ಕೆಎಸ್‌ಆರ್‌ಟಿಸಿ ಸಾಧನೆಗೆ ಕೇಂದ್ರ ಸರ್ಕಾರದಿಂದ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ‌

Date:

ಪ್ರಯಾಣಿಕರ ಅನುಕೂಲಕ್ಕೆ ಹಲವಾರು ಜನಪರ ಯೋಜನೆ ಪರಿಚಯಿಸಿ ಈಗಾಗಲೇ ಹಲವು ಪ್ರಶಸ್ತಿ ಗಳಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಹೊಸ ಸಾಧನೆಗೆ ಕೇಂದ್ರ ಸರ್ಕಾರವು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

- Advertisement -

ಕೇಂದ್ರ ಸರ್ಕಾರದ ವಸತಿ ಮತ್ರು ನಗರಾಭಿವೃದ್ಧಿ ಸಚಿವಾಲಯವು ನೀಡುವ 2025ನೇ ಸಾಲಿನ Award of Excellence in Urban Transport ಪ್ರಶಸ್ತಿ ಲಭಿಸಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರದ ಸಚಿವರಾದ ಮನೋಹರ್ ಲಾಲ್ ಕಟ್ಟರ್ ಹಾಗೂ ವಸತಿ‌ ಮತ್ತು ನಗರಾಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವ ತೋಕನ್ ಸಾಹು ಅವರು‌ ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷಾ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

THE STATE, WHICH HAS IMPLEMENTED BEST URBAN TRANSPORT PROJECTS DURING THE PREVIOUS YEAR ವರ್ಗದಲ್ಲಿ ನಿಗಮದ ಮೈಸೂರು ನಗರ ಸಾರಿಗೆಯ ‘ಧ್ವನಿಸ್ಪಂದನ‌’ ಯೋಜನೆಗೆ ಭಾರತ ಸರ್ಕಾರದಿಂದ ಈ ಪ್ರಶಸ್ತಿ ಲಭಿಸಿದೆ.

ಕೆಎಸ್‌ಆರ್‌ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಅಂಧ ಪ್ರಯಾಣಿಕರಿಗಾಗಿ ‘ಧ್ವನಿ ಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದೆ.

ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಪ್ರಯಾಣ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸಂಚಾರದ ಸ್ವಾತಂತ್ರ್ಯದಲ್ಲಿ ದೊಡ್ಡಮಟ್ಟದ ಬದಲಾವಣೆಗೆ ಕಾರಣವಾಗಿರುವುದಕ್ಕೆ ಈ ಪ್ರಶಸ್ತಿ ಲಭಿಸಿದೆ.

ಧ್ವನಿ ಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್, ಐಐಟಿ ದೆಹಲಿಯ ರೈಸ್ಡ್ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವಾಗಿದ್ದು, ಜರ್ಮನಿಯ GEZ ಸಂಸ್ಥೆಯ ಸಹಕಾರದೊಂದಿಗೆ ದೃಷ್ಟಿವಿಕಲ‌ ಚೇತನ ಬಸ್ ಬಳಕೆದಾರರಿಗೆ ಬಸ್‌ಗಳನ್ನು ಗುರುತಿಸಲು ಹಾಗೂ ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಪ್ರವೇಶದ ಸ್ಥಳವನ್ನು ಸುರಕ್ಷಿತವಾಗಿ ಕಂಡುಹಿಡಿಯಲು ಸಹಾಯ ಮಾಡುತ್ತದೆ. 400 ಕ್ಕೂ ಹೆಚ್ಚು ದೃಷ್ಟಿ ವಿಕಲ ಚೇತನ ಬಳಕೆದಾರರಿಗೆ ಇದರ ಬಳಕೆಯ ಕುರಿತು ತರಬೇತಿ ನೀಡಲಾಗಿದೆ

410685

ಸರ್ಕಾರ, ಶಿಕ್ಷಣ‌ ಸಂಸ್ಥೆ, ಸ್ವಯಂ ಸೇವಾ‌ ಸಂಸ್ಥೆ‌‌ಗಳ ಸಹಯೋಗದೊಂದಿದೆ ಜಾರಿಗೆ ತಂದಿರುವ ದೇಶದ ಮಾದರಿ‌ ಯೋಜನೆ ಎಂಬ‌‌ ಹೆಗ್ಗಳಿಕೆ‌ ಪಡೆದಿದ್ದು, ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಕ್ಕಾಗಿ ಕೇಂದ್ರ ಸರ್ಕಾರದ ವಸತಿ‌ ಮತ್ತು ನಗರಾಭಿವೃದ್ಧಿ ಸಚಿವಾಲಯವು ಈ ಪ್ರಶಸ್ತಿಯನ್ನು ನೀಡಿ, ಗೌರವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...