KPSC ಅಕ್ರಮ ಆರೋಪ; ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

Date:

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಆಯೋಗದ ಮಾಜಿ ಪರೀಕ್ಷಾ ನಿಯಂತ್ರಕ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -

ಜ್ಞಾನೇಂದ್ರ ಕುಮಾರ್ ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಅಂಕ ತಿದ್ದುಪಡಿ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಿಐಡಿ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಇದೇ ಪ್ರಕರಣ ಸಂಬಂಧ ಜ್ಞಾನೇಂದ್ರ ಕುಮಾರ್ ಅವರನ್ನು ಆಗಸ್ಟ್ 28ರಂದು ಸತತ ಸುಮಾರು 11 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಆದರೆ, ವಿಚಾರಣೆಗೆ ಸಮರ್ಪಕವಾಗಿ ಸಹಕರಿಸದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯ (ED) ಕೂಡ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿಯ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಕೆಲವು ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತ್ತು. ಜ್ಞಾನೇಂದ್ರ ಕುಮಾರ್ ಅವರ ನಿವಾಸದ ಮೇಲೂ ಇಡಿ ದಾಳಿ ನಡೆಸಿತ್ತು.

ಇಡಿ ದಾಳಿಗಳ ಬೆನ್ನಲ್ಲೇ ಜ್ಞಾನೇಂದ್ರ ಕುಮಾರ್ ಕೆಲವು ದಿನಗಳ ಕಾಲ ಸಂಪರ್ಕಕ್ಕೆ ಸಿಗದೆ ಇದ್ದದ್ದು ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಅನುಮಾನಗಳನ್ನು ಹೆಚ್ಚಿಸಿತ್ತು. ನಂತರ ಅವರು ಸಿಐಡಿ ವಿಚಾರಣೆಗೆ ಹಾಜರಾಗಿದ್ದರು. ಈಗ ಸುದೀರ್ಘ ವಿಚಾರಣೆಯ ಬಳಿಕ ಸಿಐಡಿ ಅವರನ್ನು ವಶಕ್ಕೆ ಪಡೆದಿದೆ.

ಅಧಿಕಾರಿಗಳು ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಸಂಗ್ರಹಿಸಲು ಅವರನ್ನು ಹೆಚ್ಚಿನ ದಿನಗಳ ಕಾಲ ಸಿಐಡಿ ವಶಕ್ಕೆ ನೀಡುವಂತೆ ನ್ಯಾಯಾಲಯವನ್ನು ಕೋರಲು ತನಿಖಾ ತಂಡ ಮುಂದಾಗಿದೆ ಎನ್ನಲಾಗಿದೆ.

ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರನ್ನು ವಶಕ್ಕೆ ಪಡೆದಿರುವುದರಿಂದ, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಂಕ ತಿದ್ದುಪಡಿ ಆರೋಪಗಳ ಹಿಂದೆ ಇನ್ನೂ ಯಾರು ಇದ್ದಾರೆ, ಅಕ್ರಮ ನಡೆದಿದ್ದರೆ ಅದು ಯಾವ ಮಟ್ಟದವರೆಗೆ ವ್ಯಾಪಿಸಿದೆ ಎಂಬುದನ್ನು ಸಿಐಡಿ ತನಿಖೆ ಬಹಿರಂಗಪಡಿಸಬೇಕಿದೆ.

ಕೆಪಿಎಸ್‌ಸಿಯಂತಹ ಸಂವಿಧಾನಬದ್ಧ ಸಂಸ್ಥೆಯ ನೇಮಕಾತಿ ಪ್ರಕ್ರಿಯೆಯಲ್ಲೇ ಅಕ್ರಮ ನಡೆದಿದೆ ಎಂಬ ಆರೋಪಗಳು ಹಲವು ದಿನಗಳಿಂದ ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ವಿವಿಧ ನೇಮಕಾತಿಗಳಲ್ಲೂ ಅಕ್ರಮ ನಡೆದಿರುವ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಸರ್ಕಾರ ಮತ್ತು ಕೆಪಿಎಸ್‌ಸಿ ಕಾರ್ಯವೈಖರಿ ಕುರಿತು ವಿರೋಧ ಪಕ್ಷಗಳು ಪ್ರಶ್ನೆ ಎತ್ತುತ್ತಿವೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2022ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ಲಿಜು ಕೃಷ್ಣ ಖುಲಾಸೆ

2022ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಿರ್ದೇಶಕ...

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...