ಒಳಮೀಸಲಾತಿ ಅನ್ವಯಿಸದೇ ಹೊರಡಿಸಿರುವ ನೇಮಕಾತಿ ಅಧಿಸೂಚನೆಗಳನ್ನು ಹಿಂಪಡೆಯಲು ಒತ್ತಾಯ; ರಾಜ್ಯಪಾಲರಿಗೆ ಪತ್ರ

Date:

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಅನ್ವಯಿಸದೇ ಹೊರಡಿಸಿರುವ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು ಹಾಗೂ ಒಳ ಮೀಸಲಾತಿ ಜಾರಿಗೊಳಿಸಲು ನಿರ್ದೇಶನ ನೀಡಬೇಕೆಂದು ಕರ್ನಾಟಕ ರಾಜ್ಯ ಯುವ ಸಮೂಹ ರಾಜ್ಯಪಾಲರನ್ನು ಒತ್ತಾಯಿಸಿದೆ. 

- Advertisement -

ಈ ಸಂಬಂಧ ಸಂಘದ ರಾಜ್ಯಾಧ್ಯಕ್ಷ ಎಸ್. ಸಂಗಮೇಶ್ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಅಜಿತ್ ಅವರು ರಾಜ್ಯಪಾಲರಿಗೆ ಮನವಿ ಪತ್ರ ಬರೆದಿದ್ದು, ರಾಜ್ಯ ಸರ್ಕಾರ 2023ರ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ವಿಧೇಯಕ ಮಂಡಿಸಿ, ಅನುಮೋದನೆ ಪಡೆದಿದೆ. ಜೊತೆಗೆ ರಾಜ್ಯಪಾಲರ ಅಂಕಿತ ಕೂಡ ದೊರೆತಿದೆ. ಆದಾಗ್ಯೂ, ಇಂದಿನವರೆಗೆ ಈ ವಿಧೇಯಕವನ್ನು ಗೆಜೆಟ್ನಲ್ಲಿ ಪ್ರಕಟಿಸದೇ ಸಂವಿಧಾನಬದ್ಧ ಪ್ರಕ್ರಿಯೆಯ ಉಲ್ಲಂಘನೆ ಮಾಡಿದೆ. ಇದು ಸಾಮಾಜಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇನ್ನೊಂದೆಡೆ, ಯಾವುದೇ ನ್ಯಾಯಾಲಯವು ಒಳ ಮೀಸಲಾತಿಯನ್ನು ಸ್ಥಗಿತಗೊಳಿಸುವ ಅಥವಾ ರದ್ದುಪಡಿಸುವ ಆದೇಶ ನೀಡದಿದ್ದರೂ ಸಹ, ಇದೇ ಫೆಬ್ರವರಿ 27ರಂದು ಹೊರಡಿಸಿರುವ ಸರ್ಕಾರದ ಆದೇಶದ ಮೂಲಕ ಒಳ ಮೀಸಲಾತಿಯನ್ನು ಉದ್ದೇಶಪೂರ್ವಕವಾಗಿ ತಪ್ಪಿಸಿ ನೇಮಕಾತಿ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ.

ಈ ಕ್ರಮದಿಂದ ಪರಿಶಿಷ್ಟ ಜಾತಿಗಳ, ವಿಶೇಷವಾಗಿ ಮಾದಿಗ ಸಮುದಾಯದ ಸಂವಿಧಾನಬದ್ಧ ಹಕ್ಕುಗಳನ್ನು ಕಡಿತಗೊಳಿಸುವ ಪ್ರಯತ್ನ ನಡೆಯುತ್ತಿದೆ. ಈ ಸಮುದಾಯ ಸುಮಾರು 3,500ಕ್ಕೂ ಹೆಚ್ಚು ಹುದ್ದೆಗಳು ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಇದಲ್ಲದೇ, 2022ರ ಕಾಯ್ದೆ ಜಾರಿಯಲ್ಲಿರುವ ಸಂದರ್ಭದಲ್ಲೇ 1995ರ ಸರ್ಕಾರದ ಆದೇಶವನ್ನು ಆಧರಿಸಿ 56,432 ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿರುವುದು ಕಾನೂನುಬಾಹಿರವಾಗಿದೆ. ಅನ್ಯಾಯ ಮತ್ತು ಉದ್ದೇಶಪೂರ್ವಕ ಆಡಳಿತಾತ್ಮಕ ದುರುಪಯೋಗ ಆಗಿದೆ ಎಂದು ಅವರು ಗಂಭೀರವಾಗಿ ಆಪಾದಿಸಿದ್ದಾರೆ. 

ರಾಜ್ಯಪಾಲರಿಂದ ಅಂಗೀಕಾರ ಪಡೆದ ವಿಧೇಯಕವನ್ನು ತಕ್ಷಣ ಗೆಜೆಟ್ನಲ್ಲಿ ಪ್ರಕಟಿಸಬೇಕು. ನೇಮಕಾತಿ ಆದೇಶಗಳನ್ನು ತಕ್ಷಣವೇ ರದ್ದುಪಡಿಸಬೇಕು. ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಎಲ್ಲಾ ನೇಮಕಾತಿಗಳನ್ನು ಒಳ ಮೀಸಲಾತಿಯೊಂದಿಗೆ ಮಾತ್ರ ನಡೆಸಬೇಕು. ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಳ್ಳಬೇಕು.

ಪರಿಶಿಷ್ಟ ಜಾತಿಗಳ ಎಲ್ಲಾ ಕ್ಷೇತ್ರಗಳಲ್ಲಿ ಒಳ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಶಿಕ್ಷಣ ಹಾಗೂ ಉದ್ಯೋಗದ ಎಲ್ಲಾ ಹಂತಗಳಲ್ಲಿ ಒಳ ಮೀಸಲಾತಿ ಕಡ್ಡಾಯಗೊಳಿಸಬೇಕು. 2001ರಿಂದ ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲು ವಿಶೇಷ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸರ್ಕಾರದ ತೀರ್ಮಾನದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

canvas
eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...