ಭೂ ಅಕ್ರಮ| ಕುಮಾರಸ್ವಾಮಿ ವಿರುದ್ಧ ಕ್ರಮ ಜರುಗಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Date:

Advertisements

ಬಿಡದಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರು ದೊಡ್ಡ ಪ್ರಮಾಣದ ಭೂ ಅತಿಕ್ರಮಣ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ನ್ಯಾಯಾಂಗ ನಿಂದನೆ ವಿಚಾರಣೆಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಕ್ರಮ ಜರುಗಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.

ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 17 ರ ಆದೇಶದ ವಿರುದ್ಧ ಕೇಂದ್ರ ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿಯನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಪಂಕಜ್ ಮಿಥಲ್ ಮತ್ತು ಪ್ರಸನ್ನ ಬಿ ವರಾಳೆ ಅವರನ್ನೊಳಗೊಂಡ ಪೀಠ, ವಕೀಲ ಪ್ರಶಾಂತ್ ಭೂಷಣ್ ಪ್ರತಿನಿಧಿಸುತ್ತಿರುವ “ಸಮಾಜ ಪರಿವರ್ತನ ಸಮುದಾಯ” ಎಂಬ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ಹೆಚ್​​ಡಿಕೆ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ

Advertisements

ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಅವರ ಮೇಲೆ ನ್ಯಾಯಾಂಗ ನಿಂದನೆ ಆರೋಪ ಹೊರಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಬಿಡದಿ ತಾಲೂಕಿನ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಮತ್ತವರ ಸಂಬಂಧಿಕರು ಭೂ ಕಬಳಿಕೆ ಮಾಡಿರುವ ಆರೋಪ ಸಂಬಂಧ ಲೋಕಾಯುಕ್ತ ಜಾಗವನ್ನು ತೆರವು ಮಾಡುವಂತೆ ಆದೇಶಿಸಿತ್ತು.

ಈ ಕುರಿತ ಆದೇಶವನ್ನು ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್​.ಆರ್​.ಹಿರೇಮಠ ಅವರು ಸಿವಿಲ್​ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, ಕುಮಾರಸ್ವಾಮಿ ಅವರನ್ನು ಪ್ರಕರಣದಲ್ಲಿ ವಿಚಾರಣೆ ಎದುರಿಸಲು ಸೂಚಿಸಿತ್ತು.

ಇದೇ ಪ್ರಕರಣಕ್ಕೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಬಾಕಿ ಇರುವ ಸಂಬಂಧ ಹೈಕೋರ್ಟ್​ನಲ್ಲಿ ದಾಖಲಾದ ಅರ್ಜಿ ವಿಚಾರಣೆಗೆ ತಡೆ ನೀಡಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ್ದ ಹೈಕೋರ್ಟ್, ಬಲವಂತದ ಕ್ರಮ ಜರುಗಿಸದಂತೆ ಸೂಚಿಸಿ ವಿಚಾರಣೆ ಮುಂದೂಡಿತ್ತು.

ಇದೀಗ, ಸುಪ್ರೀಂಕೋರ್ಟ್​ ಕೂಡ ನ್ಯಾಯಾಂಗ ನಿಂದನೆ ಆರೋಪದಡಿ ಕೇಂದ್ರ ಸಚಿವರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸುವಂತಿಲ್ಲ ಎಂದು ಸೂಚಿಸಿ ವಿಚಾರಣೆಗೆ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X