ಕೆಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿ: ಕರವೇ ಆಗ್ರಹ

Date:

Advertisements

ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಕೆಪಿಎಸ್‌ಸಿ ಸುಧಾರಣೆಗಾಗಿ ಕೆಪಿಎಸ್‌ಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಪ್ರಯತ್ನಿಸಿದೆ. ಇದೇ, ಸಮಯದಲ್ಲಿ ಕೆಪಿಎಸ್‌ಸಿ ಪರೀಕ್ಷೆಯನ್ನು ಇಂಗ್ಲಿಷ್‌ ಮಾಧ್ಯಮದಲ್ಲಿ ನಡೆಸದೆ, ಕನ್ನಡದಲ್ಲೇ ನಡೆಸುವುದಕ್ಕೂ ತಿದ್ದುಪಡಿ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ ನಾರಾಯಣಗೌಡ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕೆಪಿಎಸ್‌ಸಿ ಕಾಯ್ದೆಗೆ ತ್ವರಿತವಾಗಿ ತಿದ್ದುಪಡಿ ತರುವ ಅಗತ್ಯವಿದೆ. ಪ್ರತಿ ಬಾರಿಯೂ ಕೆಪಿಎಸ್‌ಸಿ ಪರೀಕ್ಷೆ ನಡೆದಾಗಲೂ ಒಂದಲ್ಲ ಒಂದು ಅವಾಂತರಗಳು ನಡೆಯುತ್ತದೆ. ಕೆಪಿಎಸ್‌ಸಿ ಅಧಿಕಾರಿಗಳ ಅಪ್ರಾಮಾಣಿಕತೆ, ಭ್ರಷ್ಟತೆ, ಅದಕ್ಷತೆ, ಹೊಣೆಹೇಡಿತನ, ಕನ್ನಡ ದ್ರೋಹ, ವೃತ್ತಿಪರವಲ್ಲದ ನಡವಳಿಕೆ, ಕ್ರಿಯೆಗಳಿಂದ ಕೆಪಿಎಸ್‌ಸಿ ಸರ್ವನಾಶವಾಗುವ ಹಂತ ತಲುಪಿದೆ. ಇದನ್ನು ಈಗ ರಿಪೇರಿ ಮಾಡಲೇಬೇಕು” ಎಂದಿದ್ದಾರೆ.

“ಸರ್ಕಾರ ಕಾಯ್ದೆಗೆ ತಿದ್ದುಪಡಿ ತರುವಾಗ, ಕೆಪಿಎಸ್‌ಸಿ ನಡೆಸುವ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿಯೇ ನಡೆಸಲು ನಿಯಮ ರೂಪಿಸಬೇಕು. ಕೆಪಿಎಸ್‌ಸಿ ಪರೀಕ್ಷೆ ಬರೆದು ವಿವಿಧ ಹುದ್ದೆಗಳಿಗೆ ನೇಮಕವಾಗುವವರು ಕನ್ನಡದಲ್ಲಿಯೇ ಆಡಳಿತ ನಡೆಸಬೇಕು. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡ ಭಾಷೆಯಲ್ಲಿ ಹಿಡಿತವಿರುವ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳೇ ರಾಜ್ಯ ಸರ್ಕಾರದ ಉದ್ಯೋಗ ಮಾಡಲು ಹೆಚ್ಚು ಸಮರ್ಥರು. ಹೀಗಾಗಿ ಎಲ್ಲ ಪರೀಕ್ಷೆಗಳೂ ಕನ್ನಡ ಮಾಧ್ಯಮದಲ್ಲೇ ನಡೆಯುವಂತಾಬೇಕು” ಎಂದು ಹೇಳಿದ್ದಾರೆ.

Advertisements

“ಹುದ್ದೆಗಳಿಗೆ ಆಯ್ಕೆ ಆದ ನಂತರ ಯಾರಿಗಾದರೂ ಇಂಗ್ಲಿಷ್ ತಿಳಿವಳಿಕೆ ಅಗತ್ಯವಿದ್ದಲ್ಲಿ ಅಂತವರಿಗೆ ಆಡಳಿತಾತ್ಮಕವಾಗಿ ಇಂಗ್ಲಿಷ್ ಭಾಷೆಯ ತರಬೇತಿ ನೀಡಿದರೆ ಸಾಕಾಗುತ್ತದೆ. ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಸೇರಿದಂತೆ ಇತರೆ ಪರೀಕ್ಷೆಗಳನ್ನು ಇಂಗ್ಲಿಷ್‌ನಲ್ಲಿ ಬರೆಯುವ ವಿಪುಲ ಅವಕಾಶಗಳಿವೆ. ಇಂಥ ಆಡಳಿತ ಸೇವೆಗಳು ಮಾತ್ರವಲ್ಲದೆ ಇತರೆ ಖಾಸಗಿ ಉದ್ಯೋಗಗಳನ್ನು ನಿರ್ವಹಿಸಲೂ ಅವರಿಗೆ ಹೆಚ್ಚಿನ ಅವಕಾಶವಿದೆ. ಆದರೆ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಆಡಳಿತ ಸೇವೆ ಬಿಟ್ಟರೆ ಇತರೆ ಅವಕಾಶಗಳು ಕಡಿಮೆ. ಯುಪಿಎಸ್‌ಸಿ ಪರೀಕ್ಷೆಯಲ್ಲೂ ಕನ್ನಡ ಮಾಧ್ಯಮದವರು ಯಶಸ್ವಿಯಾಗುವುದು ಕಡಿಮೆ. ಯುಪಿಎಸ್‌ಸಿ ನಡೆಸುವ ಪೂರ್ವಭಾವಿ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿಯೇ ಬರೆಯಬೇಕು. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಕಷ್ಟಪಟ್ಟು ಇಂಗ್ಲಿಷ್ ಕಲಿತು ದಶಕಗಳಿಂದ ಬರೆಯುತ್ತಿದ್ದಾರೆ. ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳು ಆಡಳಿತ ಸೇವೆಯ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ಬರೆಯಲು ಬಯಸಿದರೆ ತಪ್ಪೇನಿಲ್ಲ. ಆದರೆ ಪರೀಕ್ಷೆಗಳು ಕನ್ನಡದಲ್ಲೇ ನಡೆಯಬೇಕು” ಎಂದು ಆಗ್ರಹಿಸಿದ್ದಾರೆ.

“ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಐದಾರು ತಿಂಗಳುಗಳಿಂದ ಆ ವಿದ್ಯಾರ್ಥಿಗಳೊಂದಿಗೆ ಸೇರಿಕೊಂಡು ಬಡಿದಾಡುತ್ತಿದ್ದೇನೆ. ಈ ಹೋರಾಟಕ್ಕೆ ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷೆ ಬರೆದವರೂ ಕೈಜೋಡಿಸಿದ್ದಾರೆ. ಅವರು ನನ್ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಅವರೂ ಕನ್ನಡದ ಮಕ್ಕಳೇ. ಹೀಗಾಗಿ ಅವರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವುದೇನು ಸಮಸ್ಯೆ ಅಲ್ಲ. ಹೀಗಾಗಿ ಕೆಪಿಎಸ್‌ಸಿ ಇನ್ನು ಮುಂದೆ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X