ರೈಲ್ವೆ ನಿಲ್ದಾಣಗಳ 112 ಹೋಟೆಲ್‌ಗಳ ಮೇಲೆ ದಾಳಿ: ಹಲವೆಡೆ ನೈರ್ಮಲ್ಯ ಕೊರತೆ, ಶಿಲೀಂಧ್ರವಿದ್ದ ಆಹಾರ ಪತ್ತೆ

Date:

ರಾಜ್ಯದ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸರಬರಾಜು ಮಾಡಲಾಗುತ್ತಿರುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಬೃಹತ್ ವಿಶೇಷ ತಪಾಸಣಾ ಕಾರ್ಯಾಚರಣೆಯನ್ನು ಕೈಗೊಂಡಿದೆ.

- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರ ನೇರ ಮಾರ್ಗದರ್ಶನದಲ್ಲಿ ಈ ವಿಶೇಷ ದಾಳಿ ನಡೆದಿದೆ. ರಾಜ್ಯಾದ್ಯಂತ ಒಟ್ಟು 36 ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿರುವ 112 ಆಹಾರ ಉದ್ದಿಮೆಗಳು, ಕ್ಯಾಂಟೀನ್‌ಗಳು, ಪ್ಲಾಟ್‌ಫಾರ್ಮ್ ಮಳಿಗೆಗಳು ಹಾಗೂ ಪ್ಯಾಂಟ್ರಿ ಕಾರ್‌ಗಳನ್ನು ತಪಾಸಣೆಗೊಳಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು: ಆಹಾರ ಗುಣಮಟ್ಟ ಇಲಾಖೆ ದಾಳಿ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರ ನಿಯಮಾವಳಿಗಳಂತೆ ನಡೆದ ಈ ಕಾರ್ಯಾಚರಣೆಯಲ್ಲಿ, ಬಹುತೇಕ ಕಡೆಗಳಲ್ಲಿ ನೈರ್ಮಲ್ಯದ ಕೊರತೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕರವಾದ ಗಂಭೀರ ಲೋಪದೋಷಗಳು ಕಂಡುಬಂದಿವೆ.

ಹಾವೇರಿ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ಅವಧಿ ಮುಗಿದಿದ್ದ (Expired) ನಂದಿನಿ ಮೊಸರು ಹಾಗೂ ದೊಡ್ಲ ಬ್ರಾಂಡ್‌ನ ಹಾಲಿನ ಪ್ಯಾಕೆಟ್‌ಗಳು ಮಾರಾಟಕ್ಕಿಟ್ಟಿರುವುದು ಪತ್ತೆಯಾಗಿವೆ. ಮೈಸೂರು ರೈಲ್ವೆ ನಿಲ್ದಾಣದ ಕೆಲವು ಆಹಾರ ತಯಾರಿಕಾ ಘಟಕಗಳಲ್ಲಿ ಇಡ್ಲಿಯನ್ನು ಅಪಾಯಕಾರಿ ಪ್ಲಾಸ್ಟಿಕ್ ಬಳಸಿ ತಯಾರಿಸುತ್ತಿರುವುದು ಕಂಡುಬಂದಿದೆ.

ಬೆಂಗಳೂರಿನ ಕೆ.ಆರ್. ಪುರಂ ರೈಲ್ವೆ ನಿಲ್ದಾಣದ ಹೋಟೆಲ್‌ನಲ್ಲಿ ತೀವ್ರ ಅನೈರ್ಮಲ್ಯ ವಾತಾವರಣ ಕಂಡುಬಂದಿದ್ದು, ಆಹಾರ ತಯಾರಿಕೆಗೆ ಬಳಸುತ್ತಿದ್ದ ಈರುಳ್ಳಿ ಮತ್ತು ಇತರ ತರಕಾರಿಗಳಲ್ಲಿ ಶಿಲೀಂಧ್ರ (Fungal growth/ಬೂಷ್ಟು) ಬೆಳೆದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಇನ್ನು ಹಲವೆಡೆ ಜಿಲೇಬಿಗೆ ನಿಷೇಧಿತ ಹಳದಿ ಬಣ್ಣ ಹಾಗೂ ಕೋವಾ ಪೇಡಾಗೆ ಗುಲಾಬಿ ಬಣ್ಣದ ರಾಸಾಯನಿಕಗಳನ್ನು ಬಳಸಿರುವ ಶಂಕೆ ವ್ಯಕ್ತವಾಗಿದೆ. ಕರಿದ ಸಮೋಸಾಗಳನ್ನು ಕಾರ್ಡ್ ಬೋರ್ಡ್ ಬಾಕ್ಸ್‌ಗಳಲ್ಲಿ, ವಡೆಗಳನ್ನು ಸಾರ್ವಜನಿಕರು ಓದುವ ವಾರ್ತಾಪತ್ರಿಕೆಗಳ ಮೇಲೆ ಇಟ್ಟಿರುವುದು ಮತ್ತು ಚಟ್ನಿಯನ್ನು ಆಹಾರಕ್ಕೆ ಸೂಕ್ತವಲ್ಲದ ಪ್ಲಾಸ್ಟಿಕ್ ಬಕೆಟ್‌ಗಳಲ್ಲಿ ಸಂಗ್ರಹಿಸಿರುವುದು ಪತ್ತೆಯಾಗಿದೆ. ಅಲ್ಲದೆ ಗ್ರಾಹಕರಿಗೆ ಆಹಾರವನ್ನು ವಾರ್ತಾಪತ್ರಿಕೆಯಲ್ಲಿಯೇ ಪ್ಯಾಕ್ ಮಾಡಿ ನೀಡಲಾಗುತ್ತಿತ್ತು.

ಯಾವುದೇ ತಯಾರಿಕಾ ದಿನಾಂಕ ಹಾಗೂ ವಿವರಗಳಿಲ್ಲದ ಖಾರದ ತಿಂಡಿಗಳು ಮತ್ತು ಚಪಾತಿ ಪ್ಯಾಕೆಟ್‌ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಜೊತೆಗೆ ಅನೇಕ ಮಳಿಗೆಗಳಲ್ಲಿ ನಿಯಮದಂತೆ ಆಹಾರ ಉದ್ದಿಮೆಯ ನೋಂದಣಿ ಪ್ರಮಾಣಪತ್ರವನ್ನು (FSSAI Licence) ಎದ್ದು ಕಾಣುವಂತೆ ಪ್ರದರ್ಶಿಸಿರಲಿಲ್ಲ.

ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಪತ್ತೆಯಾಗಿರುವ ಈ ಸಾಲು ಸಾಲು ಲೋಪದೋಷಗಳು ಹಾಗೂ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ, ಮುಂದಿನ ಸೂಕ್ತ ಕಾನೂನು ಕ್ರಮ ಜರುಗಿಸಲು ರೈಲ್ವೆ ಇಲಾಖೆಯ ಅಂಕಿತಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರು ತಿಳಿಸಿದ್ದಾರೆ.

ಜನಸಾಮಾನ್ಯರ ಹಾಗೂ ರೈಲ್ವೆ ಪ್ರಯಾಣಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುವ ಆಹಾರ ಉದ್ದಿಮೆದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...