಟಿಗೆ ದೂಡುವ ಇಂತಹ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಮಾರಾಟದ ಕುತಂತ್ರವನ್ನು ತಕ್ಷಣ ನಿಲ್ಲಿಸಿದಿದ್ದರೆ ಈ ಸಂಸ್ಥೆಗಳ ಕಚೇರಿಗಳ ಮುಂದೆ ಹೈನುಗಾರಿಕೆ ರೈತರು ತೀವ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇದನ್ನು ಓದಿದ್ದೀರಾ? ಕೆಎಂಎಫ್ ಇತಿಹಾಸದಲ್ಲೇ ನಂದಿನಿ ಹಾಲು ಮೊದಲ ಬಾರಿಗೆ ಅತಿಹೆಚ್ಚು ಸಂಗ್ರಹ, ಮಾರಾಟ

ಈ ಮಾರುಕಟ್ಟೆ ಕುತಂತ್ರದ ವಿರುದ್ಧ ಸಹಕಾರಿ ಒಕ್ಕೂಟಗಳನ್ನು ರಕ್ಷಿಸಲು ವಿಫಲರಾಗಿರುವ ಹಾಗೂ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಸಹಕಾರಿ ಸಂಸ್ಥೆಗಳ ಮೇಲೆ ಸವಾರಿ ಮಾಡುವ ಮೂಲಕ ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಅವರು ಈ ಮಾರಾಟ ಕುತಂತ್ರದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷಿರಂಗ | ಬರ ಪೀಡಿತ ಜಿಲ್ಲೆಗಳಿಗೆ ವರದಾನ- ಸಮಗ್ರ ಕೃಷಿ

ಸಮಗ್ರ ಕೃಷಿಯನ್ನು ಅರ್ಥಮಾಡಿಕೊಳ್ಳುವುದು ಕಠಿಣವಲ್ಲ. ಅದು ಸರಳವಾದ ಕ್ರಮ. ಸುಲಭವಾಗಿ ಪಾಲಿಸಬಹುದಾದ...

ಪೊಲೀಸ್ ಕ್ರೌರ್ಯ: ಗರ್ಭಿಣಿ ಹೊಟ್ಟೆಗೆ ಒದ್ದ ಪೊಲೀಸರು; ತಾಯಿ ಸಾವು

ಕಳ್ಳತನದ ಆರೋಪದಲ್ಲಿ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರು, ಆತನ ಪತ್ನಿ ಗರ್ಭಿಣಿಯ...

ಔರಾದ್‌ | ಇಂದು ಸಂಜೆ ʼಚಟ್ನಾಳ ಸಂಭ್ರಮʼ

ಔರಾದ(ಬಿ) ತಾಲೂಕಿನ ಚಟ್ನಾಳ ಗ್ರಾಮದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ...

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...