KPSC | ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ; ’12 ಕೋಟಿ ರೂ.’ ಡೀಲ್ ಬಹಿರಂಗ

Date:

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬರೋಬ್ಬರಿ 12 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಕ್ರಮ ಹಣಕಾಸು ವ್ಯವಹಾರ ನಡೆದಿದೆ ಎಂಬ ಗಂಭೀರ ಮಾಹಿತಿ ಹೊರಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡವು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದೆ. ಈ ವೇಳೆ, ಅಕ್ರಮ ಹಣ ವ್ಯವಹಾರ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

- Advertisement -

ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಕನಿಷ್ಠ 24 ಅಭ್ಯರ್ಥಿಗಳು ಈ ಅಕ್ರಮ ಜಾಲದೊಂದಿಗೆ ಹಣದ ಡೀಲ್ ಮಾಡಿಕೊಂಡಿದ್ದರು ಎಂಬುದು ತಿಳಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಹಣದ ಹಾದಿ, ಯಾರಿಗೆ ಎಷ್ಟು ಮೊತ್ತ ತಲುಪಿದೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಯಾರ್ಯಾರು ಪಾತ್ರವಹಿಸಿದ್ದಾರೆ ಎಂಬುದರ ಕುರಿತು ತನಿಖೆ ಮುಂದುವರಿದಿದೆ ಎಂದು ಸಿಐಡಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಭ್ಯರ್ಥಿಗಳ ಆರ್ಥಿಕ ಹಿನ್ನೆಲೆ ಮತ್ತು ಹುದ್ದೆಯ ಬೇಡಿಕೆಗೆ ತಕ್ಕಂತೆ ಅಕ್ರಮಕೋರರು ದರ ನಿಗದಿ ಮಾಡಿದ್ದರು. ಒಬ್ಬೊಬ್ಬ ಅಭ್ಯರ್ಥಿಯಿಂದ ಕನಿಷ್ಠ 20 ಲಕ್ಷ ರೂಪಾಯಿಯಿಂದ ಹಿಡಿದು ಗರಿಷ್ಠ 80 ಲಕ್ಷ ರೂಪಾಯಿಯವರೆಗೆ ಬೃಹತ್ ಮೊತ್ತದ ಬೇಡಿಕೆ ಇಡಲಾಗಿತ್ತು. ಈ ಮೂಲಕ 24 ಜನರಿಂದ ಒಟ್ಟು 12 ಕೋಟಿ ರೂಪಾಯಿಗೂ ಅಧಿಕ ಮೊತ್ತ ಸಂಗ್ರಹಿಸಲು ಸಂಚು ರೂಪಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿರುವುದಾಗಿ ವರದಿಯಾಗಿದೆ.

