ಇಬ್ರಾಹಿಂ ಅವರು ತಾವೇ ಒರಿಜಿನಲ್ ಅಂತಾ ಬೋರ್ಡ್ ಹಾಕಿಕೊಳ್ಳಲಿ: ಕುಮಾರಸ್ವಾಮಿ

Date:

  • ನಮಗೆ ಏನು ಮಾಡಬೇಕೋ, ಸರಿ ಮಾಡ್ತೀವಿ
  • ಇಬ್ರಾಹಿಂ ಫ್ರೀ ಇದ್ದಾರೆ ಮಾತನಾಡಿಕೊಳ್ಳಲಿ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ದಿನೇ ದಿನೇ ಹೆಚ್ಚುತ್ತಿದೆ.

- Advertisement -

ಸಿಎಂ ಇಬ್ರಾಹಿಂ ಅವರ ಹೇಳಿಕೆಗೆ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಸಿಟ್ಟಿನಿಂದಲೇ ಉತ್ತರಿಸಿದ್ದಾರೆ. “ಇಬ್ರಾಹಿಂ ಅವರೇ ಒರಿಜಿನಲ್ ಅಂತಾ ಬೋರ್ಡ್ ಹಾಕಿಕೊಳ್ಳಲಿ. ಅವರೇ ಒರಿಜಿನಲ್ ಅಂತಾ ಬರೆದುಕೊಳ್ಳಲಿ, ಅವರು ಏನು ಬೇಕಾದ್ರು ಮಾಡ್ಕೊಳ್ಳಿ, ಅವರಿಗೆ ಬಿಟ್ಟಿದ್ದು. ದಯವಿಟ್ಟು ಇಂತಾ ಸಿಲ್ಲಿ ವಿಚಾರಕ್ಕೆ ಬರಬೇಡಿ” ಎಂದು ಪತ್ರಕರ್ತರಿಗೆ ಗದರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

“ನಮಗೆ ಏನು ಮಾಡಬೇಕೋ, ಸರಿ ಮಾಡ್ತೀವಿ, ನೀವು ತಲೆಕೆಡಿಸಿಕೊಂಡು ಬಂದಿದ್ದೀರಾ. ಅವರು ಫ್ರೀ ಇದ್ದಾರೆ ಮಾತಾಡ್ಕೊಳ್ಳಿ. ನಮ್ಮ ಪಕ್ಷದಲ್ಲಿ ಇರುವ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಯಾರನ್ನು ಯಾರು ಉಚ್ಛಾಟನೆ ಮಾಡ್ತಾರೆ ನೋಡುವ್ರಂತೆ” ಎಂದರು.

ಇಬ್ರಾಹಿಂ ಹೇಳಿದ್ದೇನು?

“ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಅದರ ಅಧ್ಯಕ್ಷನಾಗಿದ್ದೇನೆ. ಇದು ನನ್ನ ಮನೆ. ಮುಂದೇನಾಗುತ್ತದೆ ಅದನ್ನು ಪರದೆಯಲ್ಲಿ ನೋಡಿ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ‌ ತೆಗೆಯಲು ಸಾಧ್ಯವಿಲ್ಲ. ಹೊಸ ಸಮಿತಿ ರಚನೆ ಮಾಡಿ ಎಚ್‌ ಡಿ ಕುಮಾರಸ್ವಾಮಿ ಅವರನ್ನೇ ಉಚ್ಛಾಟನೆ ಮಾಡಲಾಗುವುದು” ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ಯಾರನ್ನು ಪಕ್ಷದಿಂದ ಉಚ್ಛಾಟನೆ ಮಾಡುತ್ತಾರೆ ನೋಡೋಣ: ಎಚ್‌.ಡಿ ರೇವಣ್ಣ

