ಬೆಂಗಳೂರಿನ ರೆಸ್ಟೋರೆಂಟ್‌ಗಳಲ್ಲಿ ನೈರ್ಮಲ್ಯದ ಕೊರತೆ: ಪ್ರತಿ ಮೂವರಲ್ಲಿ ಒಬ್ಬರಿಗೆ ಕಳಪೆ ಅನುಭವ

Date:

ಬೆಂಗಳೂರಿನ ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳಲ್ಲಿ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯದ ಬಗ್ಗೆ ಕಳವಳಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ನಗರದ ಹವಾನಿಯಂತ್ರಿತ (ಎಸಿ) ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡುವ ಗ್ರಾಹಕರ ಪೈಕಿ ಶೇಕಡಾ 29ರಷ್ಟು, ಅಂದರೆ ಸರಿಸುಮಾರು ಪ್ರತಿ ಮೂವರಲ್ಲಿ ಒಬ್ಬರು ನೈರ್ಮಲ್ಯದ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಇತ್ತೀಚಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ.

- Advertisement -

‘ಲೋಕಲ್ ಸರ್ಕಲ್ಸ್’ ಸಂಸ್ಥೆಯು ಆಗಸ್ಟ್ 10 ರಂದು ಬಿಡುಗಡೆ ಮಾಡಿರುವ ಈ ಸಮೀಕ್ಷೆಯಲ್ಲಿ ಕಳೆದ 12 ತಿಂಗಳಲ್ಲಿ ಎಸಿ ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿದ್ದ ಸುಮಾರು 10,000 ಮಂದಿ ಭಾಗವಹಿಸಿದ್ದರು. ಈ ಪೈಕಿ ಹಲವು ಗ್ರಾಹಕರು ಅಡುಗೆಮನೆ, ಊಟದ ಹಾಲ್ ಹಾಗೂ ಶೌಚಾಲಯಗಳಲ್ಲಿ ತೀವ್ರ ಅಶುಚಿತ್ವವನ್ನು ಕಂಡಿರುವುದಾಗಿ ತಿಳಿಸಿದ್ದಾರೆ. ಅಡುಗೆಮನೆಗಳಲ್ಲಿ ಜಿರಲೆ, ಇಲಿ ಹಾಗೂ ನೊಣಗಳ ಹಾವಳಿ ಇರುವುದು, ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುವುದು ಹಾಗೂ ಆಹಾರವನ್ನು ಬಿಸಿ ಮಾಡಲು ಸುರಕ್ಷಿತವಲ್ಲದ ಪ್ಲಾಸ್ಟಿಕ್ ಡಬ್ಬಿಗಳನ್ನು ಬಳಸುತ್ತಿರುವ ಬಗ್ಗೆ ಗ್ರಾಹಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಇತ್ತೀಚೆಗಷ್ಟೇ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಅಧಿಕಾರಿಗಳು ಬೆಂಗಳೂರಿನ 60 ತ್ರೀ-ಸ್ಟಾರ್ ಮತ್ತು ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ಸತತ ಮೂರು ದಿನಗಳ ಕಾಲ ದಾಳಿ ನಡೆಸಿದ್ದರು. ಈ ವೇಳೆ ‘ರ‍್ಯಾಡಿಸನ್ ಬ್ಲೂ’ (ದ ಅಟ್ರಿಯಾ) ಹೋಟೆಲ್‌ನಲ್ಲಿ ಅವಧಿ ಮುಗಿದಿದ್ದ 105 ಕೆ.ಜಿ ಕೋಳಿ, ಮೀನು, ಮಾಂಸ ಮತ್ತು ತರಕಾರಿಗಳನ್ನು ಜಪ್ತಿ ಮಾಡಲಾಗಿದ್ದು, 77 ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಎಫ್‌ಎಸ್‌ಎಸ್‌ಎಐ ನಿಯಮಗಳ ಉಲ್ಲಂಘನೆ, ಲೇಬಲ್ ಇಲ್ಲದಿರುವುದು, ಅವಧಿ ಮುಗಿದ ಆಹಾರ ಪದಾರ್ಥಗಳ ಸಂಗ್ರಹ, ತರಕಾರಿಗಳಲ್ಲಿ ಶಿಲೀಂಧ್ರ ಬೆಳೆದಿರುವುದು ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಪದಾರ್ಥಗಳನ್ನು ಪ್ರತ್ಯೇಕವಾಗಿ ಇಡದಿರುವುದು ಸೇರಿದಂತೆ ಹಲವು ಗಂಭೀರ ಲೋಪಗಳು ಈ ದಾಳಿಯ ವೇಳೆ ಪತ್ತೆಯಾಗಿವೆ. ಇಂದಿರಾ ಕ್ಯಾಂಟೀನ್‌ನ ಅಕ್ಕಿ ಚೀಲಗಳಲ್ಲಿ ಇಲಿಗಳು ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಎಫ್‌ಡಿಎ ಅಧಿಕಾರಿಗಳು ಅದರ ಅಡುಗೆಮನೆಯನ್ನೂ ಸೀಲ್ ಮಾಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ರೆಸ್ಟೋರೆಂಟ್‌ಗಳು ನೈರ್ಮಲ್ಯದ ವಿಚಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡವರು ಒತ್ತಾಯಿಸಿದ್ದಾರೆ. ಶೇ. 65ರಷ್ಟು ಗ್ರಾಹಕರು, ಹೋಟೆಲ್‌ಗಳಲ್ಲಿ ಹಾಗೂ ಆಹಾರ ವಿತರಣಾ ಆ್ಯಪ್‌ಗಳಲ್ಲಿ ಕಡ್ಡಾಯವಾಗಿ ‘ನೈರ್ಮಲ್ಯ ರೇಟಿಂಗ್’ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಅಧಿಕಾರಿಗಳು ಉತ್ತಮ ನೈರ್ಮಲ್ಯ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ನಿಯಮಿತವಾಗಿ ಹೋಟೆಲ್‌ಗಳ ತಪಾಸಣೆ ನಡೆಸಬೇಕು ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಬಲವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಗರಹೊಳೆ: ಜೇನುಕುರುಬ ಕುಟುಂಬಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಸರ್ಕಾರದ ಕ್ರಮಕ್ಕೆ ಆದಿವಾಸಿಗಳ ಆಕ್ರೋಶ

