ಗುಡಿ, ಚರ್ಚು, ಮಸೀದಿ ಬಿಟ್ಟು ಹೊರ ಬನ್ನಿ: ಕುವೆಂಪು ಮಾತು ಉಲ್ಲೇಖಿಸಿ ಬಿಜೆಪಿಗರಿಗೆ ಸಿಎಂ ಚಾಟಿ

Date:

Advertisements

ಗೋಡಾ ಹೈ-ಮೈದಾನ್ ಹೈ ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಎಸೆದರು.

ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, “ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ” ಎಂದು ಟೀಕಿಸಿದರು.

“ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು” ಎಂದರು.

“ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು.
ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್, ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ.
ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆ ಸಂವಿಧಾನ ಗೊತ್ತಿರಬೇಕು” ಎಂದು ಕುಟುಕಿದರು.

ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ: ಕುವೆಂಪು ಮಾತನ್ನು ಉಲ್ಲೇಖಿಸಿ ಚಾಟಿ ಬೀಸಿದ ಸಿಎಂ, “ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದ ಸಿಎಂ, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು” ಎಂದು ಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು.

ಈ ಸುದ್ದಿ ಓದಿದ್ದೀರಾ? ‘ಇಲ್ಲಿ ಯಾರೂ ಭಿನ್ನರಲ್ಲ, ಯಾರೂ ಪರಕೀಯರಲ್ಲ’: ಬಾನು ಮುಷ್ತಾಕ್ ಅವರ ದಸರಾ ಉದ್ಘಾಟನಾ ಭಾಷಣ

ಬಿಜೆಪಿಯವರು ಗ್ಯಾರಂಟಿ ಫಲಾನುಭವಿಗಳ್ವಾ: ಸಿ.ಎಂ ಪ್ರಶ್ನೆ

“ಸಂವಿಧಾನದ ಆಶಯದಂತೆ ಎಲ್ಲ ಜಾತಿ, ಎಲ್ಲ ಧರ್ಮದ ಮತ್ತು ಎಲ್ಲ ಪಕ್ಷದ ಬಡವರಿಗೆ ನಾವು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ? ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ GDP ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X