ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂ ಒತ್ತುವರಿ ಆರೋಪ: ತನಿಖೆಗೆ SIT ರಚನೆ

Date:

ಆಧ್ಯಾತ್ಮಿಕ ಗುರು ಶ್ರೀ ರವಿಶಂಕರ್ ಸ್ಥಾಪಿಸಿರುವ ಆರ್ಟ್ ಆಫ್ ಲಿವಿಂಗ್ (Art of Living) ಹಾಗೂ ಅದರ ಅಂಗಸಂಸ್ಥೆಗಳು ಸರ್ಕಾರಿ ಮತ್ತು ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿವೆ ಎಂಬ ಆರೋಪಗಳ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದೆ.

- Advertisement -

ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದ 11 ಸದಸ್ಯರ SITಗೆ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸರ್ಕಾರ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸರ್ಕಾರದ ಆದೇಶದ ಪ್ರಕಾರ, ಆರ್ಟ್ ಆಫ್ ಲಿವಿಂಗ್, ವೇದ ವಿಜ್ಞಾನ ಮಹಾವಿದ್ಯಾಪೀಠ (VVMVP), ಸುಮೇರು ಗ್ಲೋಬಲ್ ಸಪೋರ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಸುಮೇರು ರಿಯಾಲ್ಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳ ವಿರುದ್ಧದ ಆರೋಪಗಳನ್ನು SIT ಪರಿಶೀಲಿಸಲಿದೆ.

SIT, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವಶದಲ್ಲಿರುವ 290.38 ಎಕರೆ ಭೂಮಿಯ ಸ್ವಾಧೀನ, ಸ್ವಾಧೀನಪಡಿಸಿಕೊಂಡ ವಿಧಾನ, ಗುತ್ತಿಗೆ ಷರತ್ತುಗಳ ಉಲ್ಲಂಘನೆ ಹಾಗೂ ಇತರ ಅಕ್ರಮಗಳ ಕುರಿತು ತನಿಖೆ ನಡೆಸಲಿದೆ. ಈ ಭೂಮಿಯಲ್ಲಿ ಸರ್ಕಾರದ ಗೋಮಾಳ ಭೂಮಿ, ಕೆರೆ ಪ್ರದೇಶ ಹಾಗೂ ಖರಾಬು (ಬಳಕೆಗೆ ಯೋಗ್ಯವಲ್ಲದ) ಸಾರ್ವಜನಿಕ ಭೂಮಿ ಸೇರಿದೆ ಎನ್ನಲಾಗಿದೆ.

ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ್ ಮಾತನಾಡಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಸುಮಾರು 150 ಎಕರೆ ಭೂಮಿಯನ್ನು ಅತಿಕ್ರಮಿಸಿದೆ ಎಂಬ ಮನವಿಯೂ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದು ತಿಳಿಸಿದರು. ಈ ಕುರಿತು ಈ ಹಿಂದೆ ಹಲವು ದೂರುಗಳು ಬಂದಿದ್ದವು. ಎಲ್ಲಾ ಆರೋಪಗಳನ್ನು SIT ಪರಿಶೀಲಿಸಲಿದೆ ಎಂದು ಅವರು ದಲಿತ ಸಂಘಟನೆಗಳೊಂದಿಗೆ ಸಭೆ ನಡೆಸಿದ ಬಳಿಕ ತಿಳಿಸಿದರು.

ಸರ್ಕಾರದ ಆದೇಶದ ಪ್ರಕಾರ, 2025ರ ಅಕ್ಟೋಬರ್‌ನಲ್ಲಿ ನ್ಯಾಯಾಲಯದ ನಿರ್ದೇಶನದಂತೆ ನಡೆಸಿದ ಕಂದಾಯ ಸರ್ವೆಯಲ್ಲಿ ಅನುಮಾನಾಸ್ಪದ ದಾಖಲೆಗಳು ಹಾಗೂ ಗುತ್ತಿಗೆ ಒಪ್ಪಂದಗಳ ಮೂಲಕ ಸರ್ಕಾರದ ಗೋಮಾಳ ಭೂಮಿಯನ್ನು ನೇರ ಮತ್ತು ಪರೋಕ್ಷವಾಗಿ ಅತಿಕ್ರಮಿಸಿರುವುದು ಕಂಡುಬಂದಿದೆ ಎಂದು ಉಲ್ಲೇಖಿಸಲಾಗಿದೆ.

