ಕುಮಾರಸ್ವಾಮಿ ಮಾತಿಗೆ ಅವರದ್ದೇ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್‌ ಲೇವಡಿ

Date:

  • ಕುಮಾರಸ್ವಾಮಿ ಮಾತುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವೇ?
  • ಪ್ರಶ್ನೆ ಮಾಡಿದವರನ್ನ ಹೊರ ದಬ್ಬುವ ಚಾಳಿ ಕುಮಾರಸ್ವಾಮಿಗಿದೆ: ಕಿಡಿ

ಕುಮಾರಸ್ವಾಮಿಯವರ ಮಾತುಗಳಿಗೆ, ತೀರ್ಮಾನಗಳಿಗೆ ಅವರದ್ದೇ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ. ಹೀಗಿರುವಾಗ ಕಾಂಗ್ರೆಸ್ ಪಕ್ಷ ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವೇ?! ಎಂದು ಕಾಂಗ್ರೆಸ್‌ ಕುಟುಕಿದೆ.

- Advertisement -

ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ಜೆಡಿಎಸ್‌ನಲ್ಲಿ ಈಗ ಸಿಎಂ ಇಬ್ರಾಹಿಂ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಸಮರ ನಡೆಯುತ್ತಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಕರ್ನಾಟಕ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಟ್ವೀಟ್‌ ಮೂಲಕ ಕಿಡಿಕಾರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕುಮಾರಸ್ವಾಮಿಯವರು ರಾಜಕೀಯ ತೀರ್ಮಾನ ತೆಗೆದುಕೊಳ್ಳಲು ಜೆಡಿಎಸ್ ಪಕ್ಷದ ಯಾವುದೇ ಪದಾಧಿಕಾರಿ ಅಲ್ಲ. ಅಪ್ಪನ ಹೆಸರಿನಲ್ಲಿ ನಡೆಸುವ ದರ್ಬಾರು! ಪ್ರಶ್ನೆ ಮಾಡಿದವರನ್ನ ಹೊರ ದಬ್ಬುವ ಚಾಳಿ! ರಾಜ್ಯ ರಾಜಕೀಯ ವ್ಯಾಪಾರದ ದಲ್ಲಾಳಿ!” ಎಂದು ಟೀಕಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ

“ಇತ್ತೀಚಿನ ದಿನಗಳಲ್ಲಿ ಹೊರಬರುತ್ತಿರುವ ಸತ್ಯ ಏನೆಂದರೆ ಮೈತ್ರಿ ಇರುವುದು ಅಮಿತ್ ಶಾ ಹಾಗೂ ಕುಮಾರಸ್ವಾಮಿ ನಡುವೆ ಹೊರತು ಬಿಜೆಪಿ ಜೆಡಿಎಸ್ ನಡುವೆ ಅಲ್ಲ! ಇತ್ತ ಬಿಜೆಪಿ ನಾಯಕರಿಗೂ ಮೈತ್ರಿ ಬಗ್ಗೆ ಅಸಮಾಧಾನ, ಅತ್ತ ಒರಿಜಿನಲ್ ಜೆಡಿಎಸ್ ನವರಿಗೂ ಅಸಮಾಧಾನ. ಇಂತಹದ್ದನ್ನು ಮೈತ್ರಿ ಎನ್ನಲಾದೀತೆ” ಎಂದು ಪ್ರಶ್ನಿಸಿದೆ.

“ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಪಕ್ಷದ ತೀರ್ಮಾನಗಳನ್ನು ನಾನೇ ತೆಗೆದುಕೊಳ್ಳುವುದು ಎಂದು ಕುಮಾರಸ್ವಾಮಿಯವರಿಗೆ ನೀವು “ಲೆಕ್ಕಕ್ಕಿಲ್ಲ” ಎಂದು ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲ!” ಎಂದು ಲೇವಡಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...