ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

Date:

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ ಹಿರಿಯ ನಾಯಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಹಿರಿಯ ರಾಜಕಾರಣಿ, ಮಾಜಿ ಸಚಿವ ಎಚ್‌. ವಿಶ್ವನಾಥ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

- Advertisement -

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್‌ ಆಪರೇಷನ್‌ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಅವರು, ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ, ವ್ಯಕ್ತಿಯೊಬ್ಬರ ರಾಜಕೀಯ ಬೆಳವಣಿಗೆಯನ್ನು ಕುಗ್ಗಿಸಲು ಈ ರೀತಿಯ ತಂತ್ರಗಳನ್ನು ಬಳಸುವುದು ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿದರೆ ತಮ್ಮ ರಾಜಕೀಯ ಹಾದಿ ಸುಗಮವಾಗಲಿದೆ ಎಂಬ ಲೆಕ್ಕಾಚಾರ ಕೆಲವು ರಾಜಕಾರಣಿಗಳಲ್ಲಿದೆ. ಇದೇ ಕಾರಣಕ್ಕೆ ಅವರ ವಿರುದ್ಧ ಸ್ಟಿಂಗ್‌ ಆಪರೇಷನ್‌ ಮೂಲಕ ಮಾನಹಾನಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಹಿರಿಯ ರಾಜಕಾರಣಿ. ಅವರೊಂದಿಗೆ ತಮಗೂ ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿವೆ. ಆದರೆ, ಆ ಭಿನ್ನಾಭಿಪ್ರಾಯಗಳಿಗೂ ವ್ಯಕ್ತಿಯ ಮಾನಹಾನಿಗೂ ಸಂಬಂಧವಿಲ್ಲ. ರಾಜಕೀಯದಲ್ಲಿ ಬೆಳೆಯುವುದು ಸುಲಭವಲ್ಲ. ಹೀಗಿರುವಾಗ ಬೆಳೆದ ನಾಯಕರನ್ನು ಈ ರೀತಿಯಲ್ಲಿ ತುಳಿಯಲು ಪ್ರಯತ್ನಿಸುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

Advertisements

ಇದೇ ವೇಳೆ, ತಮ್ಮ ‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ ಹಿರಿಯ ನಾಯಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಎಲ್ಲರೂ ಗಾಜಿನ ಮನೆಯಲ್ಲೇ ಕುಳಿತಿದ್ದಾರೆ. ಸಾರ್ವಜನಿಕರಿಗೆ ರಾಜಕೀಯದ ಒಳಸುಳಿಗಳು ಅರ್ಥವಾಗುತ್ತವೆ, ಜನರನ್ನು ದಡ್ಡರೆಂದು ಭಾವಿಸಬಾರದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ತಲೆತಗ್ಗಿಸುವಂತಿವೆ ಎಂದಿರುವ ಅವರು, ಸ್ಟಿಂಗ್‌ ಆಪರೇಷನ್‌ಗಳ ಮೂಲಕ ವಿರೋಧ ಪಕ್ಷದವರು ಮತ್ತು ಸ್ವಪಕ್ಷದವರೇ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವುದು ಅವಮಾನಕರ ಸಂಗತಿ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸ್ಟಿಂಗ್‌ ಆಪರೇಷನ್‌ ಸದ್ದು; ತನಿಖೆಗೆ ಒತ್ತಾಯಿಸಿದ ಸಿದ್ದರಾಮಯ್ಯ, ಹೆಚ್‌ಡಿಕೆ

ತಾನೂ ರಾಜಕೀಯ ವ್ಯವಸ್ಥೆಯ ಭಾಗವಾಗಿದ್ದವನು ಎಂಬುದನ್ನು ಒಪ್ಪಿಕೊಂಡಿರುವ ವಿಶ್ವನಾಥ್‌, ಕ್ಷುಲ್ಲಕ ವಿಚಾರಗಳನ್ನು ರಾಜಕೀಯಕ್ಕೆ ಎಳೆದು ತಂದು ಸಮಾಜದ ವಾತಾವರಣವನ್ನು ಹಾಳು ಮಾಡುವುದು ಬೇಡ ಎಂಬ ಕಾರಣಕ್ಕೆ ಇಷ್ಟು ದಿನ ಮೌನವಾಗಿದ್ದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್‌ ಆಪರೇಷನ್‌ ಕುರಿತು ವಿಶ್ವನಾಥ್‌ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಸ್ಟಿಂಗ್‌ ಆಪರೇಷನ್‌ ಹಿಂದಿನ ಉದ್ದೇಶ ಮತ್ತು ‘ಬಾಂಬೆ ಬಾಯ್ಸ್‌’ ಪುಸ್ತಕದಲ್ಲಿ ಏನಿರಬಹುದು ಎಂಬ ಕುತೂಹಲವೂ ಹೆಚ್ಚು ಹರಿದಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

14 ಎಸೆತಗಳಲ್ಲಿ ಅರ್ಧಶತಕ: ಮೆಕ್‌ಗರ್ಕ್‌ ಸಿಡಿಲಾಟ, ವೈಭವ್‌ ವಿಶ್ವದಾಖಲೆ ಅಬಾಧಿತ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ಕೇವಲ 14...

ರಷ್ಯಾ-ಉಕ್ರೇನ್ ಸಂಘರ್ಷ: ನಿರ್ಬಂಧ ವಿನಾಯಿತಿ ಪುಟಿನ್‌ಗೆ ಟ್ರಂಪ್ ನೀಡಿದ ಬಹುಮಾನ ಎಂದ‌ ಝೆಲೆನ್ಸ್ಕಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಮೇಲಿನ ಪ್ರಮುಖ ನಿರ್ಬಂಧಗಳನ್ನು...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...