ರಾಜ್ಯದ ವಿವಿಧೆಡೆ ಹಗುರ ಮಳೆ, ಬಲವಾದ ಗಾಳಿ ಬೀಸುವ ಸಾಧ್ಯತೆ: ಕರಾವಳಿ, ಮಲೆನಾಡಿನಲ್ಲಿ ಬಿಟ್ಟೂಬಿಡದ ಮಳೆ

Date:

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕರಾವಳಿ, ಮಲೆನಾಡು ಭಾಗಗಳಲ್ಲಿ ಬಹು ದಿನಗಳಿಂದ ಬಿಟ್ಟೂಬಿಡದೆ ಮಳೆ ಹಿಡಿದಿದೆ. ಇಂದೂ ಕೂಡ ಅದೇ ಪರಿಸ್ಥಿತಿ ಇರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮತ್ತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಬಹುತೇಕ ಎಲ್ಲ ಭಾಗಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಈ ಮೂರೂ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಬಲವಾದ ಗಾಳಿ ಬೀಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಕೇವಲ ಬಲವಾದ ಗಾಳಿ ಮಾತ್ರ ಬೀಸಲಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಅಥವಾ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ 30-40 ಕಿಮೀ ವೇಗದ ಗಾಳಿ ಇರಲಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣವಾಗಿದ್ದರೂ, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಬಲವಾದ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಬಯಲು ಸೀಮೆ ಜಿಲ್ಲೆಗಳಲ್ಲಿ ಗಾಳಿಯ ತೀವ್ರತೆ ಹೆಚ್ಚಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ.

ಈ ಸುದ್ದಿ ಓದಿದ್ದೀರಾ? ​ಮೈಸೂರು ವಿವಿ ಎಸ್‌ಸಿ-ಎಸ್‌ಟಿ ಸಂಶೋಧಕರಿಗೆ ಶಿಷ್ಯವೇತನ: ಬಿಕ್ಕಟ್ಟು ಬಗೆಹರಿಸಿದ ಸಚಿವ ಯತೀಂದ್ರ

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...