ಈ ಆರೋಪಗಳು ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲಿಪುರ, ಬಿಎಂ ಕಾವಲ್ ಹಾಗೂ ಅಗರ ಗ್ರಾಮಗಳಿಗೆ ಸಂಬಂಧಿಸಿವೆ.

ಸರ್ಕಾರದ ದಾಖಲೆಗಳ ಪ್ರಕಾರ, 1985ರ ಫೆಬ್ರವರಿಯಲ್ಲಿ ಕಗ್ಗಲಿಪುರದ 41 ಎಕರೆ ಗೋಮಾಳ ಭೂಮಿಯನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥೆಗೆ ವಾರ್ಷಿಕ 500 ರೂಪಾಯಿ ಗುತ್ತಿಗೆ ದರದಲ್ಲಿ 40 ವರ್ಷಗಳ ಅವಧಿಗೆ ನೀಡಲಾಗಿತ್ತು.

ಗುತ್ತಿಗೆ ಅವಧಿ ಮುಕ್ತಾಯವಾದರೂ, ಸಂಸ್ಥೆಯ ವಿವಿಧ ಅಂಗಸಂಸ್ಥೆಗಳು ಇನ್ನೂ ಆ ಭೂಮಿಯನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದು, ಅಲ್ಲಿ ದೊಡ್ಡ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ಈ ಗುತ್ತಿಗೆಯನ್ನೇ ಆಧಾರವಾಗಿಸಿಕೊಂಡು ಸರ್ಕಾರಿ ಹಾಗೂ ಖಾಸಗಿ ಭೂಮಿಯನ್ನೂ ಅತಿಕ್ರಮಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಆರೋಪಿಸಲಾಗಿದೆ.

2003ರಲ್ಲಿ ಸಂಸ್ಥೆಗೆ 19 ಎಕರೆ ಗೋಮಾಳ ಭೂಮಿಯನ್ನು 30 ವರ್ಷಗಳ ಗುತ್ತಿಗೆಗೆ ನೀಡಲಾಗಿದ್ದು, ಅದರ ಅವಧಿ 2033ರಲ್ಲಿ ಅಂತ್ಯಗೊಳ್ಳಲಿದೆ. ಆದರೆ, ಈ ಪ್ರದೇಶದೊಂದಿಗೆ ಕೆರೆ, ಬಂಡೆ ಖರಾಬು ಹಾಗೂ ಕಾಲುದಾರಿಯನ್ನೂ ಒಳಗೊಂಡಂತೆ ದೊಡ್ಡ ಕಾಂಪೌಂಡ್ ನಿರ್ಮಿಸಲಾಗಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ಭೂಮಿಯ ನೈಸರ್ಗಿಕ ಸ್ವರೂಪದಲ್ಲೂ ಬದಲಾವಣೆ ಮಾಡಲಾಗಿದೆ ಎಂಬ ಆರೋಪವಿದೆ.

ತನಿಖೆ ವೇಳೆ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವಿಳಾಸದಲ್ಲಿ ಉಲ್ಲೇಖಿಸಿರುವ ‘ಉದಯಪುರ’ ಎಂಬ ಹೆಸರಿನ ಕಂದಾಯ ಗ್ರಾಮವೇ ಅಸ್ತಿತ್ವದಲ್ಲಿಲ್ಲ ಎಂಬುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ. ಇದಲ್ಲದೆ, ಭೂ ಸರ್ವೆ ನಡೆಸುವ ವೇಳೆ ಕೆಲ ಸ್ಥಳೀಯರು, ಸಂಸ್ಥೆಯ ಸಿಬ್ಬಂದಿ ಹಾಗೂ ಮಧ್ಯವರ್ತಿಗಳು ಸರ್ವೆ ಕಾರ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ. SIT ಈ ಎಲ್ಲಾ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ಮೂರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...