ವಿಧಾನ ಪರಿಷತ್ ನಾಮನಿರ್ದೇಶನ: ನಾಲ್ಕು ಸ್ಥಾನಗಳಿಗೆ ಹೆಸರು ಫೈನಲ್‌, ಅಧಿಕೃತ ಘೋಷಣೆ ಮಾತ್ರ ಬಾಕಿ

Date:

Advertisements

ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಲ್ವರು ಎಂಎಲ್‌ಸಿಗಳ ನಾಮನಿರ್ದೇಶನ ಬಹುತೇಕ ಖಚಿತಗೊಂಡಿದೆ ಎನ್ನಲಾಗಿದೆ.

ದಲಿತ ಮುಖಂಡ ಡಿ.ಜಿ.ಸಾಗರ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು, ಮಾಜಿ ಎಂಎಲ್‌ಸಿ ರಮೇಶ್ ಬಾಬು ಹಾಗೂ ಎನ್‌ಆರ್‌ಐ ಅಧ್ಯಕ್ಷೆಯಾಗಿರುವ ಆರತಿ ಕೃಷ್ಣ ಹೆಸರುಗಳು ಹೈಕಮಾಂಡ್‌ ಕಡೆಯಿಂದ ಫೈನಲ್ ಆಗಿದೆ ಎಂದು ತಿಳಿದುಬಂದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರೊಂದಿಗೆ ವಿಧಾನ ಪರಿಷತ್‌ನ ನಾಮನಿರ್ದೇಶನ ಸ್ಥಾನ ಭರ್ತಿ ವಿಚಾರವಾಗಿ ಸಾಕಷ್ಟು ಚರ್ಚೆಯ ಬಳಿಕ ಈ ನಾಲ್ಕು ಹೆಸರುಗಳು ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ಹೇಳಲಾಗಿದೆ.

Advertisements

ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಸಮುದಾಯದ ಸಮೀಕರಣದ ಮೇಲೆ ನಾಯಕರ ಆಯ್ಕೆ ಪರಿಗಣಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ್‌ ಖರ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದರು. ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವಾಗ ಮುಖ್ಯವಾಗಿ ಒಕ್ಕಲಿಗ, ಇತರೆ ಹಿಂದುಳಿದ ವರ್ಗಗಳು ಹಾಗೂ ದಲಿತ ಸಮುದಾಯಕ್ಕೆ ಒತ್ತು ಕೊಡಬೇಕು ಎಂದು ಹೈಕಮಾಂಡ್‌ ಮುಂದೆ ಸಿದ್ದರಾಮಯ್ಯ ಮನವಿ ಮಾಡಿದ್ದರು.

ಆರಂಭದಲ್ಲಿ ಒಕ್ಕಲಿಗ ಸಮುದಾಯದಿಂದ ಬಿ.ಎಲ್‌.ಶಂಕರ್‌, ರಘುನಂದನ್‌ ರಾಮಣ್ಣ ಹಾಗೂ ವಿನಯ್‌ ಕಾರ್ತಿಕ್‌ ಹೆಸರುಗಳು ಮುನ್ನೆಲೆಗೆ ಬಂದಿವೆ. ಇನ್ನು ಒಬಿಸಿ ಸಮುದಾಯದಿಂದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮತ್ತು ಈಡಿಗ ಸಮುದಾಯದ ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್‌ ಅಮಿನ್‌ಮಟ್ಟು ಹಾಗೂ ಹಿಂದುಳಿಗ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್‌ ದ್ವಾರಕಾನಾಥ್ ಅವರ ಹೆಸರು ಪ್ರಸ್ತಾಪವಾಗಿತ್ತು. ಹಾಗೆಯೇ ದಲಿತ ಸಮುದಾಯದಿಂದ ಡಿ.ಜಿ.ಸಾಗರ್ ಅಥವಾ ಮೈಸೂರು ಮೂಲದ ಪತ್ರಕರ್ತ ಶಿವಕುಮಾರ್ ಅವರನ್ನು ಪರಿಗಣಿಸುವಂತೆ ಸೂಚಿಸಲಾಗಿತ್ತು.

ಈಗ ಅಂತಿಮವಾಗಿ ಡಿ.ಜಿ.ಸಾಗರ್, ದಿನೇಶ್ ಅಮಿನ್‌ಮಟ್ಟು, ರಮೇಶ್ ಬಾಬು ಹಾಗೂ ಆರತಿ ಕೃಷ್ಣ ಹೆಸರುಗಳು ಹೈಕಮಾಂಡ್‌ ಕಡೆಯಿಂದ ಫೈನಲ್ ಆಗಿದೆ ಎಂದು ಮೂಲಗಳು ಖಚಿತಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X