ಕೊಡಗು ಮತ್ತು ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ‘ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ’ದಲ್ಲಿ...

ಹಾವೇರಿ | ನ.14ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು ಅಧಿವೇಶನ

ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

ಕರ್ನಾಟಕದ ಜೈನ ಪರಂಪರೆಗೆ ಹಾವೇರಿಯ ಕೊಡುಗೆ ಅಪಾರ: ಡಾ. ಶಿವಯೋಗಿ ಆರ್ ಕೋರಿಶೆಟ್ಟರ್‌

ಕರ್ನಾಟಕದಲ್ಲಿ ಪ್ರತಿ ಐದು ಗ್ರಾಮಗಳಿಗೆ ಒಂದು ಜೈನಧರ್ಮಕ್ಕೆ ಸಂಬಂಧಿದ ಕುರುಹುಗಳು ದೊರೆಯುತ್ತವೆ....

ಸೌದಿ ಅರೇಬಿಯಾ: ವಿವಾಹೇತರ ಗರ್ಭಧಾರಣೆಗೆ ಕೀನ್ಯಾ ಮಹಿಳೆಗೆ 100 ಛಡಿಯೇಟಿನ ಶಿಕ್ಷೆ

ಸೌದಿ ಅರೇಬಿಯಾದಲ್ಲಿ ವಿವಾಹೇತರ ಸಂಬಂಧದಿಂದ ಮಗುವಿಗೆ ಜನ್ಮ ನೀಡಿದ ಕೀನ್ಯಾದ ಗೃಹ...