ಕೆಟ್ಟ ಪದ ಬಳಸಿದ್ದಾರೆ, ನೋವಾಗಿದೆ: ಕಣ್ಣೀರು ಹಾಕಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

  • ಬಿಜೆಪಿಯಲ್ಲಿದ್ದ ಮಹಿಳೆಯರು ಕೂಡಾ ನನ್ನ ಪರ ನಿಲ್ಲಲಿಲ್ಲ
  • ಪರಿಷತ್ ಬುದ್ಧಿವಂತರ ಚಾವಡಿ, ಅಲ್ಲಿ ಎಲ್ಲರೂ ಧೃತರಾಷ್ಟ್ರ ಆಗಬಾರದು

ನಾನು ಒಬ್ಬಳು ತಾಯಿ. ಹೆಣ್ಣುಮಗಳು. ಸಿ ಟಿ ರವಿ ಹೇಳಿಕೆಯಿಂದ ನನಗೆ ಅವಮಾನವಾಗಿದೆ, ನಾನು ದುಃಖಿತಳಾಗಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.

- Advertisement -

ಬೆಳಗಾವಿಯ ಕುವೆಂಪು ನಗರದಲ್ಲಿರುವ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ನಿನ್ನೆ ಸದನದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕ‌ರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸುತ್ತಿದ್ದೆವು. ಸದನವನ್ನು ಸಭಾಪತಿ 10 ನಿಮಿಷಗಳ ಕಾಲ ಮುಂದೂಡಿದ್ದರು. ನಾನು ಸದನದಲ್ಲಿ ನನ್ನ ಆಸನದಲ್ಲಿ ಕುಳಿತಿದ್ದೆ. ಆ ಸಂದರ್ಭದಲ್ಲಿ ಎಂಎಲ್‌ಸಿ ಸಿ.ಟಿ. ರವಿ ಅವರು ನನಗೆ ಕೆಟ್ಟ ಪದ ಬಳಸಿದ್ದಾರೆ. ಇದರಿಂದ ನನಗೆ ಬಹಳ ನೋವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

ಸಿ. ಟಿ. ರವಿ ಅವರು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಡ್ರಗ್ ವ್ಯಸನಿ ಎಂದು ಹೇಳಿದಾಗ ನಾನು ಕೂಡ ಸಿ.ಟಿ. ರವಿ ಅವರಿಗೆ ನೀವು ಕೂಡಾ ಮಾಡಿದ ಅಪಘಾತ ಪ್ರಕರಣಕ್ಕೆ ನಿಮ್ಮನ್ನು ಕೊಲೆಗಡುಕ ಎನ್ನಬಹುದಾ ಎಂದಾಗ ಅವರು ನನಗೆ ಆ ಕೆಟ್ಟ ಪದವನ್ನು ಪ್ರಯೋಗಿಸಿದರು. ಆದರೆ ಈ ಹೇಳಿಕೆಯಿಂದ ನನಗೆ ಸಾಕಷ್ಟು ನೋವಾಗಿದ್ದು, ಬಿಜೆಪಿಯಲ್ಲಿದ್ದ ಮಹಿಳೆಯರು ಕೂಡ ನನ್ನ ಪರ ನಿಲ್ಲದಿರುವುದು ನನಗೆ ಬಹಳ ನೋವು ತಂದಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು

ವಿಧಾನ ಪರಿಷತ್ ಬುದ್ಧಿವಂತರ ಚಾವಡಿ. ಅಲ್ಲಿ ಎಲ್ಲರೂ ಧೃತರಾಷ್ಟ್ರ ಆಗಬಾರದಿತ್ತು. ನಾನು ಕೂಡಾ ಒಬ್ಬ ತಾಯಿ. ಅಕ್ಕ, ಅತ್ತೆ. ನನ್ನನ್ನು ನೋಡಿ ಸಾವಿರಾರು ಮಹಿಳೆಯರು ನಾವು ರಾಜಕಾರಣಕ್ಕೆ ಬರಬೇಕೆಂದುಕೊಂಡಿರುತ್ತಾರೆ. ಆದರೆ ಸದನದಲ್ಲಿ ಆದ ಪರಿಸ್ಥಿತಿಯಲ್ಲಿ ಒಬ್ಬ ಮಹಿಳೆಗೆ ಈ ರೀತಿ ಅಪಮಾನ ಮಾಡಿದ್ದು ಸರಿಯಲ್ಲ ಎಂದು ಸಚಿವೆ ದುಃಖ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...