KPSC ನೇಮಕಾತಿ ಅಕ್ರಮ: ಶಿವಶಂಕರಪ್ಪಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್‌ ನಕಾರ; ಬಂಧನ ಸಾಧ್ಯತೆ

Date:

ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅವರ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದೀಗ, ಯಾವುದೇ ಸಂದರ್ಭದಲ್ಲಾದರೂ ಶಿವಶಂಕರಪ್ಪ ಅವರನ್ನು ಸಿಐಡಿ ಪೊಲೀಸರು ಬಂಧಿಸುವ ಸಾಧ್ಯತೆ ಇದೆ.

- Advertisement -

ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು, “ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತವರಿಂದ ಹೆಚ್ಚಿನ ಪಾರದರ್ಶಕತೆ ಮತ್ತು ಜವಾಬ್ದಾರಿಯನ್ನು ಸಮಾಜ ನಿರೀಕ್ಷಿಸುತ್ತದೆ. ಹಣ ಮತ್ತು ಪ್ರಭಾವ ಬಳಸಿ ಅನರ್ಹ ವ್ಯಕ್ತಿಗಳನ್ನು ವ್ಯವಸ್ಥೆಯೊಳಗೆ ತಂದರೆ ಭವಿಷ್ಯದ ಆಡಳಿತ ಮತ್ತು ಸಮಾಜದ ಸ್ಥಿತಿ ಏನಾಗಬಹುದು” ಎಂದು ತೀವ್ರ ಆತಂಕ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದೇ ವೇಳೆ, ಶಿವಶಂಕರಪ್ಪ ಅವರು ತಮ್ಮ ಪುತ್ರಿಗೆ ಸರ್ಕಾರಿ ಉದ್ಯೋಗ ದೊರೆತ ವಿಚಾರದಲ್ಲಿ ಕೆಲವು ಪ್ರಮುಖ ಮಾಹಿತಿಗಳನ್ನು ಮರೆಮಾಚಿದ್ದಾರೆ ಎಂಬ ಪ್ರಾಸಿಕ್ಯೂಷನ್ ವಾದವನ್ನೂ ನ್ಯಾಯಾಲಯ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅರ್ಹತೆಯಿಲ್ಲದ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಟ್ಟ ಆರೋಪಗಳ ಕುರಿತು ಸಿಐಡಿ ತನಿಖಾ ತಂಡ ತನಿಖೆ ನಡೆಸುತ್ತಿದೆ. ಪರೀಕ್ಷೆಗೂ ಮುನ್ನವೇ ಆಯ್ದ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ತಲುಪಿಸಿ, ಮಧ್ಯವರ್ತಿಗಳ ಮೂಲಕ ಲಕ್ಷಾಂತರ ರೂಪಾಯಿ ಡೀಲ್ ಕುದುರಿಸಲಾಗಿತ್ತು. ಕೆಲವು ಅಭ್ಯರ್ಥಿಗಳನ್ನು ರಹಸ್ಯವಾಗಿ ಹೋಟೆಲ್ ಮತ್ತು ರೆಸಾರ್ಟ್‌ಗಳಲ್ಲಿ ಉಳಿಸಿ, ಪ್ರಶ್ನೋತ್ತರಗಳ ತರಬೇತಿ ನೀಡಲಾಗಿತ್ತು ಎಂಬ ಆಘಾತಕಾರಿ ವಿಚಾರವನ್ನು ತನಿಖಾ ಮೂಲಗಳು ಬಹಿರಂಗಪಡಿಸಿವೆ.

ಈ ಇಡೀ ಜಾಲದಲ್ಲಿ ಶಿವಶಂಕರಪ್ಪ ಅವರ ಪಾತ್ರದ ಕುರಿತು ಪರಿಶೀಲಿಸುತ್ತಿರುವ ಸಿಐಡಿ, ಪರೀಕ್ಷೆಯ ದಿನದಂದು ಅಭ್ಯರ್ಥಿಗಳು, ಮಧ್ಯವರ್ತಿಗಳು ಮತ್ತು ಕೆಪಿಎಸ್‌ಸಿ ಅಧಿಕಾರಿಗಳ ನಡುವೆ ನಡೆದ ಇಂಟರ್‌ನೆಟ್ ಆಧಾರಿತ ಕರೆ ಹಾಗೂ ಸಂವಹನಗಳ ಡಿಜಿಟಲ್ ದಾಖಲೆಗಳನ್ನು ಜಾಲಾಡುತ್ತಿದೆ.