ಅಚ್ಚರಿಯ ಸಂಗತಿಯೆಂದರೆ, ಈ ಜಾಲವು ಅಭ್ಯರ್ಥಿಗಳಿಗೆ ಪರೀಕ್ಷೆಗೆ ಮುನ್ನವೇ ರಹಸ್ಯ ಸ್ಥಳಗಳಲ್ಲಿ ಪ್ರತ್ಯೇಕ ತರಬೇತಿ ನೀಡಿ, ಪರೀಕ್ಷೆಯಲ್ಲಿ ಅಕ್ರಮ ಎಸಗಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಟ್ಟಿತ್ತು. ಇದಕ್ಕಾಗಿ ಮುಂಗಡವಾಗಿ ಭಾರಿ ಪ್ರಮಾಣದ ಹಣವನ್ನು ಪಡೆದುಕೊಳ್ಳಲಾಗಿತ್ತು. ತನಿಖೆ ವೇಳೆ ಬಹುಪಾಲು ಹಣವು ನಗದು ರೂಪದಲ್ಲೇ ಕೈಬದಲಾಗಿದೆ. ಪ್ರಮುಖ ಆರೋಪಿ ಬಸವರಾಜ್‌ಗೆ ಸೇರಿದ ಬೀದರ್‌ನ ಸಹಕಾರ ಸಂಘದ ಬ್ಯಾಂಕ್ ಖಾತೆಯೊಂದರಲ್ಲೇ ಸುಮಾರು 75 ಲಕ್ಷ ರೂಪಾಯಿ ಅಕ್ರಮ ಹಣಕಾಸಿನ ವಹಿವಾಟು ನಡೆದಿರುವುದನ್ನು ಸಿಐಡಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಪ್ರಸ್ತುತ ಸಿಐಡಿ ತನಿಖಾಧಿಕಾರಿಗಳು ಬ್ಯಾಂಕ್ ಖಾತೆಗಳ ವಿವರ, ಡಿಜಿಟಲ್ ಸಾಕ್ಷ್ಯಗಳು ಹಾಗೂ ನಗದು ಚಲಾವಣೆಯ ದಾಖಲೆಗಳನ್ನು ಜಪ್ತಿ ಮಾಡಿ ಪರಿಶೀಲನೆ ತೀವ್ರಗೊಳಿಸಿದ್ದಾರೆ. ಪರೀಕ್ಷೆಯ ರಹಸ್ಯ ಮೂಲಗಳನ್ನು ಆರೋಪಿಗಳು ಹೇಗೆ ತಲುಪಿದ್ದರು, ಸಂಗ್ರಹಿಸಿದ ಕೋಟ್ಯಂತರ ರೂಪಾಯಿ ಹಣ ಯಾರ್ಯಾರ ಖಾತೆಗೆ ತಲುಪಿದೆ ಹಾಗೂ ಈ ಜಾಲದ ಹಿಂದೆ ಕೆಪಿಎಸ್‌ಸಿ ಮತ್ತು ಇಲಾಖೆಯ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆಯೇ ಎಂಬ ಆಯಾಮದಲ್ಲಿ ಸಿಐಡಿ ತನಿಖೆ ನಡೆಸುತ್ತಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಅ.27, 28ರಂದು ಅಖಿಲ ಕರ್ನಾಟಕ 23ನೇ ಹಸ್ತಪ್ರತಿ ಸಮ್ಮೇಳನ

ಹಸ್ತಪ್ರತಿಶಾಸ್ತ್ರ ವಿಭಾಗ, ಕನ್ನಡ ವಿಶ್ವವಿದ್ಯಾಲಯ ಹಂಪಿ ಕರ್ನಾಟಕ ಕಲಾ, ವಿಜ್ಞಾನ ಮತ್ತು...

ಸೇವೆ ಮೊದಲು, ಪರಿಶೀಲನೆ ಆಮೇಲೆ: ಫಲಾನುಭವಿಗಳಿಗೆ ತ್ವರಿತ ಸೇವೆ ನೀಡಲು ರಾಜ್ಯ ಸರ್ಕಾರದ ಹೊಸ ಆದೇಶ

ರಾಜ್ಯ ಸರ್ಕಾರವು ನಾಗರಿಕರಿಗೆ ಮುಂಚಿತವಾಗಿ ಅರ್ಹತೆಯ ಪರಿಶೀಲನೆಯಿಲ್ಲದೆ ಸೇವೆಗಳು ಮತ್ತು ಯೋಜನೆಯ...

ಅವಳ ಕಣ್ಣೋಟ | ‘ಉಯರೆ’- ಸುಟ್ಟದ್ದು ಮುಖವಷ್ಟೇ, ಬದುಕಿನ ಮೇಲಿನ ಹಕ್ಕಲ್ಲ…

ಒಬ್ಬ ಮಹಿಳೆ ತನ್ನನ್ನು ನಿರಾಕರಿಸಿದಳೆಂಬ ಕಾರಣಕ್ಕೆ ಆಕೆಯ ಬದುಕನ್ನೇ ನಾಶಮಾಡುವ ಹಕ್ಕು...