ವಿದ್ಯುತ್ ಕೊರತೆ | ಹೆಚ್ಚು ಕಲ್ಲಿದ್ದಲು ಪೂರೈಕೆಗಾಗಿ ಕೇಂದ್ರಕ್ಕೆ ರಾಜ್ಯ ಒತ್ತಾಯ

Date:

ಕರ್ನಾಟಕದಲ್ಲಿ ವಿದ್ಯುತ್ ಬಿಕ್ಕಟ್ಟು ಎದುರಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳ ತಂಡದೊಂದಿಗೆ ದೆಹಲಿಗೆ ದೌಡಾಯಿಸಿದ್ದು, ಕೇಂದ್ರ ಸಚಿವಾಲಯದೊಂದಿಗೆ ಸಭೆ ನಡೆಸಿದ್ದಾರೆ. ಕಲ್ಲಿದ್ದಲು ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೆಚ್ಚುವರಿ ಎರಡು ರೇಕ್ ಕಲ್ಲಿದ್ದಲು ಪೂರೈಕೆ ಮಾಡುವಂತೆ ಕೋರಿದ್ದಾರೆ.

- Advertisement -

ಸಭೆಯಲ್ಲಿ ಜಾರ್ಜ್ ಅವರು ಕೇಂದ್ರ ಇಂಧನ ಸಚಿವ ಆರ್‌.ಕೆ ಸಿಂಗ್‌ ಅವರಿಗೆ ಕೇಂದ್ರೀಯ ಉತ್ಪಾದನಾ ಕೇಂದ್ರಗಳಲ್ಲಿ ಕರ್ನಾಟಕದ ಪಾಲನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ಏಕೆಂದರೆ, ಪ್ರತಿದಿನ ವಿದ್ಯುತ್‌ಗೆ ಬೇಡಿಕೆ 5000-7000MWರಷ್ಟು ಹೆಚ್ಚಾಗಿದೆ ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

“ದಿನನಿತ್ಯ ಸಿಗುವ ಕಲ್ಲಿದ್ದಲನ್ನು ಬಳಸುತ್ತಿದ್ದೇವೆ. ಬೇಡಿಕೆ ಹೆಚ್ಚಿದಂತೆ ಬಳಕೆ ಹೆಚ್ಚಿದೆ. ಬೇಡಿಕೆಯನ್ನು ಪೂರೈಸಲು ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು, ನಾವು ಇನ್ನೂ ಎರಡು ರೇಕ್ ಕಲ್ಲಿದ್ದಲಿಗಾಗಿ ಮನವಿ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಕೇಂದ್ರವು ಒಪ್ಪಿದೆ. ಆದರೆ, ದೇಶಾದ್ಯಂತ ವಿದ್ಯುತ್ ಪರಿಸ್ಥಿತಿಯು ಬಿಗಡಾಯಿಸಿರುವ ಕಾರಣ ಆತಂಕವನ್ನು ವ್ಯಕ್ತಪಡಿಸಿದೆ. ನಾಗ್ಪುರ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಕಲ್ಲಿದ್ದಲಿನ ಗುಣಮಟ್ಟವೂ ಕುಸಿಯುತ್ತಿದೆ.” ಎಂದು ಇಲಾಖೆಯ ಮೂಲಗಳು ತಿಳಿಸಿವೆ.

“ರಾಜ್ಯದಲ್ಲಿ ಪ್ರಸ್ತುತ ಸುಮಾರು 1.7-2 ಲಕ್ಷ ಟನ್ ಕಲ್ಲಿದ್ದಲು ಇದೆ. ಇದನ್ನು ಪ್ರತಿದಿನ ಮೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿ ಬಳಸಲಾಗುತ್ತಿದೆ. ಕರ್ನಾಟಕವು ಒಡಿಶಾ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಿಂದ ದಿನಕ್ಕೆ 13-14 ರೇಕ್‌ಗಳಷ್ಟು ಕಲ್ಲಿದ್ದಲನ್ನು ಪಡೆಯುತ್ತಿದೆ (ಪ್ರತಿ ರೇಕ್‌ಗೆ ಸುಮಾರು 4,000 ಟನ್‌). ರಾಜ್ಯವು ಪ್ರತಿದಿನ 2,118MW ಉಷ್ಣ ವಿದ್ಯುತ್ ಉತ್ಪಾದಿಸುತ್ತಿದೆ. ಅಲ್ಲದೆ, ಜಲ ವಿದ್ಯುತ್‌ ಸೇರಿದಂತೆ 5,919MW ವಿದ್ಯುತ್ ಉತ್ಪಾದಿಸುತ್ತಿದೆ” ಇಲಾಖೆ ಹೇಳಿದೆ.

“ನಾವು ಈ ವರ್ಷ ಯಾವುದೇ ಥರ್ಮಲ್ ಸ್ಟೇಷನ್‌ಗಳನ್ನು ಮುಚ್ಚಿಲ್ಲ. ಈಗ, ಮಾನ್ಸೂನ್ ಮಳೆ ಸರಿಯಾಗಿ ಆಗದ ಕಾರಣ ಉಷ್ಣ ಶಕ್ತಿಯ ಬೇಡಿಕೆ ಹೆಚ್ಚಾಗಿದೆ. ಕಳೆದ ಐದು ವರ್ಷಗಳಲ್ಲಿ ಸ್ಥಾಪಿತ ಸಾಮರ್ಥ್ಯದಲ್ಲಿ ಯಾವುದೇ ಹೆಚ್ಚಳವಾಗಿಲ್ಲ” ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...

ವಿಚ್ಛೇದನ ಪಡೆದರೂ ಮಕ್ಕಳಿಗೆ ಉತ್ತಮ ತಂದೆ-ತಾಯಿಯಾಗಿರಿ: ಹೈಕೋರ್ಟ್ ಸಲಹೆ

"ವಿಚ್ಛೇದನದ ನಂತರವೂ ಮಕ್ಕಳ ಮುಂದೆ ಪರಸ್ಪರ ನಿಂದಿಸದೆ, ಅವರಿಗೆ ಉತ್ತಮ ತಂದೆ-ತಾಯಿಯಾಗಿ...