ಜಮೀನು ಒತ್ತುವರಿ | ಎಸ್ಐಟಿ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ, ಹೆಚ್‌ ಡಿ ಕುಮಾರಸ್ವಾಮಿ ಸದ್ಯಕ್ಕೆ ನಿರಾಳ

Date:

ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ರಚಿಸಿದ್ದ ಎಸ್ಐಟಿ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

- Advertisement -

ಎಸ್‌ಐಟಿ ನೇಮಕ ರದ್ದುಪಡಿಸುವಂತೆ ಕೋರಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಮತ್ತು ಎ.ವಿ.ನಿಶಾಂತ್ ವಾದ ಮಂಡಿಸಿದ್ದು, ಅಧಿಸೂಚನೆಯಿಲ್ಲದೇ ಎಸ್ಐಟಿ ರಚನೆ ಕಾನೂನುಬಾಹಿರ. ಎಸ್ಐಟಿಯ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಮನವಿ ಮಾಡಿದರು.

ಕುಮಾರಸ್ವಾಮಿ ಪರ ವಕೀಲರ ವಾದ ಮನ್ನಿಸಿದ ನ್ಯಾಯಪೀಠ ಎಸ್‌ಐಟಿ ನೇಮಕ ಆದೇಶಕ್ಕೆ ಮುಂದಿನ ವಿಚಾರಣೆತನಕ ಮಧ್ಯಂತರ ತಡೆ ನೀಡಿತು. ಸರ್ಕಾರದ ಪರ ವಕೀಲರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಬಳಿಯ ಸುಮಾರು 14 ಎಕರೆ ಸರಕಾರಿ ಭೂಮಿಯ ಅನಧಿಕೃತ ಒತ್ತುವರಿ ತೆರವುಗೊಳಿಸುವ ಸಂಬಂಧ ಸರಕಾರ ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲಾಗಿತ್ತು.

ರಾಮನಗರ ಜಿಲ್ಲೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಮಾಜ ಪರಿವರ್ತನಾ ಸಮುದಾಯವು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. 2020ರಲ್ಲಿ ಲೋಕಾಯುಕ್ತ ವರದಿ ಅನುಸಾರ ಕ್ರಮ ಕೈಗೊಳ್ಳಲು ಹೈಕೋರ್ಟ್ ಆದೇಶಿಸಿತ್ತು. ಆದರೆ, ಸರ್ಕಾರ ಕ್ರಮ ಕೈಗೊಳ್ಳದ ಕಾರಣ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಎಸ್‌ಐಟಿ ರಚಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...