ಕನ್ನಡಿಗರ ರಕ್ಷಣೆಗೆ ಕರವೇಯಿಂದ ರಾಜ್ಯವ್ಯಾಪಿ ಅಭಿಯಾನ: ಸಮಗ್ರ ವಲಸೆ ನೀತಿಗೆ ಆಗ್ರಹ

Date:

ರಾಜ್ಯದಲ್ಲಿ ಇತ್ತೀಚೆಗೆ ಕನ್ನಡಿಗರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಅಕ್ರಮ ವಲಸೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ಕನ್ನಡಿಗರ ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆಗಾಗಿ ರಾಜ್ಯವ್ಯಾಪಿ ಜನಜಾಗೃತಿ ಮತ್ತು ಹೋರಾಟದ ಅಭಿಯಾನವನ್ನು ಹಮ್ಮಿಕೊಂಡಿದೆ.

- Advertisement -

​ಈ ಕುರಿತು ಮಾಹಿತಿ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು, ಇತ್ತೀಚಿನ ದಿನಗಳಲ್ಲಿ ಹೊರರಾಜ್ಯಗಳಿಂದ ಬಂದಿರುವ ಕೆಲವರಿಂದ ಕನ್ನಡಿಗರ ಮೇಲೆ ಹಲ್ಲೆ, ಬೆದರಿಕೆ ಹಾಗೂ ಕನ್ನಡ ಭಾಷೆಗೆ ಅಗೌರವ ತೋರುವ ಆತಂಕಕಾರಿ ಘಟನೆಗಳು ನಡೆಯುತ್ತಿವೆ. ಉದ್ಯೋಗ ಮತ್ತು ಬದುಕರಸಿ ಬರುವವರನ್ನು ಕನ್ನಡಿಗರು ಸದಾ ಸ್ವಾಗತಿಸುತ್ತಾರೆ. ಆದರೆ, ಇಲ್ಲಿಗೆ ಬಂದು ಕಾನೂನು ಉಲ್ಲಂಘಿಸುವುದು ಹಾಗೂ ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹೊರರಾಜ್ಯಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಲಸೆಯಿಂದಾಗಿ ಬೆಂಗಳೂರಿನಂತಹ ಮಹಾನಗರಗಳಲ್ಲಿ ಮೂಲಸೌಕರ್ಯಗಳ ಮೇಲೆ ತೀವ್ರ ಒತ್ತಡ ಬೀಳುತ್ತಿದೆ. ವಸತಿ ಸಮಸ್ಯೆ, ಬಾಡಿಗೆ ದರ ಏರಿಕೆ, ಸಂಚಾರ ದಟ್ಟಣೆಯ ಜೊತೆಗೆ ಉದ್ಯೋಗದಲ್ಲೂ ಸ್ಥಳೀಯರಿಗೆ ತೀವ್ರ ಪೈಪೋಟಿ ಎದುರಾಗುತ್ತಿದೆ. ಈ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ‘ಸಮಗ್ರ ವಲಸೆ ನೀತಿ’ಯನ್ನು ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಕಟ್ಟುನಿಟ್ಟಿನ ಕಾನೂನು ರೂಪಿಸಿ, ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಸರ್ಕಾರಿ ಕಚೇರಿ, ಸಾರ್ವಜನಿಕ ಸೇವೆ ಹಾಗೂ ವ್ಯಾಪಾರ-ವಹಿವಾಟುಗಳಲ್ಲಿ ಕನ್ನಡದ ಬಳಕೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡಿಗರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಯಾವುದೇ ರಾಜಕೀಯ ಅಥವಾ ಸಾಮಾಜಿಕ ಒತ್ತಡಕ್ಕೆ ಮಣಿಯದೆ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕನ್ನಡಿಗರ ಮೇಲೆ ಕೈ ಎತ್ತಿದರೆ ಕಠಿಣ ಶಿಕ್ಷೆ ಖಚಿತ ಎಂಬ ಸ್ಪಷ್ಟ ಸಂದೇಶವನ್ನು ಸರ್ಕಾರ ರವಾನಿಸಬೇಕು. ಕರ್ನಾಟಕದಲ್ಲಿ ಬದುಕುವ ಹಕ್ಕು ಎಲ್ಲರಿಗೂ ಇದೆ, ಆದರೆ ಕನ್ನಡಿಗರ ಹಕ್ಕುಗಳನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಕನ್ನಡಿಗರ ಸಹನೆಯನ್ನು ಯಾರೂ ದೌರ್ಬಲ್ಯವೆಂದು ಭಾವಿಸಬಾರದು ಎಂದು ಅವರು ಗುಡುಗಿದ್ದಾರೆ.

ಕರವೇಯ ಈ ಹೋರಾಟವು ಯಾವುದೇ ಭಾಷೆ, ರಾಜ್ಯ ಅಥವಾ ಸಮುದಾಯದ ವಿರುದ್ಧದ ದ್ವೇಷದ ಅಭಿಯಾನವಲ್ಲ. ಇದು ಕೇವಲ ಕನ್ನಡಿಗರ ಸುರಕ್ಷತೆ, ಉದ್ಯೋಗ ಹಕ್ಕು ಹಾಗೂ ಭಾಷೆಯ ಗೌರವವನ್ನು ಕಾಪಾಡುವ ಅಭಿಯಾನವಾಗಿದೆ. ಈ ವಿಚಾರಗಳ ಕುರಿತು ರಾಜ್ಯಾದ್ಯಂತ ಜಾಗೃತಿ ಮೂಡಿಸಿ, ಸರ್ಕಾರದ ಮುಂದಿಡಲಾಗುವುದು. ಅಗತ್ಯಬಿದ್ದರೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ನಾರಾಯಣಗೌಡ ಅವರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...