ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

Date:

“ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ ವಿಘ್ನಗಳನ್ನು ಎದುರಿಸಿ ನಾನು ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ನಾಯಕರನ್ನು ಸೃಷ್ಟಿಸುವವನೇ ನಿಜವಾದ ನಾಯಕನಾಗಿದ್ದು, ಯುವಕರು ನಾಯಕತ್ವ ವಹಿಸಿಕೊಳ್ಳಲು ಮುಂದೆ ಬರಬೇಕು,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

- Advertisement -

​ಮಂಗಳವಾರ (ಸೆ. 15) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

​ಬೆಳೆದು ಬಂದ ಹಾದಿಯ ಸ್ಮರಣೆ:

ತಮ್ಮ ರಾಜಕೀಯ ಹಾಗೂ ನಾಯಕತ್ವದ ಹಾದಿಯನ್ನು ಮೆಲುಕು ಹಾಕಿದ ಸಿಎಂ, “ಎನ್‌ಪಿಎಸ್ ಶಾಲೆಯಲ್ಲಿ ಓದುವಾಗ ತುಂಟ ಎಂಬ ಕಾರಣಕ್ಕೆ ಮುಂದಿನ ತರಗತಿಗೆ ಅವಕಾಶ ನೀಡಲಿಲ್ಲ. ಬಳಿಕ ಕಾರ್ಮೆಲ್ ಶಾಲೆಗೆ ಸೇರಿದೆ. ಅಲ್ಲಿ 7ನೇ ತರಗತಿಯಲ್ಲಿದ್ದಾಗ ‘ನಕ್ಷತ್ರ’ ಚಿಹ್ನೆಯಡಿ ಶಾಲಾ ಚುನಾವಣೆಗೆ ಸ್ಪರ್ಧಿಸಿದ್ದೆ. ಶೇ. 80ರಷ್ಟು ಮತಗಳು ನನಗೇ ಬಂದಿದ್ದರೂ, ಕೇವಲ ಶೇ. 20ರಷ್ಟು ಮತ ಪಡೆದಿದ್ದ ಸಹಪಾಠಿ ಆರತಿ ಎಂಬುವರನ್ನು ಶಾಲಾ ಕಾರ್ಯದರ್ಶಿಯನ್ನಾಗಿ ನೇಮಿಸಿ, ನನಗೆ ಕ್ರೀಡಾ ಕಾರ್ಯದರ್ಶಿ ಹುದ್ದೆ ಸೃಷ್ಟಿಸಿ ಕೊಟ್ಟರು. ವಿದ್ಯಾವರ್ಧಕ ಕಾಲೇಜಿನಲ್ಲೂ ಚುನಾವಣೆಗೆ ಸ್ಪರ್ಧಿಸಲು ನನಗೆ ಅವಕಾಶ ನೀಡಲಿಲ್ಲ. ಆಗ ದೇಶಪಾಂಡೆ ಎಂಬುವರನ್ನು ಕಣಕ್ಕಿಳಿಸಿ, ನಾನೇ ಭಾಷಣ ಮಾಡಿ ಅವರನ್ನು ಗೆಲ್ಲಿಸಿದೆ. ಆನಂತರ ವಿದ್ಯಾರ್ಥಿ ಕಾಂಗ್ರೆಸ್ ಚುನಾವಣೆಯಲ್ಲೂ ಟಿಕೆಟ್ ತಪ್ಪಿಸಲಾಯಿತು. ಪದವಿ ಓದುವಾಗ ಎಚ್.ಡಿ. ದೇವೇಗೌಡರ ವಿರುದ್ಧ ಸ್ಪರ್ಧಿಸುವ ಅವಕಾಶ ಸಿಕ್ಕು ಅದರಲ್ಲಿ ಸೋತೆ. ಆನಂತರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಕಂಡೆ. ಹೀಗೆ ನಾಯಕತ್ವದ ಗುಣ ಇರುವವರಿಗೆ ಅಡಚಣೆಗಳು ಸಾಮಾನ್ಯ,” ಎಂದು ತಮ್ಮ ಅನುಭವ ಹಂಚಿಕೊಂಡರು.

​ಕಾಲೇಜುಗಳಲ್ಲಿ ಶಿಸ್ತುಬದ್ಧ ಚುನಾವಣೆ, ಯುವ ಸಂಸತ್:

“ವ್ಯವಸ್ಥೆಯಲ್ಲಿ ಹೊಸ ನಾಯಕತ್ವ ಬೆಳೆಯಬೇಕು. ಪ್ರತಿಯೊಬ್ಬರಿಗೂ ನಾಯಕತ್ವದ ಅವಕಾಶ ದೊರೆಯಬೇಕು ಎಂಬ ಉದ್ದೇಶದಿಂದ ರಾಜ್ಯದ ಪ್ರತಿ ಕಾಲೇಜಿನಲ್ಲಿ ಶಿಸ್ತುಬದ್ಧವಾಗಿ ಚುನಾವಣೆಗಳು ನಡೆಯಬೇಕು ಎಂದು ಘೋಷಿಸಲಾಗಿದೆ. ಜೊತೆಗೆ, ಬಸವಣ್ಣನವರ ‘ಅನುಭವ ಮಂಟಪ’ದ ಚಿಂತನೆಗಳ ಆಧಾರದ ಮೇಲೆ ಶಾಲಾ-ಕಾಲೇಜುಗಳಲ್ಲಿ ‘ಯುವ ಸಂಸತ್ತು’ (ಮಾದರಿ ಸಂಸತ್) ನಡೆಸಲು ತೀರ್ಮಾನಿಸಲಾಗಿದೆ,” ಎಂದು ತಿಳಿಸಿದರು.