ಈ ಲೇಖನ ಓದಿದ್ದೀರಾ?: ಗೌರಿ ಲಂಕೇಶ್ | ಜೆನ್ ಝಿ ಪೀಳಿಗೆಯ ಕನಸು ಕಂಡಿದ್ದ ’ದತ್ತು’ ತಾಯಿ!

ಇದಕ್ಕೂ ಮುನ್ನ, ಆಗಸ್ಟ್ 11ರಂದು, ಸಿಐಡಿ ಪ್ರಕರಣಗಳ ವಿಶೇಷ ನ್ಯಾಯಾಲಯವೂ ಸಹ ಶಿವಶಂಕರಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಭ್ರಷ್ಟಾಚಾರರಹಿತ ಮತ್ತು ನ್ಯಾಯಸಮ್ಮತ ಪರೀಕ್ಷೆ ನಡೆಸುವುದು ಕೆಪಿಎಸ್‌ಸಿ ಅಧ್ಯಕ್ಷರ ಮೂಲ ಕರ್ತವ್ಯವಾಗಿದ್ದು, ಆರೋಪದ ತೀವ್ರತೆ ಹೆಚ್ಚಿರುವುದರಿಂದ ಜಾಮೀನು ನೀಡಲಾಗದು ಎಂದು ವಿಶೇಷ ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ಇನ್ನೊಂದೆಡೆ, ಸಾಹುಕಾರ್ ಕುಟುಂಬದವರ ಪ್ರತ್ಯೇಕ ಪ್ರಕರಣಗಳ ವಿಚಾರವೂ ಕಾನೂನು ಅಂಗಳದಲ್ಲಿದೆ. ಶಿವಶಂಕರಪ್ಪ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ನಕಲಿ ಆದಾಯ ಪ್ರಮಾಣಪತ್ರದ ಮೂಲಕ ‘3ಬಿ’ ಮೀಸಲಾತಿ ಪಡೆಯಲು ಯತ್ನಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಜುಲೈ 24ರಂದು ಬೆಂಗಳೂರಿನ ಸತ್ರ ನ್ಯಾಯಾಲಯ ಸುಮಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ತಮ್ಮ ಮೇಲಿನ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಸುಮಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿಲ್ಲ. ಸುಳ್ಳು ಆದಾಯ ಘೋಷಣೆಯು ‘ಮೋಸ’ದ ಸ್ವರೂಪದ್ದಾಗಿದೆ ಎಂದು ನ್ಯಾಯಾಲಯ ಖಾರವಾಗಿ ಹೇಳಿದ್ದು, ಸುಮಾ ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ.

ಅಧಿಕೃತ ನ್ಯಾಯಾಲಯದ ದಾಖಲೆಗಳ ಪ್ರಕಾರ, ಶಿವಶಂಕರಪ್ಪ ಅವರ ಇಬ್ಬರು ಪುತ್ರಿಯರು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಹಿರಿಯ ಮಗಳು ಅನುರಾಧಾ ಸಾಮಾನ್ಯ ಮಹಿಳಾ ವಿಭಾಗದಲ್ಲಿ ಆಯ್ಕೆಯಾಗಿದ್ದರೆ, ಕಿರಿಯ ಮಗಳು ಸುಮಾ ಕುಟುಂಬದ ವಾರ್ಷಿಕ ಆದಾಯ ಕೇವಲ 40,000 ರೂ. ಎಂದು ನಮೂದಿಸಿ ‘3ಬಿ’ ಮೀಸಲಾತಿ ಕೋರಿದ್ದರು. ಈ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಸುಮಾ ಅವರ ಪ್ರಮಾಣಪತ್ರವನ್ನು ತಿರಸ್ಕರಿಸಿ, ಅವರನ್ನು ಆಯೋಗದ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...