ರಾಜ್ಯದ ಪ್ರಮುಖ ಜಲಾಶಯ ಕೆಆರ್‌ಎಸ್ ಐತಿಹಾಸಿಕ ದಾಖಲೆ ಬರೆಯಲು ಸಿದ್ಧವಾಗುತ್ತಿದೆ. ಸದ್ಯ ಜಲಾಶಯದಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.
ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ ಸಾಗುತ್ತಿದ್ದು, ಈಗಾಗಲೇ ಕೆಆರ್‌ಎಸ್ ಜಲಾಶಯ 119.40 ಅಡಿ ತುಂಬಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್ ಆರೋಪಗಳೂ, ಸರ್ಕಾರದ ನೈತಿಕತೆಯೂ
1932ರಲ್ಲಿ ಜಲಾಶಯ ನಿರ್ಮಾಣವಾದಾಗಿನಿಂದ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಇಷ್ಟೊಂದು ಪ್ರಮಾಣದ ನೀರು ಸಂಗ್ರಹವಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಅಂತ್ಯ ಅಥವಾ ಆಗಸ್ಟ್‌ನಲ್ಲಿ ಜಲಾಶಯ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಕೆಆರ್‌ಎಸ್ ಜಲಾಶಯ 119.40 ಅಡಿ ಭರ್ತಿಯಾಗಿದೆ.
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ 13,359 ಕ್ಯುಸೆಕ್ ಒಳಹರಿವಿದ್ದು, ಭರ್ತಿಯಾಗುವ ಸಮಯದಲ್ಲಿ ಒಳಹರಿವು ಕಡಿಮೆಯಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 42.291 ಟಿಎಂಸಿ ನೀರು ಸಂಗ್ರಹವಾಗಿದೆ.