ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಬಿಜೆಪಿ ಸಾಬೀತುಪಡಿಸಲಿ: ಸಿದ್ದರಾಮಯ್ಯ ಸವಾಲು

Date:

  • ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬರ ಪರಿಹಾರ ನೀಡಲು ಕೇಂದ್ರ ವಿಳಂಬ ನೀತಿ ತೋರುತ್ತಿದೆ; ಇದಕ್ಕೆ ಕಾರಣವೇನು?

ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಅವರು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

- Advertisement -

ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ ಎಂಬ ಪ್ರತಿಪಕ್ಷ ನಾಯಕ ಆರ್ .ಅಶೋಕ್ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

“ಇದುವರೆಗೆ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದ್ದಾರೆ. ಇದರಲ್ಲಿ 1.14 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿದ್ದು, ಇನ್ನೂ 3 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿಸಲಾಗುವುದು. ಡಿಸೆಂಬರ್ ಅಂತ್ಯದೊಳಗೆ ಗೃಹಲಕ್ಷ್ಮಿ ನೋಂದಾಯಿಸಿಕೊಂಡಿರುವವರಿಗೆ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ನೀಗಿಸಿ, ಹಣ ಒದಗಿಸಲು ಸೂಚನೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 4.34 ಕೋಟಿ ಜನರಿಗೆ ಪ್ರತಿ ಮಾಹೆ 170 ರೂ. ನೀಡಲಾಗುತ್ತಿದೆ. ಇದುವರೆಗೆ 1.50 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುತ್ತಿರುವುದು ಸುಳ್ಳು ಎಂದು ಬಿಜೆಪಿಯವರು ಸಾಬೀತುಪಡಿಸಲಿ” ಎಂದು ಸವಾಲು ಹಾಕಿದರು.

ಈ ಸುದ್ದಿ ಓದಿದ್ದೀರಾ? ಜನಸ್ಪಂದನ | ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳಿಂದ ಅಧಿಕಾರಿಗಳಿಗೆ ಹದಿನೈದು ದಿನಗಳ ಗಡುವು

ಕೇಂದ್ರದ ವಿಳಂಬಕ್ಕೆ ಕಾರಣವೇನು?

ಕೇಂದ್ರದಿಂದ ಬರ ಪರಿಹಾರ ಬಿಡುಗಡೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಉತ್ತರಿಸಿ, “ರಾಜ್ಯದಿಂದ ಪಡೆದ ಹಣವನ್ನೇ ಕೇಂದ್ರ ಸರ್ಕಾರ ಪರಿಹಾರವಾಗಿ ನೀಡುತ್ತದೆ. ಈ ಪರಿಹಾರವನ್ನು ನೀಡಲು ಕೇಂದ್ರ ವಿಳಂಬ ನೀತಿ ತೋರುತ್ತಿದೆ. ಈ ವಿಳಂಬಕ್ಕೆ ಕಾರಣವೇನು ? ಕರ್ನಾಟಕದಿಂದ ಸುಮಾರು 4 ಲಕ್ಷ ಕೋಟಿ ತೆರಿಗೆ ಹಣ ಕೇಂದ್ರಕ್ಕೆ ತಲುಪಿದರೂ, ರಾಜ್ಯಕ್ಕೆ ಪರಿಹಾರವಾಗಿ ಕೇವಲ 50 ರಿಂದ 60 ಸಾವಿರ ಕೋಟಿ ಬರುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...