​ಸರ್ಕಾರ ಜನರನ್ನು ಗೌರವಿಸಿದರೆ ಪ್ರಜಾಪ್ರಭುತ್ವ:

“ಪ್ರಜಾಪ್ರಭುತ್ವ ಕೇವಲ ಚುನಾವಣೆ ಮತ್ತು ಮತದಾನಕ್ಕೆ ಮಾತ್ರ ಸೀಮಿತವಲ್ಲ; ಜನರಿಗೆ ಘನತೆ, ಗೌರವ ಮತ್ತು ಬದುಕುವ ಹಕ್ಕನ್ನು ನೀಡುವುದೇ ನೈಜ ಪ್ರಜಾಪ್ರಭುತ್ವ. ಜನರು ಸರ್ಕಾರಕ್ಕೆ ಹೆದರಿದರೆ ಅದು ಸರ್ವಾಧಿಕಾರವಾಗುತ್ತದೆ. ಅದೇ ಸರ್ಕಾರ ಜನರನ್ನು ಗೌರವಿಸಿದಾಗ ಅದು ಪ್ರಜಾಪ್ರಭುತ್ವ ಎನಿಸಿಕೊಳ್ಳುತ್ತದೆ. ಭಾರತಕ್ಕೆ ಪ್ರಜಾಪ್ರಭುತ್ವವೇ ಆತ್ಮವಿದ್ದಂತೆ,” ಎಂದು ವಿಶ್ಲೇಷಿಸಿದರು.

​ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ರಕ್ಷಣೆ:

“ದೇಶಕ್ಕೆ ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯನ್ನು ನೀಡಿದ್ದು ಕಾಂಗ್ರೆಸ್ ಪಕ್ಷ. ಪ್ರಜಾಪ್ರಭುತ್ವದ ಮೇಲೆ ಬದ್ಧತೆ ಇರುವವರು ಮಾತ್ರ ಧೈರ್ಯವಾಗಿ ಮಾತನಾಡಲು ಸಾಧ್ಯ. ಪಂಚಾಯತ್ ರಾಜ್ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಲ್ಲಿ ಜನರಿಗೆ ಅಧಿಕಾರ ನೀಡಿದ್ದು ರಾಜೀವ್ ಗಾಂಧಿ. ನೆಹರೂ ಅವರಿಂದ ಹಿಡಿದು ಸೋನಿಯಾ ಗಾಂಧಿ ವರೆಗೆ ಕಾಂಗ್ರೆಸ್ ತ್ಯಾಗದ ಇತಿಹಾಸ ಹೊಂದಿದೆ,” ಎಂದು ಬಣ್ಣಿಸಿದರು.

​ಮತದಾನದ ಹಕ್ಕು ರಕ್ಷಣೆಗೆ ‘ಲೀಗಲ್ ಬ್ಯಾಂಕ್’:

“ಎಸ್‌ಐಆರ್‌ನಿಂದಾಗಿ ಸುಮಾರು ಒಂದು ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಹುಲ್ ಗಾಂಧಿ ಅವರ ಸಲಹೆಯಂತೆ ಪ್ರತಿ ತಾಲ್ಲೂಕಿನಲ್ಲಿ ಮಾರ್ಗದರ್ಶನ ನೀಡಲು ಪಕ್ಷದಿಂದ ‘ಲೀಗಲ್ ಬ್ಯಾಂಕ್’ (ಕಾನೂನು ತಂಡ) ತೆರೆಯಲಾಗುತ್ತಿದೆ. 47 ಲಕ್ಷ ಜನರಿಗೆ ಖಾಯಂ ನಿವಾಸ ಮತ್ತು ಆದಾಯ ಪತ್ರ ಒದಗಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಮೀಸಲಾತಿಯನ್ನು ಕಾಪಾಡಿದ್ದೇ ಕಾಂಗ್ರೆಸ್ ಸರ್ಕಾರ,” ಎಂದರು.

​6ನೇ ಗ್ಯಾರಂಟಿಯಾಗಿ ನಿವೇಶನ ವಿತರಣೆ:

“ರಾಜಕೀಯ ಸಿದ್ಧಾಂತದ ಬದ್ಧತೆಯಿಂದಾಗಿ ನಾವು ಐದು ಗ್ಯಾರಂಟಿಗಳಿಗೆ ಪ್ರತಿ ವರ್ಷ ₹52,000 ಕೋಟಿ ಖರ್ಚು ಮಾಡುತ್ತಿದ್ದೇವೆ. ಉಳುವವನಿಗೆ ಭೂಮಿ ನೀಡಿದ ಇತಿಹಾಸ ನಮ್ಮದು. ಇದೀಗ 6ನೇ ಗ್ಯಾರಂಟಿಯಾಗಿ ಬಡವರಿಗೆ 10 ರಿಂದ 15 ಲಕ್ಷ ನಿವೇಶನಗಳನ್ನು ಹಂಚಲು ಕಾರ್ಯಕ್ರಮ ರೂಪಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 371(ಜೆ) ಜಾರಿ ಮಾಡಿದ ಕೀರ್ತಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲುತ್ತದೆ. ಕಲೆ, ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಉತ್ತೇಜನ ನೀಡಲು 10 ಸಾವಿರ ‘ಭಾರತ್ ಜೋಡೋ ಯುವಕ ಸಂಘ’ಗಳನ್ನು ಸ್ಥಾಪಿಸಲಾಗುವುದು,” ಎಂದು ಅವರು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...