ಇಬ್ರಾಹಿಂ ವಿರುದ್ಧ ಸಮೃದ್ಧಿ ಮಂಜುನಾಥ್ ವಾಗ್ದಾಳಿ

“ಜೆಡಿಎಸ್ ನಲ್ಲಿ 19 ಶಾಸಕರು ಗೆದ್ದರೂ ನೋವಿನಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ಇಬ್ರಾಹಿಂ ಅವರ ತೆವಲುಗಳಿಗೆ‌ ಚಿಂತನ ಮಂಥನ ಕಾರ್ಯಕ್ರಮ‌ ಹಮ್ಮಿಕೊಳ್ಳುವುದು ಸೂಕ್ತವಲ್ಲ. ಇಬ್ರಾಹಿಂ ಅವರ ಗಮನಕ್ಕೆ ಬಾರೆದೆ ಪಕ್ಷದಲ್ಲಿ‌ ಏನು ನಡೆದಿಲ್ಲ. ಮತ್ತೊಂದು ದಿನ ನಾನು ಬಾಯಿ ಬಿಚ್ಚಬೇಕಾಗುತ್ತದೆ ಎಂದು ಶಾಸಕ ಸಮೃದ್ಧಿ ಮಂಜುನಾಥ್ ಕಿಡಿಕಾರಿದ್ದಾರೆ.

“ಹೈಕಮಾಂಡ್ ನನಗೆ ಬಾಯಿ ಬಿಚ್ಚಲು ಅನುಮತಿ ನೀಡಿಲ್ಲ. ಅವರ ತೆವಲುಗೋಸ್ಕರ ಮಾತಬಾಡಬಾರದು. ಶಾಸಕರ‌ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ನಿಖಿಲ್ ಕುಮಾರಸ್ವಾಮಿ‌ ಸೋತ ಕಾರಣ ನೈತಿಕ ಹೊಣೆ ಹೊತ್ತು ಯುವ ಘಟಕಕ್ಕೆ ರಾಜೀನಾಮೆ ಕೊಟ್ಟರು. ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ಯಾರು? ಕುಮಾರಸ್ವಾಮಿ‌ ಅವರನ್ನು ‌ಪಕ್ಷದಿಂದ‌ ಉಚ್ಚಾಟನೆ ಮಾಡುವುದಾಗಿ ಹೇಳುವ ಇಬ್ರಾಹಿಂ, ಮೊದಲು ಅವರ ಆತ್ಮಸಾಕ್ಷಿಯನ್ನು ಮುಟ್ಟಿ ನೋಡಿಕೊಳ್ಳಲಿ” ಎಂದು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದ ಮೂಲಕ ಆಕ್ರೋಶ ಹೊರಹಾಕಿ: ಕಾಂಗ್ರೆಸ್ ಕರೆ

ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ, ಇದರಿಂದ ಸಾಲದ ಸುಳಿಯಲ್ಲಿ ಸಿಲುಕಿ ಸಾಮಾನ್ಯ...

​’ಶಾಲೆಗಳ ಅಭಿವೃದ್ಧಿ ನೆಪದಲ್ಲಿ ಕಾರ್ಪೊರೇಟ್‌ಗಳಿಗೆ ಮಣೆ’: ರಾಜ್ಯ ಸರ್ಕಾರದ ವಿರುದ್ಧ ಎಸ್‌ಐಒ ಆಕ್ರೋಶ

'ಶಾಲಾ ಅಭಿವೃದ್ಧಿ'ಯ ಆಕರ್ಷಕ ನೆಪವೊಡ್ಡಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ ಕಾರ್ಪೊರೇಟ್...

ಅಡ್ಡಂಡ ಕಾರ್ಯಪ್ಪರ ‘ಗಾಂಧಿ ಹತ್ಯೆಯ ಸತ್ಯ’ ನಾಟಕ, ಪುಸ್ತಕ ನಿಷೇಧಕ್ಕೆ ಆಗ್ರಹ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ ಕಾರ್ಯಪ್ಪ ಅವರು ರಚಿಸಿರುವ...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು...