ಪಂಜಾಬ್‌ಗೆ ತೆರಳಿದ್ದ ರೈತ ಹೋರಾಟಗಾರ ಕುರುಬೂರು ಶಾಂತಕುಮಾರ್ ಅವರಿದ್ದ ಕಾರು ಪಟಿಯಾಲ ಬಳಿ ಅಪಘಾತಕ್ಕೀಡಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಏರ್ ಆ್ಯಂಬುಲೆನ್ಸ್ ಮೂಲಕ ಕರ್ನಾಟಕ ಸರ್ಕಾರ ಬೆಂಗಳೂರಿಗೆ ಕರೆತಂದಿದೆ.
ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಭಾಗಿಯಾಗಲು ಕುರುಬೂರು ಶಾಂತಕುಮಾರ್ ಪಂಜಾಬ್‌ಗೆ ತೆರಳಿದ್ದರು. ಮೂರು ದಿನಗಳ ಹಿಂದೆ ಅಪಘಾತ ಸಂಭವಿಸಿತ್ತು. ಅವರಿಗೆ ಪಟಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ, ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯು, “ಶಾಂತಕುಮಾರ್ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ” ಎಂದು ತಿಳಿಸಿದೆ.
“ಅಪಘಾತದ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ ಅವರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ” ಎಂದು ತಿಳಿಸಿದೆ.